ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಂಪಾದಕರ ಹಾಗೂ ವರದಿಗಾರರ ಸಭೆಯ ಬಳಿಕ ಮಾತನಾಡಿದ ಅವರು, ಶ್ರೀ ಆದಿಚುಂಚನಗಿರಿ ವಿಶ್ವವಿದ್ಯಾಲಯ ಆಸ್ಪತ್ರೆ ಸಹಯೋಗದಲ್ಲಿ ಜಿಲ್ಲೆಯ ಎಲ್ಲಾ ಪತ್ರಕರ್ತರು ಹಾಗೂ ಜಿಲ್ಲೆಯ ಎಲ್ಲಾ ಪತ್ರಿಕಾ ವಿತರಕರು ಮತ್ತು ಕುಟುಂಬಗಳಿಗೆ ಆರೋಗ್ಯ ಉಚಿತ ಶಿಬಿರವನ್ನು ಅಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ರವರೆಗೆ ಆಯೋಜಿಸಲಾಗಿದೆ.
ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ದಿವ್ಯ ಆಶೀರ್ವಾದದೊಂದಿಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದೊಂದಿಗೆ. ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿಯವರ ಸಹಕಾರದಿಂದ ಶಿಬಿರ ನಡೆಯುತ್ತಿದ್ದು, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ ಗೋಪಾಲಸ್ವಾಮಿ ಶಿಬಿರದ ಆಯೋಜಕರಾಗಿದ್ದಾರೆ ಎಂದು ತಿಳಿಸಿದರು.ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆ, ಬೆಂಗಳೂರಿನ ಕಿಮ್ಸ್, ನಿಮ್ಹಾನ್ಸ್, ಕಿದ್ವಾಯಿ, ಮಂಗಳೂರಿನ ಎನಪೋಯ ಹಾಗೂ ಹಾಸನದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘಗಳ ಸಹಕಾರ ದೊರೆಯಲಿದೆ ಎಂದರು.
ಸ್ತ್ರೀಯರಿಗೆ ಬಿಳಿ ಸೆರಗು, ಬಂಜೆತನ, ಗರ್ಭಕೋಶದ ತೊಂದರೆ ಇನ್ನಿತರ ಸ್ತ್ರೀ ರೋಗಗಳಿಗೆ ನುರಿತ ವೈದ್ಯರಿಂದ ಚಿಕಿತ್ಸೆ ಒದಗಿಸಲಾಗುತ್ತಿದ್ದು, ಉಚಿತವಾಗಿ ಇಸಿಜಿ, ರಕ್ತಪರೀಕ್ಷೆ ,ಎಕೋ ಸೇರಿ ಇತರೆ ಚಿಕಿತ್ಸೆ ಹಾಗೂ ಔಷಧಿಯನ್ನು ಉಚಿತವಾಗಿ ನೀಡಲಾಗುವುದು ಎಂದರು.
ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸಿ ಶಶಿಧರ್ ,ಉಪಾಧ್ಯಕ್ಷ ಕೆ.ಎಂ. ಹರೀಶ್, ಮಾಜಿ ಅಧ್ಯಕ್ಷರಾದ ಬಾಳ್ಳುಗೋಪಾಲ್, ರವಿ ನಾಕಲಗೂಡು ಇತರರು ಉಪಸ್ಥಿತರಿದ್ದರು.