ರಾಷ್ಟ್ರಧ್ವಜದ ಗೌರವ ರಕ್ಷಣೆಗೆ ಆಗ್ರಹಿಸಿ ಮನವಿ

KannadaprabhaNewsNetwork |  
Published : Aug 12, 2026, 02:00 AM IST
ರಾಷ್ಟ್ರ ದ್ವಜದ ಅಗೌರವ ತಡೆಯುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬಿಇಒ ರವರಿಗೆ ಮನವಿ ಸಲ್ಲಿಸಲಾಯಿತು | Kannada Prabha

ಸಾರಾಂಶ

ರಾಷ್ಟ್ರಧ್ವಜ ದೇಶದ ಪ್ರತಿಯೊಬ್ಬ ನಾಗರಿಕರ ಆತ್ಮಸಾಕ್ಷಿಯ ಪ್ರತೀಕವಾಗಿದೆ.

ಕನ್ನಡಪ್ರಭ ವಾರ್ತೆ ಶಿಕಾರಿಪುರ

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜ ಎಲ್ಲೆಡೆ ಬಿದ್ದು ಅಗೌರವ, ಅವಮಾನವಾಗುವುದನ್ನು ತಡೆಯುವಂತೆ ಮುಂಬೈ ಹೈಕೋರ್ಟ್‌ ಆದೇಶದ ಜತೆಗೆ ಕೇಂದ್ರ ಹಾಗೂ ರಾಜ್ಯದ ಗೃಹ ಇಲಾಖೆ, ಶಿಕ್ಷಣ ಇಲಾಖೆಯ ಸ್ಪಷ್ಟ ಸುತ್ತೋಲೆಯನ್ನು ಉಲ್ಲಂಘಿಸಿ ನಡೆಯುವ ಕೃತ್ಯವನ್ನು ಕಟ್ಟುನಿಟ್ಟಾಗಿ ತಡೆಗಟ್ಟುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ತಾಲೂಕು ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ, ಡಿ.ವೈ.ಎಸ್. ಪಿ. ಮತ್ತು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ನೇತೃತ್ವ ವಹಿಸಿದ್ದ ಸಮಿತಿ ಸಂಚಾಲಕ ಪರಶುರಾಮ ಮಾತನಾಡಿ, ರಾಷ್ಟ್ರಧ್ವಜ ದೇಶದ ಪ್ರತಿಯೊಬ್ಬ ನಾಗರಿಕರ ಆತ್ಮಸಾಕ್ಷಿಯ ಪ್ರತೀಕವಾಗಿದೆ. ರಾಷ್ಟ್ರೀಯ ಧ್ವಜವನ್ನು 15 ಆಗಸ್ಟ್ ಮತ್ತು 26 ಜನವರಿಯಲ್ಲಿ ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ. ಆದರೆ ಅದೇ ದಿನ ದ್ವಜಾರೋಹಣ ನಂತರದಲ್ಲಿ ರಸ್ತೆ ಹಾಗೂ ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿಸಾಡುವುದು ಸಾಮಾನ್ಯವಾಗಿದೆ ಎಂದರು.

ಇತ್ತೀಚಿನ ವರ್ಷದಲ್ಲಿ ಹೆಚ್ಚಾಗಿರುವ ಪ್ಲಾಸ್ಟಿಕ್ ಧ್ವಜಗಳು ತಕ್ಷಣವೇ ನಾಶವಾಗುವುದಿಲ್ಲ. ಅನೇಕ ದಿನಗಳವರೆಗೆ ಹಾದಿಬೀದಿಯಲ್ಲಿ ಅಗೌರವವನ್ನು ಕಾಣಬೇಕಾಗಿದೆ. ರಾಷ್ಟ್ರಧ್ವಜದ ಈ ಅಗೌರವವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿಯಿಂದ ಮುಂಬೈ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯವು ಪ್ಲಾಸ್ಟಿಕ್ ರಾಷ್ಟ್ರಧ್ವಜದಿಂದ ಆಗುವ ಅವಮಾನವನ್ನು ನಿಲ್ಲಿಸುವಂತೆ ಸರ್ಕಾರಕ್ಕೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಗೃಹ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿ ''''''''ಪ್ಲಾಸ್ಟಿಕ್ ನಿಷೇಧ''''''''ಕ್ಕೆ ಮುಂದಾಗಿದೆ. ಈ ದಿಸೆಯಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾರಾಟ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಇದು ''''''''ಲಾಂಛನಗಳು ಮತ್ತು ಹೆಸರುಗಳ (ಅನುಚಿತ ಬಳಕೆ ತಡೆ) ಕಾಯಿದೆ 1950 ಮತ್ತು ರಾಷ್ಟ್ರೀಯ ಗೌರವ ಅವಮಾನಗಳ ತಡೆ ಕಾಯ್ದೆ 1971ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಿದರು.

ಸಮಿತಿಯು ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ರಾಷ್ಟ್ರಧ್ವಜ ಅವಮಾನಿಸುವುದರ ವಿರುದ್ಧ ಜನಜಾಗೃತಿ ಮೂಡಿಸುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಉಪನ್ಯಾಸ, ಪ್ರಶ್ನೋತ್ತರ ಸ್ಪರ್ಧೆಗಳನ್ನು ಆಯೋಜಿಸುವುದು, ಕರಪತ್ರಗಳನ್ನು ವಿತರಿಸುವುದು, ಪೋಸ್ಟರ್ ಫ್ಲೆಕ್ಸ್‌ಗಳನ್ನು ಅಳವಡಿಸುವುದು, ಸ್ಥಳೀಯ ಕೇಬಲ್ ಚಾನೆಲ್‌ಗಳಲ್ಲಿ ವಿಡಿಯೊ(ಸಿಡಿ) ಪ್ರದರ್ಶನ, ರಸ್ತೆಗಳಲ್ಲಿ ಬಿದ್ದಿರುವ ರಾಷ್ಟ್ರಧ್ವಜಗಳನ್ನು ಸಂಗ್ರಹಿಸಿ ಸಾಮಾಜಿಕ ಜಾಲತಾಣದ ಮೂಲಕ ಜಾಗೃತಿ ಕಾರ್ಯಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ರಾಷ್ಟ್ರಧ್ವಜದ ಅವಮಾನ ತಡೆಯಲು ರಾಷ್ಟ್ರ ಧ್ವಜ ಗೌರವ ಕೃತಿ ಸಮಿತಿಯನ್ನು ಸ್ಥಾಪಿಸಬೇಕು. ಎಲ್ಲೆಂದರಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದರೆ ಕೂಡಲೇ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಶಾಲೆಗಳಲ್ಲಿ ''''''''ರಾಷ್ಟ್ರಧ್ವಜವನ್ನು ಗೌರವಿಸಿ'''''''' ಎಂಬ ಉಪಕ್ರಮವನ್ನು ನಡೆಸಲು ಸೂಚನೆಗಳನ್ನು ನೀಡಬೇಕೆಂದು ಅವರು ಸರ್ಕಾರವನ್ನು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಮುಖಂಡ ಈರೇಶ್, ಪ್ರಕಾಶ್, ಪುಷ್ಪ ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ: ಡಿ.ಸಿ.ತಮ್ಮಣ್ಣ ತೀವ್ರ ವಿರೋಧ
ಮನೆ ದೇವರ ದರ್ಶನ ಪಡೆದ ಸಚಿವ ಚಲುವರಾಯಸ್ವಾಮಿ ದಂಪತಿ