ಕಬ್ಬು ದರ ನಿಗದಿ ಸಭೆ ವಿಫಲ: ೧೪ರ ಸಭೆಗೆ ಕಾರ್ಖಾನೆ ಮಾಲೀಕರು ಗೈರಾದರೆ ಶಾಶ್ವತ ಬಂದ್ ಎಚ್ಚರಿಕೆ

KannadaprabhaNewsNetwork |  
Published : Nov 13, 2026, 02:15 AM IST
ಹಾವೇರಿ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ನೇತೃತ್ವದಲ್ಲಿ ಕಬ್ಬು ಬೆಳೆಗಾರರ ಸಭೆ ಆಯೋಜಿಸಲಾಗಿತ್ತು. | Kannada Prabha

ಸಾರಾಂಶ

ಕಬ್ಬಿಗೆ ಸೂಕ್ತ ದರ ನಿಗದಿಪಡಿಸುವ ಸಂಬಂಧ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಗುರುವಾರ ಸಂಜೆ ನಡೆದ ಸಭೆ ಯಾವುದೇ ನಿರ್ಧಾರಕ್ಕೆ ಬರದೆ ವಿಫಲಗೊಂಡಿದೆ. ಹೀಗಾಗಿ, ಕಾರ್ಖಾನೆ ಮಾಲೀಕರನ್ನು ಒಳಗೊಂಡಂತೆ ಮತ್ತೊಂದು ಸಭೆ ಕರೆಯಬೇಕು ಎಂದು ರೈತರು ಆಗ್ರಹಿಸಿದರು.

ಹಾವೇರಿ: ಕಬ್ಬಿಗೆ ಸೂಕ್ತ ದರ ನಿಗದಿಪಡಿಸುವ ಸಂಬಂಧ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಗುರುವಾರ ಸಂಜೆ ನಡೆದ ಸಭೆ ಯಾವುದೇ ನಿರ್ಧಾರಕ್ಕೆ ಬರದೆ ವಿಫಲಗೊಂಡಿದೆ. ಹೀಗಾಗಿ, ಕಾರ್ಖಾನೆ ಮಾಲೀಕರನ್ನು ಒಳಗೊಂಡಂತೆ ಮತ್ತೊಂದು ಸಭೆ ಕರೆಯಬೇಕು ಎಂದು ರೈತರು ಆಗ್ರಹಿಸಿದರು.

ಸಭೆಯಲ್ಲಿ ಕಬ್ಬಿನ ದರ ನಿಗದಿ ಕುರಿತು ಚರ್ಚೆ ನಡೆದರೂ ರೈತರ ಬೇಡಿಕೆಗೆ ಸ್ಪಷ್ಟ ಪರಿಹಾರ ದೊರೆಯಲಿಲ್ಲ. ಕಾರ್ಖಾನೆ ಮಾಲೀಕರ ಅನುಪಸ್ಥಿತಿಯಲ್ಲಿ ದರ ನಿಗದಿ ಸಾಧ್ಯವಿಲ್ಲ. ಆದ್ದರಿಂದ ನ. ೧೪ರಂದು ಮಧ್ಯಾಹ್ನ ೧೨ಕ್ಕೆ ನಡೆಯಲಿರುವ ಸಭೆಗೆ ಎಲ್ಲ ಸಕ್ಕರೆ ಕಾರ್ಖಾನೆಗಳ ಮಾಲೀಕರು ಕಡ್ಡಾಯವಾಗಿ ಹಾಜರಾಗಬೇಕು ಎಂದು ರೈತರು ಒತ್ತಾಯಿಸಿದರು.

ಅಂದು ನಡೆಯುವ ಸಭೆಗೆ ಕಾರ್ಖಾನೆ ಮಾಲೀಕರು ಗೈರು ಹಾಜರಾದರೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳನ್ನು ಶಾಶ್ವತವಾಗಿ ಬಂದ್ ಮಾಡುವ ಹೋರಾಟ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು. ಕಬ್ಬು ಬೆಳೆಗಾರರ ಹಿತ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಗೆ ಕಾರ್ಖಾನೆ ಮಾಲೀಕರು ಆಗಮಿಸದ ಹಿನ್ನೆಲೆ ಸಭೆ ವಿಫಲಗೊಂಡಿದೆ. ದರ ನಿಗದಿ ಹಿನ್ನೆಲೆ ನ. ೧೪ರಂದು ಮಧ್ಯಾಹ್ನ ೧೨ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಸಭೆ ಕರೆಯಲಾಗಿದ್ದು, ಈ ಸಭೆಗೆ ಕಾರ್ಖಾನೆ ಮಾಲೀಕರು ಗೈರು ಹಾಜರಾದರೆ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳನ್ನು ಶಾಶ್ವತ ಬಂದ್ ಮಾಡಿಸಿ ಹೋರಾಟ ಮಾಡಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪೂರ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆ
ಚಲ್ಲಘಟ್ಟ ಮೆಟ್ರೋ ಡಿಪೋ ಬಳಿ ಅಂಡರ್‌ಪಾಸ್‌