ಇಂದು ಡಿಸಿ ನೇತೃತ್ವದಲ್ಲಿ ರೈತ ಮುಖಂಡರ ಸಭೆ

KannadaprabhaNewsNetwork |  
Published : Nov 03, 2026, 03:15 AM IST
ಬೆಳಗಾವಿ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿಕಬ್ಬು ಬೆಳೆಗಾರರ ದರ ನಿಗದಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಂಗಳವಾರ ಬೆಳಗಾವಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಎಲ್ಲ ರೈತ ಸಂಘಟನೆಗಳ ಮುಖಂಡರ ಸಭೆ ಕರೆದು ಚರ್ಚಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕಬ್ಬು ಬೆಳೆಗಾರರ ದರ ನಿಗದಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಂಗಳವಾರ ಬೆಳಗಾವಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಎಲ್ಲ ರೈತ ಸಂಘಟನೆಗಳ ಮುಖಂಡರ ಸಭೆ ಕರೆದು ಚರ್ಚಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.

ಕಬ್ಬಿಗೆ ಸೂಕ್ತ ದರ ನಿಗದಿಪಡಿಸುವಂತೆ ಆಗ್ರಹಿಸಿ ಸೋಮವಾರ ಬೆಳಗಾವಿಯ ಕುವೆಂಪು ನಗರದಲ್ಲಿರುವ ಸಚಿವರ ನಿವಾಸಕ್ಕೆ ಆಗಮಿಸಿದ ರೈತರನ್ನು ಭೇಟಿಯಾದ ಸಚಿವರು, ಅವರ ಸಮಸ್ಯೆ ಹಾಗೂ ಬೇಡಿಕೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು, ಕಬ್ಬಿನ ದರ ನಿಗದಿಯಲ್ಲಿನ ವಿಳಂಬ ಮತ್ತು ಕಾರ್ಖಾನೆಗಳ ಕಾರ್ಯಾರಂಭದ ಕುರಿತು ರೈತರೊಂದಿಗೆ ಚರ್ಚಿಸಿದರು.

ಕಬ್ಬು ಕಟಾವಿಗೆ ಸಿದ್ಧವಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ತೀವ್ರ ಆತಂಕದಲ್ಲಿದ್ದಾರೆ. ಕಬ್ಬು ಬೆಳೆದು ಕಾರ್ಖಾನೆಗಳಿಗೆ ಪೂರೈಸಲು ಸಿದ್ಧರಾಗಿದ್ದರೂ, ಈವರೆಗೆ ಸೂಕ್ತ ದರ ನಿಗದಿಯಾಗಿಲ್ಲ. ಇದರಿಂದ ರೈತರಿಗೆ ಆರ್ಥಿಕ ಸಂಕಷ್ಟ ಎದುರಾಗುತ್ತಿದೆ. ಆದ್ದರಿಂದ ಕೂಡಲೇ ಕಬ್ಬಿನ ದರ ನಿಗದಿಪಡಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ರೈತರು ಸಚಿವರನ್ನು ಒತ್ತಾಯಿಸಿದರು.

ರೈತರ ಅಹವಾಲು ಆಲಿಸಿದ ಸಚಿವ ಸತೀಶ್ ಜಾರಕಿಹೊಳಿ, ಈ ಹಿಂದೆ ಮುಖ್ಯಮಂತ್ರಿ ಬೆಳಗಾವಿಗೆ ಆಗಮಿಸಿದ್ದ ಸಂದರ್ಭದಲ್ಲಿ ಕಬ್ಬಿನ ದರ ನಿಗದಿ ಕುರಿತು ಚರ್ಚೆ ನಡೆಸಲಾಗಿತ್ತು. ಆಗ ದರ ನಿಗದಿಪಡಿಸಿ ಲಿಖಿತವಾಗಿಯೂ ನೀಡಲಾಗಿತ್ತು. ಆದಾಗ್ಯೂ, ರೈತರಲ್ಲಿ ಇನ್ನೂ ಕೆಲವು ಸಮಸ್ಯೆಗಳು ಉಳಿದಿರುವುದರಿಂದ ಮತ್ತೊಮ್ಮೆ ಎಲ್ಲ ರೈತ ಸಂಘಟನೆಗಳ ಮುಖಂಡರೊಂದಿಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದರು.

ಕಬ್ಬು ಬೆಳೆಗಾರರ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ನೇತೃತ್ವದಲ್ಲಿ ಎಲ್ಲ ರೈತ ಸಂಘಟನೆಗಳ ಮುಖಂಡರ ಸಭೆ ಆಯೋಜಿಸಲಾಗುವುದು. ಸಭೆಯಲ್ಲಿ ರೈತರ ಬೇಡಿಕೆಗಳು, ಕಬ್ಬಿನ ದರ ನಿಗದಿ ಹಾಗೂ ಪ್ರಸ್ತುತ ಎದುರಾಗಿರುವ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಲಾಗುವುದು. ಎಲ್ಲ ಸಂಘಟನೆಗಳ ಅಭಿಪ್ರಾಯಗಳನ್ನು ಆಲಿಸಿ, ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ