ಮಾ.೨೮ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ

KannadaprabhaNewsNetwork |  
Published : Mar 16, 2026, 12:45 AM IST
೧೪ಕೆಎಂಎನ್‌ಡಿ-೧ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವೈರಮುಡಿ ಬ್ರಹ್ಮೋತ್ಸವದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿದರು. | Kannada Prabha

ಸಾರಾಂಶ

ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವುದರ ಜೊತೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಮೇಲುಕೋಟೆಯಲ್ಲಿ ಪ್ರಮುಖ ಆಕರ್ಷಣೆಯಾದ ಮೇಲುಕೋಟೆ ವೈರಮುಡಿ ಉತ್ಸವ ಮಾ.೨೮ರಂದು ನಡೆಯಲಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮ ವಹಿಸುವಂತೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವೈರಮುಡಿ ಬ್ರಹ್ಮೋತ್ಸವದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾ.೨೩ರಿಂದ ಏ.೪ರವರೆಗೆ ವೈರಮುಡಿ ಉತ್ಸವ ನಡೆಯಲಿದ್ದು, ಉತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಮತ್ತು ಬಿಗಿಭದ್ರತೆ ಒದಗಿಸುವಂತೆ ಸೂಚಿಸಿದರು.

ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವುದರ ಜೊತೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದರು.

ಪೊಲೀಸ್ ಇಲಾಖೆಯವರು ವೈರಮುಡಿ ಬ್ರಹ್ಮೋತ್ಸವದಲ್ಲಿ ಕಿರೀಟಧಾರಣಾ ಮೆರವಣಿಗೆ ವೇಳೆ ಶಾಂತಿಯುತವಾಗಿ ಹಾಗೂ ಸಮಾಧಾನವಾಗಿ ಜನರು ದೇವರು ನೋಡುವಂತೆ ಅಗತ್ಯ ವ್ಯವಸ್ಥೆ ಮಾಡಬೇಕು. ಈ ಸಂಬಂಧ ದೇವಸ್ಥಾನದ ಅರ್ಚಕರೊಂದಿಗೆ ಸಭೆ ನಡೆಸಿ ಅಗತ್ಯ ಸಿದ್ಥತೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ಮಾತನಾಡಿ, ಭಕ್ತರಿಗೆ ಕುಡಿಯುವ ನೀರಿನ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ. ವೈರಮುಡಿ ಉತ್ಸವದಲ್ಲಿ ಜನಸಂದಣಿಯಾಗದಂತೆ ಬ್ಯಾರಿಕೇಡ್ ಅಳವಡಿಸಿ ಸಮಸ್ಯೆ ನಿವಾರಣೆಗೆ ಕ್ರಮ ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭಕ್ತಾದಿಗಳಿಗೆ ಅಗತ್ಯವಿರುವ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುವಂತೆ ಸೂಚಿಸಲಾಗಿದೆ ಎಂದರು.

ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಆರೋಗ್ಯ ಸೇವೆಗಳು, ಸಾರಿಗೆ ವ್ಯವಸ್ಥೆ ಮತ್ತು ಬಿಗಿ ಪೊಲೀಸ್ ಬಂದೋಬಸ್ತ್‌ಗೆ ಸಭೆಯಲ್ಲಿ ಆದ್ಯತೆ ನೀಡಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಿ.ಜೆ. ಶೋಭಾರಾಣಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಕಾರಿ ಶ್ರೀನಿವಾಸ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಳ ಮೀಸಲಾತಿ ರೋಸ್ಟರ್ ಹಂಚಿಕೆ ವಿರೋಧಿಸಿ 24ಕ್ಕೆ ಪ್ರತಿಭಟನೆ
ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ 105 ವರ್ಷಗಳ ಇತಿಹಾಸ ಹೊಂದಿದೆ:ಎಚ್.ಡಿ.ಕುಮಾರಸ್ವಾಮಿ