ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಕರ್ನಾಟಕ ಸಂಘದ ಆವರಣದಲ್ಲಿರುವ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ನೀಡಿ ಅವರು ಮಾತನಾಡಿದರು.
ಭಾರತದಲ್ಲಿ ೧೪೦ ಕೋಟಿ ಹಾಗೂ ಕರ್ನಾಟದಲ್ಲಿ ೭ ಕೋಟಿಯಷ್ಟು ಜನಸಂಖ್ಯೆ ಇದ್ದು, ರಾಜಕೀಯ ಮನಸ್ತಾಪಗಳು ಸಣ್ಣ ಪುಟ್ಟ ಘಟನೆಗಳು ನಡೆಯುತ್ತವೆ. ಮಾಧ್ಯಮಗಳು ಸಣ್ಣ-ಪುಟ್ಟ ಘಟನೆಗಳನ್ನೇ ದೊಡ್ಡದಾಗಿ ಬಿಂಬಿಸುವ ಕೆಲಸ ಮಾಡಬಾರದು. ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುತ್ತದೆ ಎಂದರು.ಇತ್ತೀಚೆಗೆ ಮಾಧ್ಯಮಗಳು ಕಮರ್ಷಿಯಲ್ ಇನ್‌ಸ್ಟಿಟ್ಯೂಟ್‌ಗಳಾಗಿವೆ. ಮಾಧ್ಯಮ ಬಂಡವಾಳ ಶಾಹಿಗಳ ಕೈಯಲ್ಲಿ ಸಿಲುಕಿವೆ. ಆದ್ದರಿಂದ ಪತ್ರಿಕಾ ಧರ್ಮ ಪಾಲನೆ ಮಾಡುವುದು ಕಷ್ಟವಾಗುತ್ತಿದೆ. ಇದರಿಂದ ಸಾಮಾಜಿಕ ನ್ಯಾಯ ದೊರಕಿಸಲು ಸಾಧ್ಯವಾಗುತ್ತಿಲ್ಲ. ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಸಾಮಾಜಿಕ ಹಿತ ಕಾಪಾಡುವುದು ಮಾಧ್ಯಮಗಳ ಜವಾಬ್ದಾರಿ ಎಂದು ನುಡಿದರು.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಲು ಸರ್ಕಾರ ಮುಂದಾಗಿದೆ. ಇದರಲ್ಲಿ ಕೆಲ ನಿಬಂಧನೆಗಳನ್ನು ಸಡಿಲಗೊಳಿಸುವಂತೆ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಸಡಿಲಗೊಳಿಸುವುದಾಗಿ ಭರವಸೆ ನೀಡಿದರು.
ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಮಾತನಾಡಿ, ಮಾಧ್ಯಮಗಳು ಸಮಾಜ ಹಾಗೂ ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡಬೇಕು. ತಂತ್ರಜ್ಞಾನ ಬೆಳೆದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳು ಹೆಚ್ಚಾಗಿ ಹರಿದಾಡುತ್ತಿವೆ. ಸುಳ್ಳು ಸುದ್ದಿಗಳ ನಿಯಂತ್ರಣಕ್ಕೆ ‘ಫ್ಯಾಕ್ಟ್ ಚೆಕ್ ಕಮಿಟಿ’ ಮಾಡಲಾಗಿದೆ. ನಾವೇ ಕಲ್ಪನೆ ಮಾಡಿಕೊಂಡು ಸುದ್ದಿ ಮಾಡುವುದರಿಂದ ಸಾಕಷ್ಟು ದುಷ್ಪಾರಿಣಾಮಗಳಾಗುತ್ತಿವೆ ಎಂದು ಎಚ್ಚರಿಸಿದರು.
ಇದೇ ವೇಳೆ ವರ್ತಮಾನ ಪ್ರಾದೇಶಿಕ ದಿನಪತ್ರಿಕೆ ಸಂಪಾದಕ ಕೆ.ಎನ್.ರವಿ ಅವರಿಗೆ ಜೀವಮಾನ ಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಆಯ್ದ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ, ಕ್ರೀಡಾಕೂಟದ ವಿಜೇತರಿಗೆ ಬಹುಮಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತ್ತು.