ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ವಿಶೇಷ ಅಭಿಯಾನ-ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ 2.0 90 ದಿನಗಳ ಡ್ರೈವ್ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ನ್ಯಾಯಾಲಯಗಳ ಆವರಣದಲ್ಲಿರುವ ಮಧ್ಯಸ್ಥಿಕೆ ಕೇಂದ್ರದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜ. 2 ರಿಂದ ಏಪ್ರಿಲ್ 2ರವರೆಗೆ ಮಧ್ಯಸ್ಥಿಕೆ ಅಭಿಯಾನ 2.0ವನ್ನು 90 ದಿನಗಳ ಕಾಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸ ಮಾತನಾಡಿ, ಈ ಅಭಿಯಾನದಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣ-ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ, ಮೋಟಾರು ಅಪಘಾತ ನ್ಯಾಯಾಧೀಕರಣದ ಪ್ರಕರಣ, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಭೂ-ಸ್ವಾಧೀನ, ವಿಭಾಗ ಪ್ರಕರಣಗಳು, ಕಾರ್ಮಿಕ ವಿವಾದಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣ, ಜಿಲ್ಲಾ ಗ್ರಾಹಕರ ಪರಿಹಾರ ಆಯೋಗದಲ್ಲಿನ ಪ್ರಕರಣ, ರಾಜಿಯಾಗಬಲ್ಲ ಸಿವಿಲ್ ಮತ್ತು ಅಪರಾಧಿಕ ಪ್ರಕರಣಗಳು ಸೇರಿದಂತೆ ಮತ್ತಿತರ ಸಿವಿಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುವುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.