ಕನ್ನಡಪ್ರಭ ವಾರ್ತೆ ನಾಪೋಕ್ಲು
ಹೊದ್ದೂರು ಗ್ರಾಪಂ ಅಧ್ಯಕ್ಷ ಎಚ್.ಎ. ಹಂಸ ಅಧ್ಯಕ್ಷತೆ ವಹಿಸಿದ ಕಾರ್‍ಯಕ್ರಮದಲ್ಲಿ ಮಡಿಕೇರಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ಮಾತನಾಡಿ, ಮಕ್ಕಳು ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.
ಜಿಲ್ಲಾ ಮಹಿಳಾ ಮಿಷನ್ ಶಕ್ತಿ ಸಂಯೋಜಕಿ ಮಮತಾ ಮಾತನಾಡಿ, ಹೆಣ್ಣು ಮಕ್ಕಳಿಗೆ 18 ವರ್ಷ ತುಂಬಿದ ಬಳಿಕ, ಗಂಡು ಮಕ್ಕಳಿಗೆ 21 ವರ್ಷ ತುಂಬಿದ ಬಳಿಕ ವಿವಾಹ ನೆರವೇರಿಸಬೇಕು ಎಂದರು.ಈ ಯೋಜನೆ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಇದು ಕಾರ್‍ಯನಿರ್ವಹಿಸುತ್ತಿದೆ ಎಂದರು.
ಹೊದ್ದೂರು ಗ್ರಾಪಂ ಉಪಾಧ್ಯಕ್ಷ ಕುಸುಮಾವತಿ, ಸದಸ್ಯ ಹಮೀದ್, ಗ್ರಾಪಂ ಅಭಿವೃದ್ಧಿ ಅಧಿಕಾರಿ ವತ್ಸಲ, ಮೂರ್ನಾಡು ಕ್ಲಸ್ಟರ್ ಕೇಂದ್ರದ ಸಿ.ಆರ್. ಪಿ. ಉಷಾ, ಹೊದವಾಡ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಅಶೋಕ್, ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಎಂ.ಟಿ. ರಾಧಮ್ಮ, ಅಂಗನವಾಡಿ ಕಾರ್‍ಯಕರ್ತೆಯರಾದ ಸುಮಾ, ತುಳಸಿ, ಶೃತಿ, ಶೋಭಾ, ಅಂಬ್ರಿನ ಮತ್ತಿತರರಿದ್ದರು.