ಉಗ್ನಿಕೇರಿಯಲ್ಲಿ ಸಚಿವ ಜೋಶಿಯಿಂದ ಸದಸ್ಯತ್ವ ನೋಂದಣಿ

KannadaprabhaNewsNetwork |  
Published : Sep 16, 2024, 01:50 AM IST
15ಕೆಎಲ್‌ಜಿ2ಬಿಜೆಪಿ ಸದಸ್ಯತ್ವ ಅಭಿಯಾನ ಅಂಗವಾಗಿ ಕಲಘಟಗಿ ತಾಲೂಕಿನ ಉಗ್ನಿಕೇರಿ ಗ್ರಾಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಗ್ರಾಮದ ವಿವಿಧೆಡೆ ಸಂಚರಿಸಿ ಅನೇಕರಿಂದ ಸದಸ್ಯತ್ವ ನೋಂದಣಿ ಮಾಡಿಸಿದರು. | Kannada Prabha

ಸಾರಾಂಶ

ಭಾರತೀಯ ಜನತಾ ಪಕ್ಷ ವಿಶ್ವದಲ್ಲೇ ಅತೀ ಹೆಚ್ಚು ಸದಸ್ಯರನ್ನು ಹೊಂದಿದೆ. ಎಲ್ಲಡೆ ಬಿಜೆಪಿ ಸೇರಲು ಜನರು ಉತ್ಸುಕರಾಗಿದ್ದಾರೆ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಕಲಘಟಗಿ: ಬಿಜೆಪಿ ಸದಸ್ಯತ್ವ ಅಭಿಯಾನ ಅಂಗವಾಗಿ ತಾಲೂಕಿನ ಉಗ್ನಿಕೇರಿ ಗ್ರಾಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಗ್ರಾಮದ ವಿವಿಧೆಡೆ ಸಂಚರಿಸಿ ಅನೇಕರಿಂದ ಸದಸ್ಯತ್ವ ನೋಂದಣಿ ಮಾಡಿಸಿದರು.

ಉಗ್ನಿಕೇರಿ ಗ್ರಾಮದ ಬಸ್ ನಿಲ್ದಾಣ, ಹರಿಜನ ಕೇರಿ, ಕುರುವಿನಕೊಪ್ಪ ರಸ್ತೆ ಮಾರ್ಗಗಳಲ್ಲಿ ಸಂಚರಿಸಿದ ಸಚಿವರು, ಜನರ ಕುಶಲೋಪರಿ ವಿಚಾರಿಸಿದರು. ಸ್ವತಃ ತಾವೇ ಬಿಜೆಪಿ ಪಕ್ಷದ ಧ್ಯೇಯ-ಉದ್ದೇಶಗಳ ಬಗ್ಗೆ ವಿವರಿಸಿ ಸದಸ್ಯತ್ವ ನೋಂದಣಿ ಮಾಡಿಸಿದರು.

ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಜೋಶಿ, ಭಾರತೀಯ ಜನತಾ ಪಕ್ಷ ವಿಶ್ವದಲ್ಲೇ ಅತೀ ಹೆಚ್ಚು ಸದಸ್ಯರನ್ನು ಹೊಂದಿದೆ. ಎಲ್ಲಡೆ ಬಿಜೆಪಿ ಸೇರಲು ಜನರು ಉತ್ಸುಕರಾಗಿದ್ದಾರೆ. ಬಿಜೆಪಿ ಕಾರ್ಯಕರ್ತರು ಜನರ ಬಳಿ ಹೋಗಿ ಹೆಚ್ಚು ನೋಂದಣಿಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಸಚಿವ ಜೋಶಿ ಅವರಿಗೆ ಮಾಜಿ ಎಂ.ಎಲ್.ಸಿ. ನಾಗರಾಜ ಛಬ್ಬಿ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಬಿಜೆಪಿ ಮುಖಂಡರಾದ ಶಶಿಧರ ನಿಂಬಣ್ಣವರ, ಐ.ಸಿ. ಗೋಕುಲ, ಅಣ್ಣಪ್ಪ ಓಲೇಕಾರ, ಫಕ್ಕೀರೇಶ ನೇಸರೇಕರ, ಪುಂಡಲೀಕ ಜಾಧವ, ಆನಂದ ಕಡ್ಲಾಸ್ಕರ, ರವಿ ಅಲ್ಲಾಪುರ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ