ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಮನವಿ

KannadaprabhaNewsNetwork |  
Published : Aug 24, 2026, 03:15 AM IST
ಎಐಯುಟಿಯುಸಿ ಮನವಿ | Kannada Prabha

ಸಾರಾಂಶ

ದೇವರಹಿಪ್ಪರಗಿ : ರಾಜ್ಯ ಸರ್ಕಾರ ಉದ್ಯಮಿಗಳ ಒತ್ತಡಕ್ಕೆ ಮಣಿದು ಪರಿಷ್ಕೃತ ಕನಿಷ್ಠ ವೇತನ ಜಾರಿ ತಡೆಹಿಡಿದಿರುವುದನ್ನು ಖಂಡಿಸಿ, ತಕ್ಷಣವೇ ಜಾರಿಗೊಳಿಸುವಂತೆ ಆಗ್ರಹಿಸಿ ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಕಾರ್ಮಿಕರ ನಿಯೋಗ ಶಾಸಕರ ಸ್ವಗೃಹದಲ್ಲಿ ಶಾಸಕ ರಾಜುಗೌಡ ಪಾಟೀಲ ಕುದರಿ ಸಾಲವಾಡಗಿ ಅವರಿಗೆ ಮನವಿ ಸಲ್ಲಿಸಿತು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ರಾಜ್ಯ ಸರ್ಕಾರ ಉದ್ಯಮಿಗಳ ಒತ್ತಡಕ್ಕೆ ಮಣಿದು ಪರಿಷ್ಕೃತ ಕನಿಷ್ಠ ವೇತನ ಜಾರಿ ತಡೆಹಿಡಿದಿರುವುದನ್ನು ಖಂಡಿಸಿ, ತಕ್ಷಣವೇ ಜಾರಿಗೊಳಿಸುವಂತೆ ಆಗ್ರಹಿಸಿ ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಕಾರ್ಮಿಕರ ನಿಯೋಗ ಶಾಸಕರ ಸ್ವಗೃಹದಲ್ಲಿ ಶಾಸಕ ರಾಜುಗೌಡ ಪಾಟೀಲ ಕುದರಿ ಸಾಲವಾಡಗಿ ಅವರಿಗೆ ಮನವಿ ಸಲ್ಲಿಸಿತು. ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಮಹಾದೇವಿ ಧರ್ಮಶೆಟ್ಟಿ ಮಾತನಾಡಿ, ಸುದೀರ್ಘ 9 ವರ್ಷಗಳ ಹೋರಾಟದ ನಂತರ ಕಾರ್ಮಿಕ ಇಲಾಖೆ ಹಾಗೂ ಕನಿಷ್ಠ ವೇತನ ಸಲಹಾ ಮಂಡಳಿಯ ಶಿಫಾರಸಿನಂತೆ ಕನಿಷ್ಠ ವೇತನ ಪರಿಷ್ಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಆದರೆ, ಹೈಕೋರ್ಟ್‌ ತಡೆಯಾಜ್ಞೆ ನೀಡದಿದ್ದರೂ, ಸರ್ಕಾರ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಂಪುಟ ಉಪ ಸಮಿತಿ ರಚಿಸಿ ಈ ಆದೇಶಕ್ಕೆತಡೆ ನೀಡಿದೆ. ಇದು ಸಂಪೂರ್ಣ ಕಾನೂನು ಬಾಹಿರ ಹಾಗೂ ಕಾರ್ಮಿಕ ವಿರೋಧಿ ನಡೆಯಾಗಿದೆ ಎಂದು ಆರೋಪಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಕಾರ್ಮಿಕರ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಹಾಗೂ ಕಾರ್ಮಿಕ ಸಚಿವರ ಗಮನಕ್ಕೆ ತಂದು ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಎಐಯುಟಿಯುಸಿ ಸಂಘಟನೆಯ ಪ್ರಮುಖ ಪದಾಧಿಕಾರಿಗಳಾದ ಮಹಾದೇವಿಚಲವಾದಿ, ಶೋಭಾಕರ್ಜಗಿ, ಕಾಂತಪ್ಪ ಲಮಾಣಿ, ಕವಿತಾಒಡ್ಡೊಡಗಿ, ಭೀಮಯ್ಯಾ ಹಿರೆಮಠ, ಸಿದ್ದು ಬೆಣ್ಣುರ, ಶೇಖರಗೌಡ ಪಾಟೀಲ ವಿವಿಧ ರಂಗಗಳ ಕಾರ್ಮಿಕ ಪ್ರತಿನಿಧಿಗಳು ಇದ್ದರು.

ಪ್ರಮುಖ ಬೇಡಿಕೆಗಳು:

ಪರಿಷ್ಕೃತ ಕನಿಷ್ಠ ವೇತನ ಅಧಿಸೂಚನೆ ವಿಳಂಬವಿಲ್ಲದೆ ಜಾರಿಗೊಳಿಸಬೇಕು.

ಜಾರಿಗೆ ತಡೆ ಒಡ್ಡುವ ಉದ್ದೇಶದಿಂದಲೇ ರಚಿಸಲಾದ ಸಚಿವ ಸಂಪುಟ ಉಪ ಸಮಿತಿ ತಕ್ಷಣವೇ ರದ್ದುಗೊಳಿಸಬೇಕು.

ಜಾರಿಯಾಗಬೇಕಿದ್ದ ಅವಧಿಯ ಬಾಕಿ ವೇತನ ವ್ಯತ್ಯಾಸದ ಮೊತ್ತವನ್ನು ಕಾರ್ಮಿಕರಿಗೆವಿತರಿಸಬೇಕು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಸ್ಟ್.....ಜರ್ಮನಿಯ ಕನ್ಯೆ ಕೈಹಿಡಿದ ಬಾಗಲಕೋಟೆ ವರ
ರಾಯಲ್ ಸ್ಕೂಲ್‌ನಲ್ಲಿ ಎಐ ಲ್ಯಾಬ್ ಆರಂಭ