ಚಿತ್ರದುರ್ಗ: ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯಲ್ಲಿ ಎರಡನೇ ವರ್ಷದ ಮೆಡಿಕಲ್ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾಸನ ಮೂಲದ ಮನೋಜ್(22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮೆಡಿಕಲ್ ಕಾಲೇಜಿನ ಹಾಸ್ಟೆಲ್ ನಲ್ಲಿ ಉದ್ದನೆಯ ಸೀರೆ ಮಾದರಿಯ ಬಟ್ಟೆಯಿಂದ ಫ್ಯಾನ್ ಹುಕ್ಕಿಗೆ ನೇಣು ಬಿಗಿದುಕೊಂಡಿದ್ದಾನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದು, ಓದುವ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಕೋಟೆ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಪೋಟೋ:
ಮನೋಜ್------------