ಕನ್ನಡಪ್ರಭ ವಾರ್ತೆ ಹುಕ್ಕೇರಿ
ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಮಂಗಳವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಭಾಗದ ಯುವಕರು ಮತ್ತು ನಿರುದ್ಯೋಗಿಗಳು ಅನುಕೂಲವಾಗುವ ದಿಸೆಯಲ್ಲಿ ಯಶಸ್ವಿ ಐದನೇ ವರ್ಷದಲ್ಲಿ ಈ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಇದು ಉದ್ಯೋಗಾಕಾಂಕ್ಷಿಗಳಿಗೆ ಪ್ರಮುಖ ವೇದಿಕೆಯಾಗಿದೆ. ಉದ್ಯೋಗ ಹುಡುಕಾಟದಲ್ಲಿರುವ ಯುವಜನತೆಗೆ ಇದೊಂದು ಸುವರ್ಣಾವಕಾಶ ಕಲ್ಪಿಸಲಾಗಿದೆ ಎಂದರು.ಅ.8 ರಂದು ಬೆಲ್ಲದ ಬಾಗೇವಾಡಿ ವಿ.ಎಂ.ಕತ್ತಿ ಶಿಕ್ಷಣ ಸಂಸ್ಥೆ ಕ್ಯಾಂಪಸ್‌ನಲ್ಲಿ ಬೆಳಗ್ಗೆ 9 ರಿಂದ ಆರಂಭವಾಗಲಿರುವ ಈ ಉದ್ಯೋಗ ಮೇಳದಲ್ಲಿ ಸುಮಾರು 2 ಸಾವಿರ ಯುವಕ-ಯುವತಿಯರು ಭಾಗವಹಿಸುವ ನಿರೀಕ್ಷೆಯಿದೆ. 60ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಗಳಲ್ಲಿ ಖಾಲಿವಿರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದು. ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳು ಹಾಗೂ ಸ್ವವಿವರದ (ಬಯೋಡಾಟಾ) ಪ್ರತಿಯೊಂದಿಗೆ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.ಉದ್ಯೋಗಾಕಾಂಕ್ಷಿಗಳಿಗೆ ಒಂದೇ ವೇದಿಕೆಯಲ್ಲಿ ನೌಕರಿ ಕಲ್ಪಿಸುವ ಮಹತ್ವಾಕಾಂಕ್ಷೆಯೊಂದಿಗೆ ಮಹಾಂತೇಶ್ವರ ವಿದ್ಯಾ ಟ್ರಸ್ಟ್, ವಿಶ್ವನಾಥ ಮಲ್ಲಪ್ಪ ಕತ್ತಿ ಸ್ಮಾರಕ ಧರ್ಮಾರ್ಥ ಟ್ರಸ್ಟ್, ರಾಜೇಶ್ವರಿ ವಿಶ್ವನಾಥ ಕತ್ತಿ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ಈ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು ಒಂದೆಡೆ ಮುಖಾಮುಖಿ ಆಗುವುದರಿಂದ ಪತ್ರ ವ್ಯವಹಾರದ ಹಾಗೂ ಸಮಯದ ಉಳಿತಾಯವಾಗಲಿದೆ ಎಂದರು.ಗೋಷ್ಠಿಯಲ್ಲಿ ಎಂ.ವಿ.ಟ್ರಸ್ಟ್‌ನ ಆಡಳಿತಾಧಿಕಾರಿ ಕೆ.ಸಿ.ಮುಚಖಂಡಿ, ಪದವಿ ಕಾಲೇಜಿನ ಪ್ರಾಚಾರ್ಯ ಡಾ.ವಿ.ಎಸ್.ಹೂಗಾರ, ಪಿಯು ಕಾಲೇಜಿನ ಪಿನ್ಸಿಪಾಲ್ ಎಸ್.ಎಂ.ಭಂಗಿ, ಐಟಿಐ ಕಾಲೇಜಿನ ಪ್ರಾಚಾರ್ಯ ವಿ.ಡಿ.ತೋರೊ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಂಯೋಜಕ ಎನ್. ಸಂತೋಷ, ವಿಎಸ್‌ಎಲ್ ಕಾರ್ಖಾನೆ ಮಾನವ ಸಂಪನ್ಮೂಲ ವಿಭಾಗದ ರಾಘವೇಂದ್ರ ನಂದಗಾಂವಿ ಮತ್ತಿತರರು ಉಪಸ್ಥಿತರಿದ್ದರು.ಕೆಲಸಕ್ಕಾಗಿ ಅಲೆಯುತ್ತಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ಇದು ಸುವರ್ಣಾವಕಾಶವಾಗಿದೆ. ಹುಕ್ಕೇರಿ ತಾಲೂಕು ಸೇರಿದಂತೆ ಜಿಲ್ಲೆ, ರಾಜ್ಯ ಹಾಗೂ ಗೋವಾ ಮತ್ತು ಮಹಾರಾಷ್ಟ್ರದ ಯುವಕರು ಈ ಮೇಳದ ಪ್ರಯೋಜನ ಪಡೆದುಕೊಳ್ಳಲು ಅವಕಾಶವಿದೆ. ನಿರುದ್ಯೋಗಿ ಸಮಸ್ಯೆಗೆ ಈ ಮೇಳ ಸಹಕಾರಿಯಾಗಿದ್ದು, ಮಾಹಿತಿಗೆ ಮೊ.9902521881, ಮೊ.9164465251, ಮೊ.7975856566 ಸಂಪರ್ಕಿಸಿ.
-ಪವನ ಕತ್ತಿ, ಎಂ.ವಿ.ಟ್ರಸ್ಟ್‌ನ ಆಡಳಿತ ಮಂಡಳಿ ನಿರ್ದೇಶಕರು.