ಸದಸ್ಯರಿಂದ ಶಿಗ್ಗಾಂವಿ ಪುರಸಭೆ ವಿಶೇಷ ಸಭೆ ಬಹಿಷ್ಕಾರ

KannadaprabhaNewsNetwork |  
Published : Aug 27, 2025, 01:02 AM IST
ಶಿಗ್ಗಾಂವಿಯ ಪುರಸಭೆ ಎದುರು ಕೆಲ ಸದಸ್ಯರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಸಾಮಾನ್ಯ ಸಭೆಯಲ್ಲಿ ಚರ್ಚಿಸುವ ವಿಷಯಗಳನ್ನು ವಿಶೇಷ ಸಭೆಯಲ್ಲಿ ಚರ್ಚಿಸಿ ಅನುಮೋದನೆ ತೆಗೆದುಕೊಳ್ಳುವ ಕೆಲಸವಾಗುತ್ತಿದೆ.

ಶಿಗ್ಗಾಂವಿ: ಪಟ್ಟಣದ ಅಭಿವೃದ್ಧಿ ಕುರಿತು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿ, ಪುರಸಭೆ ಅಧ್ಯಕ್ಷ ಸಿದ್ದಾರ್ಥಗೌಡ ಪಾಟೀಲರ ಕಾರ್ಯವೈಖರಿ ಖಂಡಿಸಿ ಸೋಮವಾರ ವಿಶೇಷ ಸಭೆ ಬಹಿಷ್ಕರಿಸಿದ ಕೆಲವು ಸದಸ್ಯರು ಪುರಸಭೆ ಎದುರು ಪ್ರತಿಭಟನೆ ನಡೆಸಿದರು.ಈ ವೇಳೆ ಪುರಸಭೆ ಸದಸ್ಯ ಶ್ರೀಕಾಂತ ಬುಳ್ಳಕ್ಕನವರ ಮಾತನಾಡಿ, ಸಾಮಾನ್ಯ ಸಭೆಯಲ್ಲಿ ಚರ್ಚಿಸುವ ವಿಷಯಗಳನ್ನು ವಿಶೇಷ ಸಭೆಯಲ್ಲಿ ಚರ್ಚಿಸಿ ಅನುಮೋದನೆ ತೆಗೆದುಕೊಳ್ಳುವ ಕೆಲಸವಾಗುತ್ತಿದೆ. ಇದನ್ನು ಪ್ರಶ್ನಿಸಿದ ಸದಸ್ಯನ ಮೇಲೆ ಸದಸ್ಯ ಜಾಫರ್ ಪಠಾಣ ನಿನ್ನನ್ನು ನೋಡಿಕೊಳ್ಳುತ್ತೇನೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ. ಪುರಸಭೆಯ ಹಿರಿಯ ಸದಸ್ಯರಾಗಿದ್ದ ಸುಭಾಸ ಚೌಹಾಣ್ ನಿಧನರಾದರೂ ಅವರಿಗೆ ಸಂತಾಪ ಸೂಚಿಸದೆ ಅವಮಾನ ಮಾಡುತ್ತಿದ್ದಾರೆ ಎಂದರು.ಕಳೆದ ಒಂದು ವರ್ಷವಾದರೂ ಸಾಮಾನ್ಯ ಸಭೆ ಕರೆದಿಲ್ಲ. ಜನರು ಪುರಸಭೆಗೆ ಕೆಲಸ ಕಾರ್ಯಗಳಿಗೆ ಬಂದರೆ ಅಧಿಕಾರಿಗಳು ಕಚೇರಿಯಲ್ಲಿ ಇರುವುದಿಲ್ಲ. ಪಕ್ಷಕ್ಕಿಂತ ಊರಿನ ಹಿತ ಮುಖ್ಯ. ಪಟ್ಟಣದಲ್ಲಿ ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳಿಗೆ ಸ್ವಚ್ಛತೆ ಆಗಿಲ್ಲ ಎಂದು ಆರೋಪಿದರು.ಪುರಸಭೆ ಅಧ್ಯಕ್ಷ ಸಿದ್ದಾರ್ಥಗೌಡ ಪಾಟೀಲ ಅವರು ಕೆಲವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು, ಹೀಗಾಗಿ ರಾಜೀನಾಮೆ ನೀಡಬೇಕು ಎಂದು ಸದಸ್ಯ ದಯಾನಂದ ಅಕ್ಕಿ ಆಗ್ರಹಿಸಿದರು.ಸದಸ್ಯರಾದ ಶ್ರೀಕಾಂತ ಬುಳ್ಳಕನವರ, ಸುಲೇಮಾನ್ ಭಾಷಾ ತರ್ಲಘಟ್ಟ, ನಸ್ರೀನ್ ಬಾನು ತಿಮ್ಮಾಪುರ, ಮುಮ್ತಾಜ್ ಗೊಟಗೋಡಿ, ಮುಸ್ತಾಕ್ ಅಹಮ್ಮದ್ ತಹಶೀಲ್ದಾರ್, ಜ್ಯೋತಿ ನಡೂರ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆರೋಪ ಸತ್ಯಕ್ಕೆ ದೂರ: ಪಟ್ಟಣದ ಅಭಿವೃದ್ಧಿಯ ದೃಷ್ಟಿಯಿಂದ ಕೆಲ ಟೆಂಡರ್‌ಗಳಿಗೆ ತುರ್ತು ಅನುಮೋದನೆ ಕೊಡುವುದಿತ್ತು. ಹೀಗಾಗಿ ವಿಶೇಷ ಸಭೆಯನ್ನು ಕರೆದಿದ್ದೇವೆ. ಸಭೆಯಲ್ಲಿ ಸದಸ್ಯರಿಗೆ ಯಾವುದೇ ನಿಂದನೆ ಮಾಡಿಲ್ಲ. ಎಲ್ಲ ಸದಸ್ಯರ ಸಹಕಾರದಿಂದ ಕಾರ್ಯನಿರ್ವಹಿಸುತ್ತಿದ್ದೇನೆ. ನಮ್ಮ ವಿರುದ್ಧ ಮಾಡುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಪುರಸಭೆ ಅಧ್ಯಕ್ಷ ಸಿದ್ದಾರ್ಥಗೌಡ ಪಾಟೀಲ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ