ಕನ್ನಡಪ್ರಭ ವಾರ್ತೆ ಉಡುಪಿ
ಅವರು ಶನಿವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ವಿಧಾನ ಪರಿಷತ್ ಚುನಾವಣೆಯ ಉಸ್ತುವಾರಿಗಳು ಹಾಗೂ ಬ್ಲಾಕ್ ಅಧ್ಯಕ್ಷರನ್ನು ಉದ್ದೇಶಿಸಿ ಮಾತನಾಡಿದರು.
ವಿಧಾನಪರಿಷತ್ ಸದಸ್ಯರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಐವನ್ ಡಿಸೋಜ ಮಾತನಾಡಿದರು.ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಅನುಭವಿಸಿದ ಸೋಲನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಈ ಬಾರಿ ನಮ್ಮ ಅಭ್ಯರ್ಥಿ ರಾಜು ಪೂಜಾರಿ ಅವರನ್ನು ಗೆಲ್ಲಿಸುವ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಗೆ ನ್ಯಾಯ ಒದಗಿಸುವುದು ನಮ್ಮ ಕರ್ತವ್ಯ ಎಂದರು.
ಅಭ್ಯರ್ಥಿ ರಾಜು ಪೂಜಾರಿ ಮಾತಾಡಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ. ಗಪೂರ್, ಮಾಜಿ ಶಾಸಕ ಗೋಪಾಲ ಪೂಜಾರ, ಮುಖಂಡರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿˌ ದಿನೇಶ್ ಹೆಗ್ಡೆˌಪ್ರಸಾದ್ ರಾಜ್ ಕಾಂಚನ್ ಉಪಸ್ಥಿತರಿದ್ದರು. ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿದರು. ವಕ್ತಾರ ಭಾಸ್ಕರ ರಾವ್ ಕಿದಿಯೂರು ವಂದಿಸಿದರು.