ಕನ್ನಡಪ್ರಭ ವಾರ್ತೆ ಮಳವಳ್ಳಿ
ಶಾಲಾ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9 ರಿಂದ 5 ಗಂಟೆವರೆಗೆ ನಡೆಯುವ ಆರೋಗ್ಯ ಶಿಬಿರದಲ್ಲಿ ಸಂಜೀವಿನಿ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆ ಬೆಂಗಳೂರು, ಜೆಎಸ್‌ಎಸ್ ಆಸ್ಪತ್ರೆ, ವಾಸನ್ ಐಕೇರ್ ಆಸ್ಪತ್ರೆ ವೈದ್ಯರು ಆಗಮಿಸಿ ರೋಗಿಗಳ ತಪಾಸಣೆ ನಡೆಸಲಿದ್ದಾರೆ ಎಂದರು.
ಶಿಬಿರದಲ್ಲಿ ವೈದ್ಯಕೀಯ ತಪಾಸಣೆ, ಬಿ.ಪಿ, ಷುಗರ್, ಸ್ತ್ರೀರೋಗ, ಮೂಳೆ ಮತ್ತು ಕೀಲು, ಶಸ್ತ್ರ ಚಿಕಿತ್ಸಾ ವಿಭಾಗ ತಪಾಸಣೆ, ಸ್ತನ ಮತ್ತು ಗರ್ಭಾಶಯ ಕ್ಯಾನ್ಸರ್ ತಪಾಸಣೆ, ದಂತ, ಕಣ್ಣು, ತಪಾಸಣೆ ಹಾಗೂ ಇಸಿಜಿ, ರಕ್ತಪರೀಕ್ಷೆ, ಪೈಲ್ಸ್, ಕಿಡ್ನಿ ಮತ್ತು ಪಿತ್ತ ಕೋಶದ ಕಲ್ಲು ಚಿಕಿತ್ಸೆ ಸೇರಿದಂತೆ ಹಲವು ರೀತಿಯ ತಪಾಸಣೆಗಳನ್ನು ಮಾಡಲಾಗುತ್ತದೆ ಎಂದರು.ಶಿಬಿರಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಮಳವಳ್ಳಿ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ವಾಹನ ಸೌಲಭ್ಯವನ್ನು ಕಲ್ಪಿಸಲಾಗಿದೆ. ಜೊತೆಗೆ ರೋಗಿಗಳಿಗೆ ಉಪಹಾರ ಸೌಲಭ್ಯವನ್ನು ಮಾಡಲಾಗಿದೆ ಎಂದರು.
ನಿವೃತ್ತ ಸೈನಿಕ ಸುರೇಶ್ ಮಾತನಾಡಿ, ಶಿಬಿರದಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ವಿಶೇಷ ಮಾಹಿತಿಯನ್ನು ವಿಡಿಯೋ ಮೂಲಕ ರೋಗಿಗಳಿಗೆ ತಿಳಿಸಿಕೊಡಲಾಗುವುದು. ಜೊತೆಗೆ ಆಧುನಿಕ ಯುಗದಲ್ಲಿ ಜೀವನ ಶೈಲಿ ಹಾಗೂ ಆಹಾರ ಪದ್ದತಿಗಳ ಬಗ್ಗೆ ತಿಳುವಳಿಕೆ ಮೂಡಿಸಲು ಜಾಗೃತಿ ಕಾರ್ಯಕ್ರಮವನ್ನು ಶಿಬಿರದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.