)
* ಅರ್ಜಿ ಅಹ್ವಾನ
ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ, ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಕಾರ್ಯನಿರತ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾಧ್ಯಮ ಮಾನ್ಯತೆ ಕಾರ್ಡ್ ಹೊಂದಿರುವ ಕಾರ್ಯನಿರತ ಪತ್ರಕರ್ತರಿಗೆ ‘2026-27ನೇ ಸಾಲಿಗೆ ಮೀಡಿಯಾ ಕಿಟ್’ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಆಯುಕ್ತರಾದ ಎಂ.ಎನ್.ಅನುಚೇತ್, ಐ.ಪಿ.ಎಸ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಇಲಾಖೆಯ ಹವ್ಯಾಸಿ ಮಾನ್ಯತೆ ಕಾರ್ಡ್ ಹೊಂದಿರುವ ಪತ್ರಕರ್ತರು ಹಾಗೂ ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಾಗೂ ಸರ್ಕಾರದ ವ್ಯಾಪ್ತಿಗೆ ಒಳಪಡುವ ಅಕಾಡೆಮಿ / ನಿಗಮ / ಮಂಡಳಿ / ಇತ್ಯಾದಿ ಸರ್ಕಾರಿ ಸಂಸ್ಥೆಗಳಿಂದ ಈಗಾಗಲೇ ಮೀಡಿಯಾ ಕಿಟ್ ಪಡೆದಿರುವ ಕಾರ್ಯನಿರತ ಪತ್ರಕರ್ತರು ಮತ್ತೇ ಈ ಸಾಲಿನ ಮೀಡಿಯಾ ಕಿಟ್‌ಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.2026 - 27ನೇ ಸಾಲಿಗೆ ಮಾನ್ಯತೆ ಕಾರ್ಡ್ ಪಡೆದ ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರಿನಲ್ಲಿನ ಮಾನ್ಯತೆ ಹೊಂದಿದ ಪತ್ರಕರ್ತರು ಕೇಂದ್ರ ಕಚೇರಿಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಹಾಗೂ ಜಿಲ್ಲಾ ಪತ್ರಕರ್ತರು ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳುವುದು ಅಥವಾ ಇಲಾಖೆಯ ವೆಬ್‌ಸೈಟ್ https:// dipr.karnataka.gov.in ನ ಸುದ್ದಿ ಮತ್ತು ಪತ್ರಿಕಾ ಶಾಖೆಯ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.
ಇಲಾಖೆಯ ಮಾನ್ಯತಾ ಕಾರ್ಡು (Accriditation Card) ಹೊಂದಿರುವ ಕಾರ್ಯನಿರತ ಪತ್ರಕರ್ತರು ತಮ್ಮ ಹೆಸರು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ಸ್ವ - ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸ ಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 2026-27ನೇ ಸಾಲಿನಲ್ಲಿ ವಿತರಿಸಲಾಗಿರುವ ಮಾಧ್ಯಮ ಮಾನ್ಯತಾ ಕಾರ್ಡು ಹೊಂದಿರುವ ಬಗ್ಗೆ ದೃಢೀಕೃತ ಜೆರಾಕ್ಸ್ ಪ್ರತಿ, ಜಾತಿ ದೃಢೀಕರಣಕ್ಕಾಗಿ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು.
ಬೆಂಗಳೂರು ನಗರದಿಂದ ಅರ್ಜಿ ಸಲ್ಲಿಸುವ ಮಾಧ್ಯಮ ಪ್ರತಿನಿಧಿಗಳು ಕೇಂದ್ರ ಕಚೇರಿಯ ಸುದ್ದಿ ಮತ್ತು ಪತ್ರಿಕಾ ಶಾಖೆಗೆ ಸಲ್ಲಿಸುವುದು. ಲಕೋಟೆಯ ಮೇಲ್ಬಾಗದಲ್ಲಿ “ಮಾನ್ಯತೆ ಹೊಂದಿರುವ ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ಮೀಡಿಯಾ ಕಿಟ್”ಗಾಗಿ ಅರ್ಜಿ ಎಂದು ನಮೂದಿಸಿರಬೇಕು.
---000---