ಪ್ರವಾಸಿಗರಿಗೆ ಸೌಲಭ್ಯ ಕಲ್ಪಿಸಲು ಸಭೆ: ಪ್ರವಾಸೋದ್ಯಮದ ತಿಪ್ಪೇಸ್ವಾಮಿ

KannadaprabhaNewsNetwork |  
Published : Jun 16, 2024, 01:48 AM IST
15ಎಚ್ಎಸ್ಎನ್7 :ಬೇಲೂರು ಪ್ರವಾಸಿಕೇಂದ್ರ   ವಿಶ್ವಪಾರಂಪಾರಿಕ ಪಟ್ಟಿಗೆ ಸೇರ್ಪಡೆ ಯಾಗಿದ್ದು ಪ್ರವಾಸಿಗರು  ಆಗಮಿಸುವ ಹಿನ್ನಲೆಯಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಶಾಸಕರ ನೇತೃತ್ವದಲ್ಲಿ ಸಭೆಯನ್ನು  ನಡೆಸಲಾಯಿತು. | Kannada Prabha

ಸಾರಾಂಶ

ಬೇಲೂರು ಚನ್ನಕೇಶವಸ್ವಾಮಿ ದೇಗುಲಕ್ಕೆ ಹೆಚ್ಚು ಪ್ರವಾಸಿಗರು ಆಗಮಿಸುವ ಹಿನ್ನೆಲೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಶಾಸಕರ ನೇತೃತ್ವದಲ್ಲಿ ಸಭೆಯನ್ನು ನಡೆಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ತಿಪ್ಪೇಸ್ವಾಮಿ ತಿಳಿಸಿದರು. ಬೇಲೂರಿನಲ್ಲಿ ಶಾಸಕ ಸುರೇಶ್‌ ನೇತೃತ್ವದ ಸಭೆಯ ನಂತರ ಮಾತನಾಡಿದರು.

ಶಾಸಕರ ನೇತೃತ್ವ

ಬೇಲೂರು: ಇಲ್ಲಿರುವ ಚನ್ನಕೇಶವಸ್ವಾಮಿ ದೇಗುಲ ವಿಶ್ವಪಾರಂಪರಿಕ ಪಟ್ಟಿಗೆ ಸೇರ್ಪಡೆಯಾಗಿದ್ದು ಹೆಚ್ಚಿನ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಶಾಸಕರ ನೇತೃತ್ವದಲ್ಲಿ ಸಭೆಯನ್ನು ನಡೆಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ತಿಪ್ಪೇಸ್ವಾಮಿ ತಿಳಿಸಿದರು.

ಪಟ್ಟಣದಲ್ಲಿ ಶಾಸಕ ಸುರೇಶ್‌ ನೇತೃತ್ವದ ಸಭೆಯ ನಂತರ ಮಾತನಾಡಿ, ಮುಂದಿನ ದಿನಗಳಲ್ಲಿ ಪ್ರವಾಸಿಗರು ದೇಗುಲಕ್ಕೆ ಹೆಚ್ಚು ಆಗಮಿಸುವ ಹಿನ್ನಲೆಯಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನಿಸಲಾಗಿದೆ. ನೆಹರು ನಗರದಿಂದ ದೇಗುಲದವರೆಗೆ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಂತೆ ಪಟ್ಟಣದ ತುಂಬೆಲ್ಲಾ ಪಾದಚಾರಿಗಳ ಸ್ಥಳ ಹಾಗೂ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿತ್ತು. ಅದರಂತೆ ಅಧಿಕಾರಿಗಳು ಅವುಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಸುಗಮ ಮಾಡಿಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಪಾರ್ಕಿಂಗ್‌ಗೆ ಯಾವುದೇ ಸಮಸ್ಯೆ ಆಗದಂತೆ ಪೊಲೀಸ್ ಇಲಾಖೆ ಮಾಡಿಕೊಟ್ಟರೆ ಸುಗಮ ಸಂಚಾರದ ಜತೆಗೆ ಪ್ರವಾಸೋದ್ಯಮದಿಂದ ಅಭಿವೃದ್ಧಿಪಡಿಸಲಾಗುತ್ತದೆ ಎಂದು ತಿಳಿಸಿದರು.

‘ರಸ್ತೆ ಮತ್ತು ಪ್ರವಾಸೋದ್ಯಮದ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದರೆ ಅದನ್ನು ಜಿಲ್ಲಾಡಳಿತ ತೆರವು ಮಾಡಿಸಿಕೊಟ್ಟರೆ ರಸ್ತೆಯನ್ನು ಅಗಲೀಕರಣ ಜೊತೆಗೆ ಸಂಪೂರ್ಣ ಪ್ರವಾಸೋದ್ಯಮಕ್ಕೆ ಸೌಂದರ್ಯೀಕರಣ ಮಾಡಲು ಅನುಕೂಲ ಮಾಡಿಕೊಡಲು ಸಿದ್ದರಿದ್ದೇವೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಹರೀಶ್, ಮಹೇಶ್, ಇತರರು ಹಾಜರಿದ್ದರು.

ಲೋಪವಾಗದಂತೆ ಸೌಲಭ್ಯ ಒದಗಿಸಿ

ಈಗಾಗಲೇ ಪ್ರವಾಸಿ ತಾಣವನ್ನು ಅಭಿವೃದ್ಧಿಪಡಿಸಲು ಜಿಲ್ಲಾಧಿಕಾರಿ, ತಾಲೂಕು ಆಡಳಿತದಿಂದ ಸಂಪೂರ್ಣ ಸಹಕಾರ ಪಡೆದಿದ್ದು ಬಂದ ಪ್ರವಾಸಿಗರಿಗೆ ಯೊವುದೇ ಲೋಪದೋಷ ಆಗದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರವಾಸೋದ್ಯಮ ಇಲಾಖೆಗೆ ಸೂಚನೆ ನೀಡಲಾಗಿದೆ. ಅದರಂತೆ ಹೈಟೆಕ್ ಮಾದರಿಯಲ್ಲಿ ತ್ರಿ ಸ್ಟಾರ್ ಹೋಟೆಲ್ ಹಾಗೂ ಅತಿಥಿ ವಸತಿಗೃಹವನ್ನು ಯಗಚಿ ಜಲಾಶಯದ ಬಳಿ ನಿರ್ಮಾಣವಾಗುತ್ತಿದೆ. ರಸ್ತೆ ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆ ಸಿದ್ಧವಾಗುತ್ತಿದೆ ಎಂದು ಶಾಸಕ ಸುರೇಶ್ ಹೇಳಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ