ಕನ್ನಡಪ್ರಭ ವಾರ್ತೆ ಮೈಸೂರು
ಜೆಡಿಎಸ್ ಪಕ್ಷವು ನಗರದ ಮಂಜುನಾಥಪುರದ ಎಚ್. ಕೆಂಪೇಗೌಡ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ನಗರ ಹಾಗೂ ಜಿಲ್ಲಾ ಘಟಕದ ಸದಸ್ಯತ್ವ ನೋಂದಣಿ ಮತ್ತು ಬೂತ್ ಸಮಿತಿ ಅಭಿಯಾನದಲ್ಲಿ ಅವರು ಮಾತನಾಡಿದರು.
ಸದ್ಯದಲ್ಲಿಯೇ ನಗರ ಪಾಲಿಕೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಯಲಿದೆ. ಈ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಸಕ್ರಿಯರಾಗಿ ಸದಸ್ಯತ್ವ ನೊಂದಣಿಯಲ್ಲಿ ತೊಡಗಿಸಿಕೊಳ್ಳಬೇಕು. ಇಲ್ಲದಿದ್ದರೆ ಬಿ ಫಾರಂ ಸಿಗುವುದಿಲ್ಲ ಎಂದರು.ಪಕ್ಷದ ಸಂಘಟನೆ ಬಲಪಡಿಸುವ ಉದ್ದೇಶದಿಂದ ಸದಸ್ಯತ್ವ ನೋಂದಣಿ ಮಾಡಿಸಲಾಗುತ್ತಿದೆ ಎಂದರು.
ಹೋಟೆಲ್ ಅಥವಾ ಎಲ್ಲೋ ಕುಳಿತು ಬೂತ್ ಸಮಿತಿ ಮಾಡಬಾರದು. ಬೂತ್ ನಲ್ಲಿಯೇ ಆ ಕೆಲಸ ನಡೆಯಬೇಕು. ಹಣವನ್ನು ನೀವ್ಯಾರೂ ಹಾಕಬೇಡಿ. ಸದಸ್ಯರಿಂದಲೇ ಕಟ್ಟಿಸಿ. ಆಗ, ಪಕ್ಷಕ್ಕೆ ನಾನೂ ಹಣ ಕೊಟ್ಟಿದ್ದೇನೆ ಎಂಬ ಭಾವನೆ ಕಾರ್ಯಕರ್ತರಲ್ಲಿ ಬಂದು ಚೆನ್ನಾಗಿ ಕೆಲಸ ಮಾಡುತ್ತಾರೆ ಎಂದು ಅವರು ಹೇಳಿದರು.
ಜೆಡಿಎಸ್ ಪ್ರಮುಖರ ಸಮಿತಿ ಅಧ್ಯಕ್ಷ ಜಿ.ಟಿ. ದೇವೇಗೌಡ, ಶಾಸಕ ಜಿ.ಡಿ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಪಕ್ಷದ ನಗರ ಘಟಕದ ಅಧ್ಯಕ್ಷ ಕೆ.ಟಿ. ಚಲುವೇಗೌಡ, ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಹಸ್ವಾಮಿ, ಮುಖಂಡರಾದ ಕೆ.ಟಿ. ಶ್ರೀಕಂಠೇಗೌಡ, ಎಚ್.ಕೆ. ರಾಮು, ಪ್ರೇಮಾ ಶಂಕರೇಗೌಡ, ಆರ್. ಲಿಂಗಪ್ಪ, ಎಂ. ಅಶ್ವಿನ್ ಕುಮಾರ್, ಸತೀಶ್, ಕೃಷ್ಣ, ಶಿವಣ್ಣ, ಭಾಗ್ಯವತಿ, ರಾಜೇಶ್ವರಿ ಸೋಮು, ಎಸ್.ಬಿ.ಎಂ. ಮಂಜು, ಎಂ.ಜೆ. ರವಿಕುಮಾರ್, ಅಶ್ವಿನಿ ಇದ್ದರು.
- ಜಿ.ಟಿ. ದೇವೇಗೌಡ, ಜೆಡಿಎಸ್ ಪ್ರಮುಖರ ಸಮಿತಿ ಅಧ್ಯಕ್ಷ