ಮಾನಸಿಕ ಕಾಯಿಲೆಗೆ ಆರಂಭಿಕ ಹಂತದಲ್ಲೇ ಚಿಕಿತ್ಸೆ ಅಗತ್ಯ: ಜೈಬುನ್ನಿಸಾ

KannadaprabhaNewsNetwork |  
Published : Oct 18, 2025, 02:02 AM IST
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಮಂಗಳೂರಿನ ಫಾ.ಮುಲ್ಲರ್‌ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಗುರುವಾರ ನಡೆಯಿತು.

ಮಂಗಳೂರು: ಮಾನಸಿಕ ಕಾಯಿಲೆಗಳನ್ನು ಮೊದಲ ಹಂತದಲ್ಲಿಯೇ ಪತ್ತೆ ಹಚ್ಚಿ ಸರಿಯಾದ ಚಿಕಿತ್ಸೆ, ಸಮಾಲೋಚನೆ ಮೂಲಕ ಮಾನಸಿಕ ಕಾಯಿಲೆಯಿಂದ ಮುಕ್ತರನ್ನಾಗಿಸಬೇಕು. ಜಿಲ್ಲೆಯಲ್ಲಿ ಮಾನಸಿಕ ಆರೋಗ್ಯ ವಿಭಾಗದ ಮೂಲಕ ಮಾನಸಿಕ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಹೇಳಿದ್ದಾರೆ.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಫಾದರ್ ಮುಲ್ಲರ್ ಮೆಡಿಕಲ್ ಮತ್ತು ನರ್ಸಿಂಗ್ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಫಾ.ಮುಲ್ಲರ್‌ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಮಾನವನಿಗೆ ಸಮಾಜದಲ್ಲಿ ಜೀವಿಸುವ ಹಕ್ಕಿದೆ. ಜೀವಿಸುವ ಸಮಯದಲ್ಲಿ ಸನ್ಮಾರ್ಗದಲ್ಲಿ ನಡೆಯಬೇಕು, ವ್ಯಕ್ತಿಯ ಗೌರವಕ್ಕೆ ಚ್ಯುತಿ ಬಾರದಂತೆ ಎಲ್ಲರೂ ತೊಡಗಿಸಿಕೊಳ್ಳಬೇಕು ಎಂದರು.

ವೆನ್‍ಲಾಕ್ ಆಸ್ಪತ್ರೆ ಅಧೀಕ್ಷಕ ಡಾ.ಶಿವಪ್ರಕಾಶ್ ಮಾತನಾಡಿ, ದಿನದಿಂದ ದಿನಕ್ಕೆ ಯುವಜನತೆ ಸಾಮಾಜಿಕ ಜಾಲತಾಣಗಳ ಮೂಲಕ ಕೆಲವು ಹವ್ಯಾಸಗಳಿಗೆ ಬಲಿಯಾಗಿ ಮಾನಸಿಕ ಖಿನ್ನತೆಗೆ ಒಳಗಾಗುವುದು ಸರ್ವೆ ಸಾಮಾನ್ಯ. ಇಂದಿನ ಶಿಕ್ಷಣ ಕೇವಲ ಅಂಕ ಪಡೆಯುವುದಕ್ಕೆ ಸೀಮಿತವಾಗಿದ್ದು, ಹೊರಗಿನ ಪ್ರಪಂಚದ ಪರಿಜ್ಞಾನವಿಲ್ಲದೆ ಮೊಬೈಲ್ ಬಳಕೆ ಮೂಲಕ ಹೊಸ ಹೊಸ ಸಾಹಸಕ್ಕೆ ಒಳಗಾಗುವುದು ಕಂಡುಬರುತ್ತಿದೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ ಫಾದರ್ ಮುಲ್ಲರ್ ನಿರ್ದೇಶಕ ರೆ. ಫಾದರ್ ಫಾಸ್ಟಿನ್ ಲೂಕಸ್ ಲೋಬೊ ಮಾತನಾಡಿ, ಈಗಿನ ವ್ಯವಸ್ಥೆಯಲ್ಲಿ ಜನರು ಒಂದಲ್ಲ ಒಂದು ರೀತಿಯ ಮಾನಸಿಕ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಇಂದಿನ ಯುವಜನತೆ ಸೋಮಾರಿತನ ಸ್ವಭಾವದೊಂದಿಗೆ ಯಾಂತ್ರಿಕ ಜೀವನವನ್ನು ನಡೆಸುವ ಪದ್ಧತಿಗಳಿಗೆ ಜೀವನವನ್ನು ತೊಡಗಿಸಿಕೊಂಡಿದ್ದಾರೆ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗುವುದು, ಆತ್ಮಹತ್ಯೆ/ ಮಾದಕ ವಸ್ತುಗಳಿಗೆ ಬಲಿಯಾಗುತ್ತಿರುವುದು ಹೆಚ್ಚಾಗುತ್ತಿವೆ. ಒತ್ತಡ ಮುಕ್ತ ಜೀವನ ನಮ್ಮದಾಗಬೇಕು ಎಂದರು.

ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಡಾ.ಸುದರ್ಶನ್, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಡಾ.ಮೈಕಲ್ ಸಾಂತುಮಾಯೊರ್‌, ಮನೊರೋಗ ತಜ್ಞೆ ಡಾ.ಪ್ರಜಕ್ತಾ ವಿ. ರಾವ್, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್‌ ಡಾ.ರಾಹುಲ್ ಎಂ. ರಾವ್ ಇದ್ದರು.ಸಂಸ್ಥೆಯ ಪ್ರಾಧ್ಯಾಪಕಿ ಡಾ.ಸುಪ್ರಿಯಾ ಹೆಗ್ಡೆ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಪ್ಯಾರಾದಲ್ಲಿ ಕೇಂದ್ರ ವಿರುದ್ಧ ಟೀಕಾ ಪ್ರಹಾರ
ಬೇಡಿಕೆಗೆ ತಕ್ಕಷ್ಟು ಬರುತ್ತಿಲ್ಲ ಮೈಸೂರು ರೇಷ್ಮೆ ಸೀರೆ