ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳಿಗೆ ಮಹತ್ತರ ಪಾತ್ರ: ಸುರೇಶ್ ಚೆರಿಯಮನೆ

KannadaprabhaNewsNetwork |  
Published : Mar 29, 2026, 02:45 AM IST
ಪೋಟೋ:- ಭಾರತಿ ವಿದ್ಯಾ ಸಂಸ್ಥೆಯ ಪದವಿ ಕಾಲೇಜಿನ ಎನ್ನೆಸೆಸ್ ವಾರ್ಷಿಕ ಶಿಬಿರದಲ್ಲಿ ಪತ್ರಿಕಾ ಮಾಧ್ಯಮ ಕುರಿತು ಸಂಪನ್ಮೂಲ ವ್ಯಕ್ತಿ ಸಿ.ಕೆ.ಸುರೇಶ್ ಮಾತನಾಡುತ್ತಿರುವುದು | Kannada Prabha

ಸಾರಾಂಶ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ಮಾಧ್ಯಮಗಳು ಪ್ರಮುಖ ಪಾತ್ರವಹಿಸುತ್ತದೆ ಎಂದು ಸಂಪನ್ಮೂಲ ವ್ಯಕ್ತಿ, ಪತ್ರಕರ್ತ ಸುರೇಶ್ ಚೆರಿಯಮನೆ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ಮಾಧ್ಯಮಗಳು ಪ್ರಮುಖ ಪಾತ್ರವಹಿಸುತ್ತದೆ ಎಂದು ಸಂಪನ್ಮೂಲ ವ್ಯಕ್ತಿ, ಪತ್ರಕರ್ತ ಸುರೇಶ್ ಚೆರಿಯಮನೆ ಅಭಿಪ್ರಾಯಪಟ್ಟರು. ಅವರು ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ಥಳೀಯ ಭಾರತಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ನಡೆಯುತ್ತಿರುವ ವಾರ್ಷಿಕ ಶಿಬಿರದಲ್ಲಿ ‘ಪ್ರಸ್ತುತ ಸಮಾಜದಲ್ಲಿ ಪತ್ರಿಕಾ ಮಾಧ್ಯಮಗಳ ಪಾತ್ರ’ ಎಂಬ ವಿಷಯದ ಕುರಿತು ಮಾತನಾಡಿದರು.

ಶತಮಾನಗಳ ಹಿಂದೆಯೆ ಸಮಾಜದಲ್ಲಿನ ಆಗು ಹೋಗುಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು ಹಸ್ತಾಕ್ಷರದ ಪತ್ರಿಕೆ ಪ್ರಾರಂಭಗೊಳ್ಳಲು ನಾಂದಿಯಾಯಿತು. ಸಮಾಜ ಬದಲಾದಂತೆ ಪತ್ರಿಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಲ್ಕನೆ ಅಂಗವಾಗಿ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಸಮಾಜದಲ್ಲಿ ಮುದ್ರಣ, ದೃಶ್ಯ ಮಾಧ್ಯಮ ಸಾಮಾಜಿಕ ಜಾಲತಾಣಗಳು ಸಮೂಹ ಮಾಧ್ಯಮಗಳಾಗಿವೆ ಎಂದರು. ಇಂದು ಸಾಮಾಜಿಕ ಜಾಲತಾಣಗಳು ಎಐ ನಂತಹ ತ್ರಂತ್ರಜ್ಞಾನದ ಮೂಲಕ ಕೃತಕ ದೃಶ್ಯಗಳನ್ನು ಸೃಷ್ಟಿಸುತ್ತಿರುವುದು ಮಾಧ್ಯಮ ಕ್ಷೇತ್ರಕ್ಕೆ ಮಾರಕವಾಗಿದೆ. ಇವುಗಳಿಂದ ಸಮಾಜದಲ್ಲಿ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಬೇಸರ ವ್ಯಕ್ತ ಪಡಿಸಿದರು. ಇಂದು ಪತ್ರಿಕೆಗಳನ್ನು ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಈ ನಿಟ್ಟನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಜನರು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಜೆ.ಪಿ.ಕವಿತ-ವಿದ್ಯಾರ್ಥಿಗಳಲ್ಲಿ ಹುರುಪಿದ್ದರೆ ಉತ್ತಮ ವಿದ್ಯಾರ್ಥಿಯಾಗಿ ಹೊರ ಹೊಮ್ಮಲು ಸಾಧ್ಯವಾಗುತ್ತದೆ. ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಳ್ಳುವುದ್ದರಿಂದ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಾಸಗೊಳ್ಳುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ಹರೀಶ್ ಕುಮಾರ್ ಮಾಹಿತಿ ನೀಡಿದರು. ವೇದಿಕೆಯಲ್ಲಿ ಎಸ್‍ಡಿಎಂಸಿ ಉಪಾಧ್ಯಕ್ಷ ಮದನ್, ಸದಸ್ಯರಾದ ಶಶಿಕಲಾ, ಅಶ್ವಿತ ಉಪನ್ಯಾಸಕ ಡಿ.ಇ.ಸುರೇಂದ್ರ, ಬಿ.ಎಂ.ಪೊನ್ನಪ್ಪ, ಪತ್ರಕರ್ತ ದಿನೇಶ್ ಮಾಲಂಬಿ ಮುಂತಾದವರು ಹಾಜರಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದೂ ಎನ್ನುವುದು ಜೀವನ ಸ್ವಭಾವ, ಆಚರಣೆಯಲ್ಲ
ಬಂಟ್ವಾಳ ಶಾಸಕರು ಮಂಡಿಸಿದ ಹಕ್ಕುಚ್ಯುತಿಯಿಂದ ನೋವಾಗಿದೆ: ರಮಾನಾಥ ರೈ