ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ

KannadaprabhaNewsNetwork |  
Published : Nov 06, 2026, 02:30 AM IST
ಫೋಟೋ ನ.೫ ವೈ.ಎಲ್.ಪಿ. ೦೩  | Kannada Prabha

ಸಾರಾಂಶ

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು

ಯಲ್ಲಾಪುರ: ಕನ್ನಡ ರಾಜ್ಯೋತ್ಸವವೆಂದರೆ ಕೇವಲ ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಸಂಭ್ರಮಕ್ಕೆ ಸೀಮಿತವಾಗಬಾರದು. ಸಮಾಜಕ್ಕೆ ನಮ್ಮಿಂದಾದ ಕೊಡುಗೆ ನೀಡುವ ಮೂಲಕ ನಾಡಿನ ಹಬ್ಬವನ್ನು ಅರ್ಥಪೂರ್ಣಗೊಳಿಸಬೇಕು. ರಕ್ತದಾನವು ಜಾತಿ, ಧರ್ಮ, ಭಾಷೆ ಮತ್ತು ವರ್ಗಗಳ ಎಲ್ಲೆಗಳನ್ನು ಮೀರಿ ಮನುಷ್ಯರನ್ನು ಬೆಸೆಯುವ ಶ್ರೇಷ್ಠ ಮಾನವೀಯ ಕಾರ್ಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಆರ್.ಡಿ. ಜನಾರ್ಧನ್ ಹೇಳಿದರು.

ಅವರು, ಗುರುವಾರ ೭೧ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಸ್ಪತ್ರೆ ಯಲ್ಲಾಪುರ, ಗ್ರೀನ್ ಕೇರ್ ಶಿರಸಿ, ಕ್ರಿಯೇಟಿವ್ ಕಂಪ್ಯೂಟರ್ ಇನ್‌ಸ್ಟಿಟ್ಯೂಟ್ ಯಲ್ಲಾಪುರ, ಕೆ.ಎಂ.ಎಫ್. ಲೈಫ್ ಲೈನ್ ರಕ್ತ ಕೇಂದ್ರ ಹಾಗೂ ರೋಟರಿ ಕ್ಲಬ್ ಯಲ್ಲಾಪುರ ನ್ಯೂ ಜನರೇಷನ್ ಇವರ ಸಹಯೋಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಒಬ್ಬರ ರಕ್ತದಾನ ಮತ್ತೊಬ್ಬರ ಬದುಕಿಗೆ ಬೆಳಕಾಗಬಲ್ಲದು. ಯುವಜನತೆ ಇಂತಹ ಜೀವಪರ ಕಾರ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಶಿಬಿರದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಸಾರ್ವಜನಿಕರು ರಕ್ತದಾನ ಮಾಡಿದರು. ೫೦ಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹಿಸಲಾಯಿತು.

ಐ.ಕ್ಯೂ.ಎ.ಸಿ. ಸಂಚಾಲಕರು ಡಾ. ಓಂಪ್ರಕಾಶ್ ನಾಯ್ಕ್, ಕಾಲೇಜಿನ ಯೂಥ್ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ. ರವಿ ಶೇಷಗಿರಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ (ಎನ್.ಎಸ್.ಎಸ್) ಕಾರ್ಯಕ್ರಮಾಧಿಕಾರಿ ರವಿ ಭಟ್ಟ ಶಿಬಿರದ ಸಂಘಟನೆಗೆ ಶ್ರಮಿಸಿದರು.

ಮುಖ್ಯ ಅತಿಥಿಗಳಾಗಿ ತಾಲೂಕು ವೈದ್ಯಾಧಿಕಾರಿ ಡಾ. ನರೇಂದ್ರ ಪವಾರ, ಡಾ. ಸುಮನ್ ಹೆಗ್ಡೆ ಉಪಸ್ಥಿತರಿದ್ದರು. ಅತಿಥಿಗಳಾಗಿ ಶ್ರೀನಿವಾಸ ಮುರುಡೇಶ್ವರ ಮತ್ತು ಜಿತೇಂದ್ರಕುಮಾರ್ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಳಸಿದ ಕಪ್‌ನಲ್ಲೇ ಪೆಪ್ಸಿ ಸರ್ವ್‌ ಮಾಡಿದ ಪಿವಿಆರ್ ತಿನಿಸು ಮಳಿಗೆ
ಬಿಎಂಟಿಸಿ ಬಸ್‌ ಪಾಸ್‌ ದರ ಹೆಚ್ಚಳ!