ಮಹಿಳೆಯರಿಗಿಂತ ಪುರುಷರೇ ಹೆಚ್ಚು ಜಾಗೃತರಾಗಬೇಕು

KannadaprabhaNewsNetwork |  
Published : Nov 26, 2026, 03:30 AM IST
ಪೋಟೋ: 25ಎಸ್‌ಎಂಜಿಕೆಪಿ01ಶಿವಮೊಗ್ಗದ ಪತ್ರಿಕಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಮಾತನಾಡಿದರು.  | Kannada Prabha

ಸಾರಾಂಶ

Men need to be more aware than women.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಪುರುಷರು ಉದ್ಯೋಗ ಸ್ಥಳದಲ್ಲಿ ಮಹಿಳೆಯರೊಂದಿಗೆ ಹೆಚ್ಚಿನ ಜವಾಬ್ದಾರಿ, ಸಂಯಮ ಮತ್ತು ಜಾಗೃತಿಯಿಂದ ವರ್ತಿಸಬೇಕು. ಮಹಿಳೆಯರ ಮೇಲಿನ ದೌರ್ಜನ್ಯ ಅಥವಾ ಲೈಂಗಿಕ ಕಿರುಕುಳದಂತಹ ತಪ್ಪುಗಳು ನಡೆದರೆ ಯಾವುದೇ ಕನಿಕರವಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್. ಸಂತೋಷ್ ಹೇಳಿದರು.

ಕುವೆಂಪು ವಿಶ್ವವಿದ್ಯಾಲಯದ ಬಸವ ಸಭಾಭವನದಲ್ಲಿ ಮಹಿಳಾ ದೌರ್ಜನ್ಯ ಪರಿಹಾರ ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದೌರ್ಜನ್ಯ ತಡೆ ದಿನಾಚರಣೆ ಕಾರ್ಯಕ್ರಮದಲ್ಲಿ ''''''''''''''''ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ ಕಾಯ್ದೆ(POSH)–2013'''''''''''''''' ಕುರಿತು ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿ, ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದು ಮತ್ತು ಅವರ ಹಕ್ಕು ಹಾಗೂ ಹಿತಾಸಕ್ತಿಗಳನ್ನು ರಕ್ಷಿಸುವುದು ಪೋಶ್ (POSH) ಕಾಯ್ದೆಯ ಪ್ರಮುಖ ಉದ್ದೇಶವಾಗಿದೆ. ಯಾವುದೇ ವೃತ್ತಿ ಅಥವಾ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳುವುದು ಮಹಿಳೆಯ ಮೂಲಭೂತ ಹಕ್ಕಾಗಿದ್ದು, ಅದಕ್ಕೆ ಪೂರಕವಾದ ಸುರಕ್ಷಿತ ವಾತಾವರಣ ನಿರ್ಮಿಸುವ ಜವಾಬ್ದಾರಿ ಸಂಸ್ಥೆಗಳು ಹಾಗೂ ಸಮಾಜದ ಮೇಲಿದೆ ಎಂದರು.

ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಮತ್ತು ನ್ಯಾಯ ಒದಗಿಸುವ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ನಿಜವಾಗಿಯೂ ಲೈಂಗಿಕ ಕಿರುಕುಳಕ್ಕೆ ಒಳಗಾದವರು ಯಾವುದೇ ಭಯವಿಲ್ಲದೆ ಮುಂದೆ ಬಂದು ದೂರು ದಾಖಲಿಸಿ, ಕಾಯ್ದೆಯಡಿ ಸೂಕ್ತ ಪರಿಹಾರ ಪಡೆದುಕೊಳ್ಳಬೇಕು. ಅದೇ ರೀತಿ ಕಾಯ್ದೆಯ ದುರುಪಯೋಗವಾಗದಂತೆ ಎಚ್ಚರ ವಹಿಸುವುದೂ ಅತ್ಯಗತ್ಯ ಎಂದರು.

ಖಾಸಗಿ, ಸರ್ಕಾರಿ ಹಾಗೂ ಅರೆಸರ್ಕಾರಿ ಸಂಸ್ಥೆಗಳು, ಕಾಲೇಜುಗಳು, ಹಾಸ್ಟೆಲ್‌ಗಳು, ಬಸ್ ನಿಲ್ದಾಣಗಳು ಸೇರಿದಂತೆ ಉದ್ಯೋಗಕ್ಕೆ ಸಂಬಂಧಿಸಿದ ವಿವಿಧ ಸ್ಥಳಗಳು ಕಾರ್ಯಸ್ಥಳದ ವ್ಯಾಪ್ತಿಗೆ ಬರುತ್ತವೆ. ಉದ್ಯೋಗದ ನಿಮಿತ್ತ ಪ್ರಯಾಣಿಸುವ ಬಸ್‌ಗಳು ಹಾಗೂ ಉದ್ಯೋಗದಾತರು ಒದಗಿಸುವ ವಸತಿ ಸ್ಥಳಗಳೂ ಇದರ ವ್ಯಾಪ್ತಿಗೆ ಸೇರುತ್ತವೆ. ಮನೆಗೆಲಸದವರು ಕೆಲಸ ಮಾಡುವ ಮನೆಯನ್ನೂ ಅವರ ಪಾಲಿಗೆ ಕಾರ್ಯಸ್ಥಳವೆಂದು ಪರಿಗಣಿಸಲಾಗುತ್ತದೆ. ಜೀವನೋಪಾಯಕ್ಕಾಗಿ ಕೆಲಸ ಮಾಡುವ ಸ್ಥಳಕ್ಕೆ ಕಾಯ್ದೆಯ ರಕ್ಷಣೆ ಅನ್ವಯಿಸಬಹುದು ಎಂದು ತಿಳಿಸಿದರು.

ಹಕ್ಕುಗಳ ರಕ್ಷಣೆ:

ಕುಲಪತಿ ಪ್ರೊ. ಅನಂತಮೂರ್ತಿ ಮಾತನಾಡಿ, ಸಮಾಜದಲ್ಲಿ ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರ ಹಕ್ಕುಗಳ ರಕ್ಷಣೆಗೆ ಸಂವಿಧಾನ ನೀಡಿರುವ ಹಕ್ಕುಗಳು ಹಾಗೂ ಕಾಲಕಾಲಕ್ಕೆ ರೂಪುಗೊಂಡಿರುವ ಕಾನೂನುಗಳೇ ಪ್ರಮುಖ ಆಧಾರವಾಗಿವೆ. ಆದ್ದರಿಂದ ಪ್ರತಿಯೊಬ್ಬರೂ ಕಾನೂನುಗಳ ಕುರಿತು ಅರಿವು ಹೊಂದುವುದು ಅಗತ್ಯ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶಶಿರೇಖಾ ಮಾತನಾಡಿದರು. ಪರೀಕ್ಷಾಂಗ ಕುಲಸಚಿವ ಪ್ರೊ. ತಿಮ್ಮರಾಯಪ್ಪ, ಡಾ. ಇಟ್ಟೆ ಪುಷ್ಪಾವತಿ ಉಪಸ್ಥಿತರಿದ್ದರು.

ಪೋಟೋ: 25ಎಸ್‌ಎಂಜಿಕೆಪಿ01

ಶಿವಮೊಗ್ಗದ ಪತ್ರಿಕಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5394 ಕೋಟೀಲಿ 2875 ಕಿಮೀ ರಸ್ತೆ ಅಭಿವೃದ್ಧಿ: ಕೃಷ್ಣ
ಭದ್ರಾ ಡ್ಯಾಂ ಬಲ, ಎಡದಂಡೆ ನಾಲೆಗಳಿಗೆ ನೀರು ಹರಿಸಿ