ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಿಗದಿತ ಪ್ರಕರಣಗಳ ಇತ್ಯರ್ಥ
ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಅದಾಲತ್‌ನಲ್ಲಿ ಜಿಲ್ಲಾ ನ್ಯಾಯಾಲಯವೂ ಸೇರಿದಂತೆ ವಿವಿಧ ಹಂತದ ನ್ಯಾಯಾಲಯಗಳಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ಪರಿಹಾರ ಆಯೋಗದಲ್ಲಿನ ಪ್ರಕರಣ ಸೇರಿದಂತೆ ನಿಗದಿತ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದರು. ಸದ್ಯ ಜಿಲ್ಲೆಯಲ್ಲಿ ಒಟ್ಟು 40,408 ಪ್ರಕರಣಗಳು ಬಾಕಿಯಿರುತ್ತದೆ. ಈ ಪೈಕಿ ಅದಾಲತ್‌ಗೆ ಜೂನ್ 20 ಕ್ಕೆ ಅನ್ವಯವಾಗುವಂತೆ 1,150 ಪ್ರಕರಣಗಳನ್ನು ಗುರುತಿಸಲಾಗಿದೆ. ಈ ಬಾರಿಯ ಅದಾಲತ್‌ಗೆ ಸದ್ಯ 5,325 ಪ್ರಕರಣಗಳು ದಾಖಲಾಗಿವೆ. ಕಳೆದ ಬಾರಿಗಿಂತ ಹೆಚ್ಚು ಸಂಖ್ಯೆಯ ಪ್ರಕರಣಗಳನ್ನು ಈ ಬಾರಿಯ ಅದಾಲತ್‌ನಲ್ಲಿ ವಿಲೇವಾರಿ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದರು.ಕಾನೂನು ಸೇವಾ ಸಮಿತಿ ಸಂಪರ್ಕಿಸಿ
ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನ್ಯಾ.ಕೆ.ಬಿ.ಉಮೇಶ್ ಇದ್ದರು.