ಜೆಡಿಎಸ್ ಬಲವರ್ಧನೆಗೆ ಸಭೆ: ಬಿ.ಟಿ. ನಾಗರಾಜು

KannadaprabhaNewsNetwork |  
Published : May 05, 2025, 12:45 AM IST
ಕೆ ಕೆ ಪಿ ಸುದ್ದಿ 01:ತಾಲ್ಲೂಕಿನಲ್ಲಿ ಜೆಡಿಎಸ್ ಬಲವರ್ಧನೆಗೆಮುಖಂಡರು ಹಾಗೂ ಕಾರ್ಯಕರ್ತರ ಸಭೆ.  | Kannada Prabha

ಸಾರಾಂಶ

ಪಕ್ಷದ ಬೇರು ಗಟ್ಟಿ ಯಾಗಿರುವುದಾಗಿ ತಾಲೂಕಿನ ಜನತೆ ಮತಗಳ ಮೂಲಕ ತೋರಿಸಿದ್ದಾರೆ, ಪಕ್ಷದ ಕಾರ್ಯಕರ್ತರು ಎದೆಗುಂದದೆ ಪಕ್ಷ ಸಂಘಟಿಸಬೇಕು.

ಕನ್ನಡಪ್ರಭ ವಾರ್ತೆ ಕನಕಪುರ

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸಲು ಪ್ರತಿಯೊಬ್ಬ ಕಾರ್ಯಕರ್ತರು, ಮುಖಂಡರು ಇಂದಿನಿಂದಲೇ ಪಕ್ಷದ ಸಂಘಟನೆಗೆ ಪ್ರಾಮಾಣಿಕ ಹಾಗೂ ಒಗ್ಗಟ್ಟಿನಿಂದ ದುಡಿಯುವಂತೆ ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ಟಿ. ನಾಗರಾಜು ತಿಳಿಸಿದರು.

ತಾಲೂಕಿನ ತೊಪ್ಪಗಾನಹಳ್ಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿ ರೈತರ ಹಾಗೂ ಎಲ್ಲಾ ವರ್ಗಗಳ ಕಲ್ಯಾಣಕ್ಕಾಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಅವರು ಅಲ್ಪ ಅವಧಿಯಲ್ಲಿ ಜಾರಿಗೆ ತಂದ ಕಾರ್ಯಕ್ರಮಗಳು ಇಂದು ಸಹ ಜನಮನದಲ್ಲಿ ಇಂದಿಗೂ ಆಳವಾಗಿ ಉಳಿದಿದೆ ಎಂದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಪಕ್ಷದ ಆಧಾರ ಸ್ತಂಭದಂತಿದ್ದು ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ನೀಡುವ ಮೂಲಕ ಪಕ್ಷದ ಬೇರು ಗಟ್ಟಿ ಯಾಗಿರುವುದಾಗಿ ತಾಲೂಕಿನ ಜನತೆ ಮತಗಳ ಮೂಲಕ ತೋರಿಸಿದ್ದಾರೆ, ಪಕ್ಷದ ಕಾರ್ಯಕರ್ತರು ಎದೆಗುಂದದೆ ಪಕ್ಷ ಸಂಘಟಿಸಲು ಕರೆ ನೀಡಿದರು.

ಕೋಡಿಹಳ್ಳಿ ಶಿವಶಂಬೇಗೌಡ ಮಾತನಾಡಿ, ಈ ಹಿಂದಿನ ಸಾತನೂರು ಹಾಗೂ ಕನಕಪುರ ವಿಧಾನಸಭಾ ಕ್ಷೇತ್ರಗಳು ಜನತಾ ಪರಿವಾರದ ಭದ್ರಕೋಟೆಯಾಗಿದ್ದವು, ಹಲವು ರಾಜಕೀಯ ಕಾರಣಗಳಿಂದ ಪಕ್ಷ ಹಿನ್ನಡೆ ಸಾಧಿಸಿದೆ. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ತಮ್ಮತಮ್ಮಲ್ಲಿನ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಮುಂದಿನ ಎಲ್ಲಾ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಸಂಘಟನಾತ್ಮಕವಾಗಿ ಮುನ್ನಡೆಯುವಂತೆ ಕಾರ್ಯಕರ್ತ ರಲ್ಲಿ ಆತ್ಮಸ್ಥೈರ್ಯ ತುಂಬಿದರು.

ತಾಲೂಕು ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಯೂನಸ್ ಖಾನ್ ಹಾಗೂ ಇತರ ಮುಖಂಡರು ಮಾತನಾಡಿ, ತಾಲೂಕಿನಲ್ಲಿ ಪಕ್ಷ ಸದೃಢವಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕ್ಷೇತ್ರದಲ್ಲಿ ಪಕ್ಷದ ಸಭೆ ಕರೆದು ಕಾರ್ಯಕರ್ತರು ಹಾಗೂ ಮುಖಂಡರಿಗೆ ಆತ್ಮಸ್ಥೈರ್ಯ ತುಂಬಬೇಕೆಂದು ಒತ್ತಾಯಿಸಿದರು.

ತಾಲೂಕು ಜೆಡಿಎಸ್ ಪಕ್ಷದ ಉಪಾಧ್ಯಕ್ಷ ರಾಮಕೃಷ್ಣ, ರಾಯಸಂದ್ರ ಮನು, ಕೋಡಿಹಳ್ಳಿ ಪುಟ್ಟಸ್ವಾಮಿಗೌಡ, ಗೇರಹಳ್ಳಿ ಸಣ್ಣಪ್ಪ,ಗ್ರಾ.ಪಂ. ಸದಸ್ಯ ಸೈಯದ್ ಸಮೀರ್, ಬಸವನ ಬನ್ನಿಕುಪ್ಪೆ ಮನು, ಚಿಕ್ಕರಾಜು, ತಾಮಸಂದ್ರ ಕುಳ್ಳಪ್ಪ, ಕಾಡಹಳ್ಳಿ ಅನುಕುಮಾರ್, ಬೆಟ್ಟೇಗೌಡನದೊಡ್ಡಿ ಮಂಜುನಾಥ್ ಹಾಜರಿದ್ದರು.

ಕೆ ಕೆ ಪಿ ಸುದ್ದಿ 01:ತಾಲ್ಲೂಕಿನಲ್ಲಿ ಜೆಡಿಎಸ್ ಬಲವರ್ಧನೆಗೆ

ಮುಖಂಡರು ಹಾಗೂ ಕಾರ್ಯಕರ್ತರ ಸಭೆ.

PREV

Recommended Stories

‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ