ಬಡವರಿಗೆ ಕೈಗೆಟುಕುವ ಬೆಲೆಯಲ್ಲಿ ಜನೌಷಧಿ ಕೇಂದ್ರದಲ್ಲಿ ಔಷಧ

KannadaprabhaNewsNetwork |  
Published : Jan 05, 2025, 01:30 AM IST
ಹರಪನಹಳ್ಳಿ: ಜನೌಷಧಿಕೇಂದ್ರವನ್ನು ಉದ್ಘಾಟಿಸಿದ ತೆಗ್ಗಿನಮಠದಶ್ರೀಗಳನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ದುಪಯೋಗ ಪಡೆದುಕೊಂಡು ತಮ್ಮ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಬೇಕು

ಹರಪನಹಳ್ಳಿ: ಪಟ್ಟಣದ ಜೋಯಿಸಕೇರಿಯ ಹೊಸಪೇಟೆ ರಸ್ತೆ, ಸುವರ್ಣ ಬ್ಯಾಂಕ್‌ ಕಟ್ಟಡದಲ್ಲಿ ನೂತನವಾಗಿ ಆರಂಭವಾಗಿರುವ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ತೆಗ್ಗಿನಮಠದ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಬುಧವಾರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶ್ರೀಗಳು, ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಜನೌಷಧಿ ಕೇಂದ್ರದಲ್ಲಿ ಬಡವರಿಗೆ ಕೈಗೆಟುಕುವ ಬೆಲೆಯಲ್ಲಿ ಔಷಧಿಗಳು ದೊರೆಯುತ್ತವೆ ಎಂದು ಹೇಳಿದರು.

ಪಟ್ಟಣದಲ್ಲಿ ಇಂತಹ ಜನೌಷಧಿ ಕೇಂದ್ರಗಳು ಅಗತ್ಯವಾಗಿದ್ದು, ತಾಲೂಕಿನ ಜನತೆ ಇದರ ಸದುಪಯೋಗ ಪಡೆದುಕೊಂಡು ತಮ್ಮ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಬಳ್ಳಾರಿ ಮಾಜಿ ಸಂಸದ ವೈ. ದೇವೇಂದ್ರಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ. ನಮೋಶಿ ಆಗಮಿಸಿ ಶುಭ ಹಾರೈಸಿದರು.

ಜನೌಷಧಿ ಕೇಂದ್ರದ ಮುಖ್ಯಸ್ಥರಾದ ಶಿಲ್ಪಾ ವಾಗೀಶ್ ಎಚ್., ಅಶ್ವಿನಿ ನವೀನ್‌ಕುಮಾರ, ವೈದ್ಯರಾದ ಎನ್. ಶಂಕರ ನಾಯ್ಕ, ಬಿ.ಆರ್. ರಾಜೇಶ್, ಅನಂತ ಶೆಟ್ಟಿ ಪೆಂಡಕೂರ್, ಕೆ. ರಮೇಶಕುಮಾರ, ತಟ್ಟ ಇಂದ್ರೇಶ, ಕೆ.ಎಂ. ಖಾನ್, ನಿವೃತ್ತ ಶಿಕ್ಷಕ ಹಖಂಡಿ ಮರಿಕೊಟ್ರಪ್ಪ, ಕೆ.ಎಂ. ಬಸವರಾಜಯ್ಯ, ಶಶಿಧರ ಬೆನ್ನೂರು ಇದ್ದರು.

ಹರಪನಹಳ್ಳಿ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ತೆಗ್ಗಿನಮಠದ ಶ್ರೀಗಳನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆ ಸುರಕ್ಷತೆಗೆ ಸಾರಿಗೆ ಇಲಾಖೆ ಎಐ ಆಧರಿತ ಕ್ಯಾಮೆರಾ ಅಳವಡಿಕೆ
ಮಂಡ್ಯ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಸ್ವತಂತ್ರ ಸ್ಪರ್ಧೆ - ಸುಮಲತಾ ಪರ ನಾರಾಯಣಗೌಡ ಬ್ಯಾಟಿಂಗ್‌