ಧಾರ್ಮಿಕ ಕಾರ್ಯಕ್ರಮಗಳು ಭಕ್ತರ ಆಧ್ಯಾತ್ಮಿಕ ಚೇತನೆಯನ್ನು ವೃದ್ಧಿಸುವ ಉದ್ದೇಶ ಹೊಂದಿವೆ ಎಂದು ಹೇಳಿದರು. ಮೇ 6, 2026ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಶಿವಲಿಂಗ ಮಹಾಸ್ವಾಮಿಗಳವರ ಭಾವಚಿತ್ರದೊಂದಿಗೆ ಬೆಳ್ಳಿ ಪಲ್ಲಕ್ಕಿ ಉತ್ಸವವನ್ನು ದೇವಾಲಯದ ಆವರಣದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಗುವುದು. ನಂತರ ಬೆಳಗ್ಗೆ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಸಭಾ ಕಾರ್ಯಕ್ರಮವು ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಅರಸೀಕೆರೆ
ತಾಲೂಕಿನ ಸುಕ್ಷೇತ್ರ ಕೋಡಿಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಪೀಠಾಧ್ಯಕ್ಷರಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು, ಶ್ರೀ ಶಿವಲಿಂಗ ಸ್ವಾಮಿಗಳವರ 139ನೇ ವರ್ಷದ ಸ್ಮರಣಾರಾಧನೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ ಎಂದು ತಿಳಿಸಿದರು.ತಾಲೂಕಿನ ಕಣಕಟ್ಟೆ ಹೋಬಳಿಯ ಮಾಡಾಳು ಗ್ರಾಮದಲ್ಲಿರುವ ಶ್ರೀ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಾಲಯದಲ್ಲಿ ಮೇ 1ರಿಂದ ಪ್ರತಿದಿನ ಪುರಾಣ ಪ್ರವಚನವನ್ನು ಶ್ರೀ ಕಲ್ಲಿನಾಥ ಶಾಸ್ತ್ರಿಗಳವರಿಂದ ನಡೆಸಲಾಗುತ್ತಿದೆ. ಈ ಧಾರ್ಮಿಕ ಕಾರ್ಯಕ್ರಮಗಳು ಭಕ್ತರ ಆಧ್ಯಾತ್ಮಿಕ ಚೇತನೆಯನ್ನು ವೃದ್ಧಿಸುವ ಉದ್ದೇಶ ಹೊಂದಿವೆ ಎಂದು ಹೇಳಿದರು. ಮೇ 6, 2026ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಶಿವಲಿಂಗ ಮಹಾಸ್ವಾಮಿಗಳವರ ಭಾವಚಿತ್ರದೊಂದಿಗೆ ಬೆಳ್ಳಿ ಪಲ್ಲಕ್ಕಿ ಉತ್ಸವವನ್ನು ದೇವಾಲಯದ ಆವರಣದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಗುವುದು. ನಂತರ ಬೆಳಗ್ಗೆ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಸಭಾ ಕಾರ್ಯಕ್ರಮವು ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಹರಗುರು ಚರಮೂರ್ತಿಗಳು ಭಕ್ತರಿಗೆ ಆಶೀರ್ವಚನ ನೀಡಲಿದ್ದು, ವಿವಿಧ ಗಣ್ಯರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಶ್ರೀಗಳು ತಿಳಿಸಿದರು.
ಸಭಾ ಕಾರ್ಯಕ್ರಮದ ನಂತರ ಭಕ್ತರಿಗೆ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.