ಕನ್ನಡಪ್ರಭ ವಾರ್ತೆ ಬೀದರ್
ಅವರು ಇಲ್ಲಿನ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಗಳ ಸಹಯೋಗದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪತ್ರಕರ್ತರಿಗೆ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಜನಾಭಿಪ್ರಾಯ ಮೂಡಿಸಿ ಸೂಕ್ತ ದಾರಿ ತೋರಿಸುವ ಪವಿತ್ರವಾದ ಮಾಧ್ಯಮದ ಈ ಕರ್ತವ್ಯ ಎಲ್ಲೋ ಒಂದು ಕಡೆ ಎಡವುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ. ಸುದ್ದಿಯಲ್ಲಿ ನಿಖರತೆ ಹಾಗೂ ಪರಿಣಾಮಕಾರಿ ಸಂವಹನ ಬೇಕು, ಅದಕ್ಕಾಗಿ ಪತ್ರಕರ್ತರು ಹೆಚ್ಚು ಹೆಚ್ಚು ತರಬೇತಿಗಳಲ್ಲಿ ಪಾಲ್ಗೊಳ್ಳಲಿ ಎಂದು ಹೇಳಿದರು.ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸುವುದರ ಜೊತೆಗೆ ಈ ಅಂಗಗಳ ನ್ಯೂನ್ಯತೆಯನ್ನು ಎತ್ತಿ ಹಿಡಿಯುವ ಅಷ್ಟೇ ಅಲ್ಲ ಪ್ರಗತಿದಾಯಕ ಕಾರ್ಯ ಮಾಡಿದರೆ ಅವನ್ನು ಪ್ರಶಂಸಿಸುವ ಕಾರ್ಯ ಮಾಧ್ಯಮಗಳು ಮಾಡುತ್ತವೆ ಎಂದರು.
ಕಲ್ಯಾಣ ಕರ್ನಾಟಕದ ಭಾಗದ ಸುಮಾರು 200ಕ್ಕೂ ಅಧಿಕ ಪತ್ರಕರ್ತರು ತರಬೇತಿಯಲ್ಲಿ ಭಾಗವಹಿಸಿದ್ದರು.
ಹಸಿರು ಹೊದಿಕೆ ಹೆಚ್ಚಳಕ್ಕಾಗಿ 5 ಜಿಲ್ಲೆಗಳಿಗೆ 50 ಕೋಟಿ ರು.ಅಧಿಕ ಡಿಎಂಎಫ್ ನಿಧಿ ಹೊಂದಿರುವ ಬಳ್ಳಾರಿ ಹಾಗೂ ವಿಜಯನಗರ ಹೊರತುಪಡಿಸಿ ಕಲ್ಯಾಣ ಕರ್ನಾಟಕ ಭಾಗದ ಉಳಿದ ಐದು ಜಿಲ್ಲೆಗಳಲ್ಲಿ ಹಸಿರು ಹೊದಿಕೆ ಹೆಚ್ಚಳಕ್ಕಾಗಿ 50ಕೋಟಿ ರು.ಗಳ ಅನುದಾನ ಬಿಡುಗಡೆ ಮಾಡಿ ಕೋಟ್ಯಾಂತರ ಸಸಿಗಳನ್ನು ಬೆಳೆಸುವ ಯೋಜನೆಗೆ ನಿರ್ಧರಿಸಲಾಗಿದೆ. ಮುಂದಿನ ಪೀಳಿಗೆಗೆ ಆಮ್ಲಜನಕದ ಕೊರತೆ ಆಗದಂತೆ ತಡೆಯಲು ರಾಜ್ಯದಲ್ಲಿ 15 ಕೋಟಿ ಸಸಿಗಳನ್ನು ನೆಡಲಾಗಿದೆ. ಬೀದರ್ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ 35 ಲಕ್ಷ ಸಸಿಗಳನ್ನು ನೆಡಲಾಗಿದೆ ಎಂದರು.
ಮಣ್ಣಿನ ಗಣೇಶನ ಕೂರಿಸಿ: ಗಣೇಶ ಚತುರ್ಥಿಗೆ ಪಿಒಪಿ ಗಣೇಶ ಬಳಸದೇ ಮಣ್ಣಿನ ಪರಿಸರ ಸ್ನೇಹಿ ಗಣೇಶ ಕೂರಿಸುವ ಕೆಲಸ ಮಾಡಬೇಕು. ಧಾರ್ಮಿಕ ವಿಚಾರಗಳನ್ನು ಉಳ್ಳ ವರು ಸಹ ಅನೇಕ ಜನ ಮಣ್ಣಿನ ಗಣಪತಿ ಬಳಸುತ್ತಾರೆ. ಜನರಿಗೆ ಮಾರಕ ಆಗಿರುವ ಪಿಒಪಿ ಗಣಪತಿ ಬಳಸದೆ ಮಣ್ಣಿನ ಗಣಪತಿ ಕೂರಿಸಿ ಪರಿಸರ ಸ್ನೇಹಿ ಗಣೇಶ ಉತ್ಸವ ಆಚರಣೆ ಮಾಡಬೇಕು ಎಂದು ಸಲಹೆ ನೀಡಿದರು.