ಸುದ್ದಿಗಳ ವಿಮರ್ಶಿಸಿ ಪ್ರಕಟಣೆ ಮಾಧ್ಯಮ ಜವಾಬ್ದಾರಿ: ಗಫೂರ್

KannadaprabhaNewsNetwork |  
Published : Jul 24, 2026, 01:30 AM IST
ಗಫೂರ್ | Kannada Prabha

ಸಾರಾಂಶ

ಇಂದಿನ ಡಿಜಿಟಲ್ ಯುಗದಲ್ಲಿ ಸುದ್ದಿಗಳ ಹರಿವು ಅತ್ಯಂತ ವೇಗವಾಗಿ ಹೆಚ್ಚುತ್ತಿದ್ದು, ಯಾವುದು ಸತ್ಯ ಮತ್ತು ಯಾವುದು ಸುಳ್ಳು ಎಂಬುದನ್ನು ಪರಿಶೀಲಿಸಿ ಜನರಿಗೆ ನಿಖರ ಮಾಹಿತಿ ತಲುಪಿಸುವುದು ಮಾಧ್ಯಮಗಳ ಪ್ರಮುಖ ಜವಾಬ್ದಾರಿ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.

ಕಾರ್ಕಳ: ಇಂದಿನ ಡಿಜಿಟಲ್ ಯುಗದಲ್ಲಿ ಸುದ್ದಿಗಳ ಹರಿವು ಅತ್ಯಂತ ವೇಗವಾಗಿ ಹೆಚ್ಚುತ್ತಿದ್ದು, ಯಾವುದು ಸತ್ಯ ಮತ್ತು ಯಾವುದು ಸುಳ್ಳು ಎಂಬುದನ್ನು ಪರಿಶೀಲಿಸಿ ಜನರಿಗೆ ನಿಖರ ಮಾಹಿತಿ ತಲುಪಿಸುವುದು ಮಾಧ್ಯಮಗಳ ಪ್ರಮುಖ ಜವಾಬ್ದಾರಿ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.ಗುರುವಾರ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ, ಕ್ರಿಯೆಟಿವ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕ್ರಿಯೆಟಿವ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿದ್ದ ಹಿರಿಯ ಪತ್ರಕರ್ತ ಬಿಪಿನ್ ಚಂದ್ರಪಾಲ್ ನಕ್ರೆ ಮಾತನಾಡಿ, ಡಿಜಿಟಲ್ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳು ವೇಗವಾಗಿ ಹರಡುವ ಅಪಾಯವಿದೆ. ಆದರೆ ಮುದ್ರಣ ಪತ್ರಿಕೆಗಳಲ್ಲಿ ಸತ್ಯಶೋಧನೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ ಎಂದರು.ಕ್ರಿಯೆಟಿವ್ ಶಿಕ್ಷಣ ಸಂಸ್ಥೆಯ ಸಹಸಂಸ್ಥಾಪಕ ಗಣಪತಿ ಕೆ.ಎಸ್. ಮಾತನಾಡಿ, ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಾರೆ ಎಂದರು.ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಜಿ. ಸುಬ್ರಹ್ಮಣ್ಯ ಕುರ್ಯ ಪತ್ರಿಕೆ ಓದುವ ಅಭಿರುಚಿ ಹೆಚ್ಚಿಸುವ ಅಗತ್ಯವನ್ನು ಒತ್ತಿ ಹೇಳಿದರು. ರಾಜ್ಯ ಸಮಿತಿ ಸದಸ್ಯ ಆಸ್ಟ್ರೊ ಮೋಹನ್ ನವಮಾಧ್ಯಮಗಳ ಸವಾಲುಗಳ ಕುರಿತು ಮಾತನಾಡಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸಿದ್ದರು.ಪತ್ರಕರ್ತ ವಾಸುದೇವ ಭಟ್ ಪ್ರಾಸ್ತಾವಿಕ ಮಾತನಾಡಿದರು. ಕ್ರಿಯೆಟಿವ್ ಶಿಕ್ಷಣ ಸಂಸ್ಥೆಯ ಸಹಸಂಸ್ಥಾಪಕ ಅಶ್ವತ್ಥ್ ಎಸ್.ಎಲ್. ಅವರನ್ನು ಸನ್ಮಾನಿಸಲಾಯಿತು. ಅವರ ಪರವಾಗಿ ಗಣಪತಿ ಕೆ.ಎಸ್. ಗೌರವ ಸ್ವೀಕರಿಸಿದರು.ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಸಚ್ಚರಿಪೇಟೆ, ಕೋಶಾಧಿಕಾರಿ ಸತೀಶ್ ಶೆಟ್ಟಿ ವಾಮನಪದವು, ಜಿಲ್ಲಾ ಉಪಾಧ್ಯಕ್ಷ ಉದಯಕುಮಾರ್ ಮುಂಡ್ಕೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪ್ರತಿಭಾವಂತ ವಿದ್ಯಾರ್ಥಿಗಳಾದ ಪ್ರಜ್ಞಾ ರಾವ್ ಎಂ., ಶಿಥಿಲ್ ಎಸ್. ಶೆಟ್ಟಿ, ಸಮೀಕ್ಷಾ, ಐಪುನ್ ಮರಿಯಂ ಫಾತಿಮ ಹಾಗೂ ತನಿಷ್ ಕುಮಾರ್ ಅವರಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.ಉದಯಕುಮಾರ್ ಮುಂಡ್ಕೂರು ಸ್ವಾಗತಿಸಿದರು. ಹರೀಶ್ ಆಚಾರ್ಯ ನಿರೂಪಿಸಿದರು. ಚೈತ್ರಾ ಕಬ್ಬಿನಾಲೆ ನಿರ್ವಹಿಸಿ, ಅವಿನ್ ಶೆಟ್ಟಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾರಾಯಣಗುರು ನಿಗಮಕ್ಕೆ 500 ಕೋಟಿ ರು. ನೀಡದೆ ಸರ್ಕಾರ ವಂಚಿಸಿದೆ: ವಿಠಲ ಪೂಜಾರಿ
ಮಹಾರಾಷ್ಟ್ರ ತುಳುವ ಮಹಾಸಭೆ ಇಂಟರ್ನ್ಯಾಷನಲ್ ಅಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರಿ