ಪಪಂ ಅಧ್ಯಕ್ಷರ ವಿರುದ್ಧ ಸದಸ್ಯರ ಆಕ್ರೋಶ

KannadaprabhaNewsNetwork |  
Published : Aug 13, 2025, 12:30 AM IST
ಸದಸ್ಯರ ಗಮನಕ್ಕೆ ತರದೆ ೨೦೨೫-೨೬ನೇ ಸಾಲಿನ ಕಾಮಗಾರಿಯ ಕ್ರಿಯಾ ಯೋಜನೆ ತಯಾರು | Kannada Prabha

ಸಾರಾಂಶ

೨೦೨೫-೨೬ನೇ ಸಾಲಿನ ಅಭಿವೃದ್ಧಿ ಕಾಮಗಾರಿಯ ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಪಪಂ ಸದಸ್ಯರ ಜೊತೆ ಚರ್ಚಿಸದೆ ಗೃಹ ಸಚಿವರ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಾಮಾನ್ಯ ಸಭೆಯಲ್ಲಿ ಸದಸ್ಯರು ಅಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಕೊರಟಗೆರೆ

೨೦೨೫-೨೬ನೇ ಸಾಲಿನ ಅಭಿವೃದ್ಧಿ ಕಾಮಗಾರಿಯ ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಪಪಂ ಸದಸ್ಯರ ಜೊತೆ ಚರ್ಚಿಸದೆ ಗೃಹ ಸಚಿವರ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಾಮಾನ್ಯ ಸಭೆಯಲ್ಲಿ ಸದಸ್ಯರು ಅಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಪಪಂ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಸದಸ್ಯರ ಸಮಾನ್ಯ ಸಭೆಯಲ್ಲಿ ಮಾತನಾಡಿದ ಸದಸ್ಯರು, ಪಪಂ ಅಧ್ಯಕ್ಷರು ಸದಸ್ಯರ ಗಮನಕ್ಕೆ ತರದೇ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯ ಬೆಳವಣಿಗೆಯಲ್ಲ. ಪೌರಕಾರ್ಮಿಕರ ಪ್ರತಿಭಟನೆ ಹಿನ್ನೆಲೆ ರದ್ದುಪಡಿಸಿದ ಸಭೆ ಪುನಃ ನಡೆಸುವ ಉದ್ದೇಶವೇನಿತ್ತು?. ಮತ್ತೆ ಸಭೆಯೆ ಕರೆದಿಲ್ಲ. ಆದರೂ ಸಹ ಕ್ರಿಯಾಯೋಜನೆ ಸಿದ್ಧವಾಗಿದೆ. ಸದಸ್ಯರ ಒಪ್ಪಿಗೆಯಂತೆ ಕ್ರಿಯಾ ಯೋಜನೆ ತಯಾರಿಸಿದ್ದೀರಾ, ಜಿಲ್ಲಾಧಿಕಾರಿಗಳನ್ನು ಮೆಚ್ಚಿಸಲು ಕೆಲಸ ಮಾಡುತ್ತಿದ್ದೀರಾ ಎಂದು ಕೆಲ ಸದಸ್ಯರು ಅಧ್ಯಕ್ಷೆ, ಉಪಾಧ್ಯಕ್ಷೆ, ಸ್ಥಾಯಿ ಸಮಿತಿ ಅಧ್ಯಕ್ಷೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.ಗೃಹ ಸಚಿವರು ಸೂಚನೆ ನೀಡಿದ್ದರೂ ಗೃಹ ಭಾಗ್ಯ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲಾ, ಪೌರ ಕಾರ್ಮಿಕರಿಗೆ ನಿರ್ಮಾಣ ಮಾಡಲಾಗಿದ್ದ ಮನೆಗಳನ್ನು ಹಸ್ತಾಂತರವಾಗಿಲ್ಲ. ಗೃಹ ಸಚಿವರು ಮಾತಿಗೆ ಕಿಮ್ಮತ್ತು ನೀಡದೆ ಕೆಲಸ ಮಾಡುತ್ತಿದ್ದೀರಾ?. ಸರ್ಕಾರದಿಂದ ವಿಶೇಷವಾಗಿ ಲಕ್ಷಾಂತರ ಅನುದಾನವನ್ನು ಬಿಡುಗಡೆಗೊಳಿಸಿದರೂ ನಗರದಲ್ಲಿ ಅಭಿವೃದ್ಧಿ ಕೆಲಸ ಮಾತ್ರ ಆಗುತ್ತಿಲ್ಲ ಎಂದು ಸದಸ್ಯರು ಆಕ್ರೋಶ ಹೊರ ಹಾಕಿದರು. ಲೋಕೋಪಯೋಗಿ ಇಲಾಖೆ ವೈಟ್ ಟಾಪಿಂಗ್ ರಸ್ತೆ ಮಾತ್ರ ಸಂಪೂರ್ಣಗೊಳಿಸಿದೆ. ಇಲ್ಲಿಯವರೆಗೂ ಪುಟ್‌ ಪಾತ್ ವ್ಯವಸ್ಥೆ ಆಗಿಲ್ಲಾ. ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿ ಪ್ರತಿದಿನ ಮುಂಜಾನೆ ೨೦ಕ್ಕೂ ಹೆಚ್ಚು ವ್ಯಾಪಾರಸ್ಥರು ನೂರಾರು ಮಂದಿ ನಾಗರಿಕರು ಸಂಚರಿಸುತ್ತಿರುತ್ತಾರೆ. ಪುಟ್‌ ಪಾತ್ ವ್ಯವಸ್ಥೆಯಿಲ್ಲದ ಕಾರಣ ರಸ್ತೆಯಿಲ್ಲಿಟ್ಟು ವ್ಯಾಪಾರಕ್ಕೆ ಮುಂದಾಗಿದ್ದಾರೆ. ಬಸ್ ಸೇರಿದಂತೆ ಇತರೆ ವಾಹನಗಳು ವೇಗವಾಗಿ ಬರುತ್ತಿದ್ದರೂ ಸಹ ನಿಟ್ಟಿಲ್ಲದೆ ಮಾರುಕಟ್ಟೆಯಲ್ಲಿ ನಿಂತಿರುತ್ತಾರೆ ಮುಂದಿನ ದಿನಗಳಲ್ಲಿ ಅನಾಹುತ ಸಂಭವಿಸಿದರೆ ಅದಕ್ಕೆ ಹೊಣೆ ಯಾರು ಎಂಬುದನ್ನು ಸದಸ್ಯರು ಸಾಮಾನ್ಯ ಸಭೆಯಲ್ಲಿ ಜನರ ಪರವಾಗಿ ಧ್ವನಿ ಎತ್ತಿದರು.

ಸಭೆಯಲ್ಲಿ ಪ.ಪಂ ಅಧ್ಯಕ್ಷೆ ಅನಿತಾ, ಉಪಾಧ್ಯಕ್ಷೆ ಹುಸ್ನಾಫಾರೀಯ, ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಮಂಜುನಾಥ್, ಮುಖ್ಯಾಧಿಕಾರಿ ಉಮೇಶ್, ಸದಸ್ಯ ನಟರಾಜ್, ಓಬಳರಾಜು, ಭಾರತಿ ಸಿದ್ದಮಲ್ಲಪ್ಪ, ಪುಟ್ಟನರಸಪ್ಪ, ನಾಗರಾಜು, ನಂದೀಶ್, ಲಕ್ಷ್ಮೀನಾರಾಯಣ್, ನಾಮಿನಿ ಸದಸ್ಯರಾದ ಫಯಾಜ್ ಅಹಮದ್, ಎಂ.ಜಿ ಸುಧೀರ್, ಮಂಜುಳಾ ಗೋವಿಂದರಾಜು ಸೇರಿದಂತೆ ಇತರರು ಇದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ