ವೈದ್ಯಕೀಯ ರಸಪ್ರಶ್ನೆ: ಕೆಎಂಸಿ, ಕಣಚೂರು, ಎಜೆಗೆ ಪ್ರಶಸ್ತಿ

KannadaprabhaNewsNetwork | Published : May 19, 2025 12:19 AM
Follow Us

ಸಾರಾಂಶ

ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯಶಾಸ್ತ್ರ ವಿಭಾಗ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ 4ನೇ ವರ್ಷದ ರಾಜ್ಯ ಮಟ್ಟದ ಅಂತರ್ ವೈದ್ಯಕೀಯ ಕಾಲೇಜು ರಸಪ್ರಶ್ನೆ ಸ್ಪರ್ಧಾಕೂಟ ‘ಕಿಮ್ಸ್ ಪಿ.ಜಿ. ಮೆಡಿಕ್ವಿಜ್- 2025’ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯಶಾಸ್ತ್ರ ವಿಭಾಗ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ 4ನೇ ವರ್ಷದ ರಾಜ್ಯ ಮಟ್ಟದ ಅಂತರ್ ವೈದ್ಯಕೀಯ ಕಾಲೇಜು ರಸಪ್ರಶ್ನೆ ಸ್ಪರ್ಧಾಕೂಟ ‘ಕಿಮ್ಸ್ ಪಿ.ಜಿ. ಮೆಡಿಕ್ವಿಜ್- 2025’ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಸ್ಪರ್ಧಾ ಕೂಟದಲ್ಲಿ ಕೆಎಂಸಿ ಮಣಿಪಾಲ ತಂಡವನ್ನು ಪ್ರತಿನಿಧಿಸಿದ ಡಾ. ಅದಿಥಿ ರಾವ್ ಮತ್ತು ಡಾ. ಸಾಯಿ ಭವಾನಿ ರೆಡ್ಡಿ ತಂಡ ಪ್ರಥಮ ಸ್ಥಾನ ಗಳಿಸಿ ಪ್ರತಿಷ್ಠಿತ ಮೆಡಿಕ್ವಿಜ್ ಪ್ರಶಸ್ತಿ ಪಡೆಯಿತು. ಕಣಚೂರು ವೈದ್ಯಕೀಯ ಕಾಲೇಜನ್ನು ಪ್ರತಿನಿಧಿಸಿದ ಡಾ. ವಿನಾಯಕ್ ಎಸ್.ಕೆ. ಮತ್ತು ಡಾ. ರಾಘವೇಂದ್ರ ಡಿ. ತಂಡ ದ್ವಿತೀಯ ಸ್ಥಾನ, ತೃತೀಯ ಸ್ಥಾನವನ್ನು ನಗರದ ಎ.ಜೆ. ವ್ಯದ್ಯಕೀಯ ಕಾಲೇಜಿನ ಡಾ. ವರುಣ್ ಶೆಟ್ಟಿ ಮತ್ತು ಡಾ. ಅಭಿನ್ ರೈ ಪಡೆದರು.

ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆ ಅಧ್ಯಕ್ಷ ಪ್ರೊ.ಡಾ. ಮೊಹಮ್ಮದ್ ಇಸ್ಮಯಿಲ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ವೃದ್ಧಿಸಿಕೊಂಡರೆ ಭವಿಷ್ಯದ ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ಸಲಹೆ ನೀಡಿದರು.

ಕಣಚೂರು ವೈದ್ಯಕೀಯ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಾ. ಶಹನವಾಜ್ ಮಾಣಿಪಾಡಿ ಮತ್ತು ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ. ಹರೀಶ್ ಶೆಟ್ಟಿ, ಸಲಹಾ ಸಮಿತಿ ಸದಸ್ಯ ಪ್ರೊ.ಡಾ.ಎಂ.ವಿ. ಪ್ರಭು ಇದ್ದರು. ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಡಾ. ದೇವದಾಸ್ ರೈ ನಿರೂಪಿಸಿದರು.

ಅವಿಭಜಿತ ದ.ಕ. ಜಿಲ್ಲೆಯ ವಿವಿಧ ವೈದ್ಯಕೀಯ ಶಿಕ್ಷಣ ಕಾಲೇಜಿನ 28 ತಂಡಗಳು ನಿರ್ಣಾಯಕ ಮತ್ತು ಅಂತಿಮ ಸುತ್ತಿಗೆ ಪ್ರವೇಶ ಪಡೆದಿದ್ದವು. ಎಂ.ವಿ. ಮಲ್ಯ ಅವರು ಬಹುಮಾನಗಳನ್ನು ಪ್ರಾಯೋಜಿಸಿದ್ದರು.