ಕನ್ನಡ ಸಿರಿ ಸ್ನೇಹ ಬಳಗದ ಸೋಮವಾರಪೇಟೆ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಭೆ ಸ್ನೇಹ ಬಳಗದ ಸಮಿತಿ ಅಧ್ಯಕ್ಷ ಹೆಚ್.ಜೆ. ಜವರಪ್ಪ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ಸಮಾಜದ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಕನ್ನಡ ಸಿರಿ ಸ್ನೇಹ ಬಳಗದ ಸೋಮವಾರಪೇಟೆ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಭೆ ಸ್ನೇಹ ಬಳಗದ ಸಮಿತಿ ಅಧ್ಯಕ್ಷ ಹೆಚ್.ಜೆ. ಜವರಪ್ಪ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ಸಮಾಜದ ಸಭಾಂಗಣದಲ್ಲಿ ಭಾನುವಾರ ನಡೆಯಿತು.ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಏ. 3ರಂದು ಮಹಿಳಾ ದಿನಾಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನೃತ್ಯ, ಹಾಡುಗಾರಿಕೆ, ನಾಟಕ, ಏಕಪಾತ್ರಾಭಿನಯ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನಡೆಸಲು ಹಾಗೂ ಸಹಕರಿಸುವ ಪ್ರತಿ ಸಂಘ ಸಂಸ್ಥೆಗೆ ಎರಡು ಕಾರ್ಯಕ್ರಮ ನೀಡಲು ಅವಕಾಶ ನೀಡಬೇಕು ಹಾಗೂ ಇಬ್ಬರು ಸಾಧಕ ಮಹಿಳೆಯರಿಗೆ ಸನ್ಮಾನಿಸಲು ಸಭೆ ನಿರ್ಧರಿಸಿತು.ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಂಘಗಳು ತಮ್ಮ ಕಾರ್ಯಕ್ರಮದ ಬಗ್ಗೆ ಮೊದಲೇ ನೋಂದಾಯಿಸಿಕೊಳ್ಳಬೇಕೆಂದು ಅಧ್ಯಕ್ಷರು ಮನವಿ ಮಾಡಿದರು.ಕಾರ್ಯದರ್ಶಿ ಎಲ್.ಎಂ. ಪ್ರೇಮ, ಖಜಾಂಚಿ ಸಿ.ಕೆ. ಮಲ್ಲಪ್ಪ, ಹಿರಿಯ ಸಾಹಿತಿ ನ.ಲ. ವಿಜಯ ಇದ್ದರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದು, ಸಲಹೆ ಸೂಚನೆಗಳನ್ನು ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.