ಚಾರ ಮೇಲ್ಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಶಿವರಾಯ ನೂತನ ಶಿಲಾಮಯ ಗರಡಿಯ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಏ.1ರಿಂದ 9ರ ವರೆಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ಗರಡಿ ವಠಾರದಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಕಾರ್ಕಳ
ಚಾರ ಮೇಲ್ಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಶಿವರಾಯ ನೂತನ ಶಿಲಾಮಯ ಗರಡಿಯ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಏ.1ರಿಂದ 9ರ ವರೆಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ಗರಡಿ ವಠಾರದಲ್ಲಿ ನಡೆಯಿತು.ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನೀರೆ ಕೃಷ್ಣಶೆಟ್ಟಿ ಮಾತನಾಡಿ, ತುಳುನಾಡಿನ ವೀರಪುರುಷರು ಕೋಟಿ ಚೆನ್ನಯರು. ಅನ್ಯಾಯದ ವಿರುದ್ಧ ಧ್ವನಿ ಎತ್ತಿ ತಮ್ಮ ಕಾರ್ಯ ಸಾಧನೆಯಿಂದ ದೈವತ್ವಕ್ಕೆ ಏರಿದವರು. ಅಂದು ಸ್ಥಾಪಿಸಿದ 66 ಮೂಲ ಗರಡಿಗಳಲ್ಲಿ ಇದು ಒಂದಾಗಿದೆ. ಸುಮಾರು 475 ವರ್ಷಗಳ ಇತಿಹಾಸವಿರುವ ಗರಡಿಯ ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡಬೇಕೆಂದು ಭಕ್ತರಲ್ಲಿ ನಿವೇದನೆ ಮಾಡಿಕೊಂಡರು.
ಗೌರವಾಧ್ಯಕ್ಷ ಬಿ. ಹರ್ಷ ಶೆಟ್ಟಿ, ಅನುವಂಶಿಕ ಮೊಕ್ತೇಸರ ಸುರೇಶ್ ಹೆಗ್ಡೆ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಪ್ರಸನ್ನ ಕುಮಾರ್ ಶೆಟ್ಟಿ, ಆರ್ಥಿಕ ಮತ್ತು ಪ್ರಚಾರ ಸಮಿತಿ ಅಧ್ಯಕ್ಷ ವಾದಿರಾಜ ಶೆಟ್ಟಿ, ಕೋಶಾಧಿಕಾರಿ ರಮಾಕಾಂತ್ ಕಾಮತ್, ಪುರೋಹಿತ ಸುಬ್ರಮಣ್ಯ ಹೇರಳೆ, ಲಕ್ಷ್ಮಣ ಪೂಜಾರಿ, ಸುಧಾಕರ ಪೂಜಾರಿ, ಪ್ರಮುಖರಾದ ದಿನೇಶ್ ಶೆಟ್ಟಿ, ಮಿಥುನ್ ಶೆಟ್ಟಿ, ಅಣ್ಣಪ್ಪ ಕುಲಾಲ್ ಮಂಡಾಡಿಜೆಡ್ಡು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.