ಮೇಕೆದಾಟು: ಕರವೇ ಸ್ವಾಭಿಮಾನಿ ಬಣ ಸಂಭ್ರಮಾಚರಣೆ

KannadaprabhaNewsNetwork |  
Published : Nov 16, 2025, 01:15 AM IST
15ಕೆಆರ್ ಎಂಎನ್ 4.ಜೆಪಿಜಿರಾಮನಗರದ ಐಜೂರು ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. | Kannada Prabha

ಸಾರಾಂಶ

ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು ಹಾಕುತ್ತಲೇ ಬಂದಿತ್ತು. ಸುಪ್ರೀಂ ಕೋರ್ಟ್ ತೀರ್ಪಿನಿಂದ ಯೋಜನೆಗೆ ಇದ್ದ ಅಡ್ಡಿ ನಿವಾರಣೆ ಆದಂತಾಗಿದೆ.

ಕನ್ನಡಪ್ರಭ ವಾರ್ತೆ ರಾಮನಗರ

ಮೇಕೆದಾಟು ಯೋಜನೆಯ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ನಗರದಲ್ಲಿ ಸಂಭ್ರಮಾಚರಣೆ ಮಾಡಿದರು.

ನಗರದ ಐಜೂರು ವೃತ್ತದಲ್ಲಿ ಸೇರಿದ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಅಲ್ಲದೆ, ರಾಜ್ಯ ಸರ್ಕಾರ ಕೂಡಲೇ ಮೇಕೆದಾಟು ಯೋಜನೆ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ರಾಜ್ಯ ಉಸ್ತುವಾರಿ ಅಧ್ಯಕ್ಷ ಶಿವುಗೌಡ ಮಾತನಾಡಿ, ಮೇಕೆದಾಟು ಯೋಜನೆ ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪು ನಮ್ಮ ರಾಜ್ಯದ ಪರವಾಗಿ ಬಂದಿರುವುದು ಸಂತಸದ ವಿಚಾರವಾಗಿದ್ದು, ಇದು ರಾಜ್ಯಕ್ಕೆ ಸಿಕ್ಕ ಗೆಲುವಾಗಿದೆ ಎಂದು ತಿಳಿಸಿದರು.

ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು ಹಾಕುತ್ತಲೇ ಬಂದಿತ್ತು. ಸುಪ್ರೀಂ ಕೋರ್ಟ್ ತೀರ್ಪಿನಿಂದ ಯೋಜನೆಗೆ ಇದ್ದ ಅಡ್ಡಿ ನಿವಾರಣೆ ಆದಂತಾಗಿದೆ. ಇದು ರಾಜ್ಯದ ಜನತೆಗೆ ಹಾಗೂ ನಮ್ಮ ವೇದಿಕೆ ಹೋರಾಟಕ್ಕೂ ಸಿಕ್ಕ ಜಯವಾಗಿದೆ ಎಂದರು.

ಮೇಕೆದಾಟು ಯೋಜನೆ ವಿಷಯವನ್ನು ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಮೇಕೆದಾಟು ಯೋಜನೆ ಕಾಮಗಾರಿ ಕೈಗೊಂಡು ಪುರ್ಣಗೊಳಿಸಬೇಕು. ಈ ಯೋಜನೆಗೆ ಸಂಘಟನೆಯ ಸಂಪೂರ್ಣ ಬೆಂಬಲವಿದೆ ಎಂದು ಶಿವುಗೌಡ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕಿರಣ, ಜಿಲ್ಲಾ ಉಸ್ತುವಾರಿ ಅಧ್ಯಕ್ಷ ಬಸವರಾಜ ಹವಾಲ್ದಾರ್, ಜಿಲ್ಲಾ ಉಪಾಧ್ಯಕ್ಷ ಬೆಟ್ಟೆಗೌಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿನಯ್, ಯುವ ಜಿಲ್ಲಾಧ್ಯಕ್ಷ ಸ್ವಾಮಿ, ತಾಲ್ಲೂಕು ಗೌರವಾಧ್ಯಕ್ಷ ಸಿದ್ದರಾಜು, ತಾಲ್ಲೂಕು ರೈತ ಘಟಕದ ಅಧ್ಯಕ್ಷ ಮಲ್ಲೇಶ, ಆಟೋ ಘಟಕದ ಅಧ್ಯಕ್ಷ ಮನು, ಸಂಘಟನೆಯ ವೆಂಕಟೇಶ ಮೂರ್ತಿ, ರಘು, ಮೈಯೂರ, ಲಕ್ಕು, ಸ್ವಾಮಿ, ಟಮೋಟೋ ಮನು, ಮಾಲಿಂಗ, ಶಶಿ, ಪ್ರಸನ್ನ, ವಿನು, ಯಶ್ವಂತ, ನೀತಿನ್ ಮತ್ತಿತರರು ಹಾಜರಿದ್ದರು.

-----

15ಕೆಆರ್ ಎಂಎನ್ 4.ಜೆಪಿಜಿ

ರಾಮನಗರದ ಐಜೂರು ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

PREV

Recommended Stories

ಡಾ. ವಿ.ಎಸ್.ವಿ. ಪ್ರಸಾದರ ಸಮಾಜ ಸೇವೆ ಅವಿಸ್ಮರಣೀಯ
ಮಕ್ಕಳು ದೇಶದ ಆಸ್ತಿ: ಆಹಾರ ಸಚಿವ ಮುನಿಯಪ್ಪ