ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ವಲಯ ಅಧ್ಯಕ್ಷರ ಸಭೆಯಲ್ಲಿ, ವಿಧಾನಸಭಾ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಭಾಗವಹಿಸಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಶ್ರೀಮಂಗಲ
ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ವಲಯ ಅಧ್ಯಕ್ಷರ ಸಭೆಯಲ್ಲಿ, ವಿಧಾನಸಭಾ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಭಾಗವಹಿಸಿ ಮಾತನಾಡಿದರು.ಹುದಿಕೇರಿಯಲ್ಲಿರುವ ಶಾಸಕರ ನಿವಾಸದಲ್ಲಿ ಏರ್ಪಡಿಸಿದ ಸಭೆಯಲ್ಲಿ ಮಾತನಾಡಿದ ಶಾಸಕರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಎಲ್ಲಾ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬ ವಲಯ ಅಧ್ಯಕ್ಷರು ತನ್ನ ವಲಯ ವ್ಯಾಪ್ತಿಯಲ್ಲಿ ಕಾರ್ಯ ಪ್ರವೃತ್ತನಾಗಬೇಕು ಎಂದು ಹೇಳಿದರು.ವಿಶೇಷವಾಗಿ ಕರ್ನಾಟಕ ರಾಜ್ಯ ಸರ್ಕಾರ ಯುವ ಜನತೆಯನ್ನು ಒಗ್ಗೂಡಿಸಿ ಅನುಕೂಲ ಆಗಲು ಹಮ್ಮಿಕೊಂಡಿರುವ ಭಾರತ್ ಜೋಡೋ ಯೋಜನೆ, ಎಸ್ಐಆರ್ ಪ್ರಕ್ರಿಯೆಯಲ್ಲಿ ಮತದಾರರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವುದು, ಗ್ಯಾರೆಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಹಾಗೂ ಯೋಜನೆಯ ಪ್ರತಿಯೊಬ್ಬರ ಫಲಾನುಭವಿಗಳಿಗೆ ತಲುಪುತ್ತಿದೆ ಎಂಬ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳುವುದು ಹಾಗೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಕಾಳಿಮಾಡ ಪ್ರಶಾಂತ್, ಪೊನ್ನಂಪೇಟೆ ತಾಲೂಕು ಬಗರ್ ಹುಕುಂ ಅಧ್ಯಕ್ಷರಾದ ಅಣ್ಣಳಮಾಡ ಲಾಲಾ ಅಪ್ಪಣ್ಣ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾನಂಡ ಪ್ರತ್ಯು, ಪೊನ್ನಂಪೇಟೆ ಬ್ಲಾಕಿನ ಎಲ್ಲ ವಲಯ ಅಧ್ಯಕ್ಷರು, ಪಕ್ಷದ ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.