ಕನ್ನಡಪ್ರಭ ವಾರ್ತೆ ಬೆಂಗಳೂರು
ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಸಚಿವ ಡಾ। ಶರಣ್ ಪ್ರಕಾಶ್ ಪಾಟೀಲ್ ಅವರು, ವೈದ್ಯಕೀಯ ಕೋರ್ಸ್‌ಗಳ ಶುಲ್ಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬ ವಿಷಯವನ್ನು ಶನಿವಾರ ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟಪಡಿಸಿದರು.
ಖಾಸಗಿ ಕಾಲೇಜುಗಳು ಶೇ.10 ರಿಂದ ಶೇ.15 ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ ರಾಜ್ಯ ಸರ್ಕಾರದ ಕಳೆದ ವರ್ಷ 10% ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಆದರೆ ಈ ವರ್ಷ ಯಾವುದೇ ಹೆಚ್ಚಳಕ್ಕೆ ಅವಕಾಶವಿಲ್ಲ ಎಂದು ಸಚಿವರು ತಿಳಿಸಿದರು.ಶುಲ್ಕ ಏರಿಕೆ ವಿಷಯವನ್ನು ಸಭೆಯಲ್ಲಿ ಪ್ರಸ್ತಾಪಿಸಿದಾಗ ಕೂಡಲೇ ಆಕ್ಷೇಪ ವ್ಯಕ್ತಪಡಿಸಿದ್ದೇನೆ. ಕಳೆದ ವರ್ಷ 10% ಶುಲ್ಕ ಹೆಚ್ಚಳವಾಗಿತ್ತು. ಈ ವರ್ಷದಲ್ಲಿ ಯಾವುದೇ ಹೆಚ್ಚಳವಿಲ್ಲ. ಈ ಕುರಿತು ಒಪ್ಪಂದಕ್ಕೆ ಅತಿ ಶೀಘ್ರದಲ್ಲೇ ಸಹಿ ಹಾಕಲಾಗುವುದು ಎಂದು ಸಚಿವರು ಹೇಳಿದ್ದಾರೆ.