ಮಾನಸಿಕ ಒತ್ತಡ, ಖಿನ್ನತೆಯು ದೇಹದ ಮೇಲೆ ಪರಿಣಾಮ: ನ್ಯಾ.ಟಿ.ಭಾನುಪ್ರಿಯ

KannadaprabhaNewsNetwork |  
Published : Oct 18, 2026, 02:45 AM IST
17ಕೆಎಂಎನ್ ಡಿ16  | Kannada Prabha

ಸಾರಾಂಶ

ಮಹಿಳೆಯರು ಕೆಲಸದ ಒತ್ತಡದಲ್ಲಿ ತಮ್ಮ ಆರೋಗ್ಯ ಸುರಕ್ಷತೆ ಬಗ್ಗೆ ಗಮನಹರಿಸುವುದಿಲ್ಲ. ಎಷ್ಟೆ ಕೆಲಸದ ಒತ್ತಡವಿದ್ದರೂ ಕೂಡ ಕನಿಷ್ಠ ಒಂದು ಗಂಟೆ ಸಮಯ ಮೀಸಲಿಟ್ಟು ಯೋಗಾಭ್ಯಾಸ ಮಾಡಿ ದೈಹಿಕ ಆರೋಗ್ಯ ಕಾಪಾಡಿಕೊಳ್ಳಬೇಕು. ಮಕ್ಕಳು ಕ್ರೀಡೆ, ಸಂಗೀತ, ನೃತ್ಯದಂತಹ ಚಟುವಟಿಕೆಗಳಿಗೆ ಹೆಚ್ಚು ಒತ್ತು ನೀಡಬೇಕು.

ಕನ್ನಡಪ್ರಭ ವಾರ್ತೆ ನಾಗಮಂಗಲ

ಮಾನಸಿಕ ಆರೋಗ್ಯವು ಕೇವಲ ಒಬ್ಬ ವ್ಯಕ್ತಿಯ ಸಮಸ್ಯೆಯಲ್ಲ. ಇಡೀ ಸಮಾಜದ ಸ್ವಾಸ್ತ್ಯಕ್ಕೆ ಸಂಬಂಧಿಸಿದ ಸಮಸ್ಯೆಯಾಗಿದೆ. ದೀರ್ಘಕಾಲದ ಮಾನಸಿಕ ಒತ್ತಡ ಮತ್ತು ಖಿನ್ನತೆಯು ದೇಹದ ಪ್ರತಿಕ್ರಿಯೆಯ ಮೇಲೆ ಪರಿಣಾಮ ಬೀರಬಹುದು ಎಂದು 1ನೇ ಅಪರ ಸಿವಿಲ್ ನ್ಯಾಯಾಧೀಶೆ ಟಿ.ಭಾನುಪ್ರಿಯ ಅಭಿಪ್ರಾಯಪಟ್ಟರು.

ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆಯ ಸಹಭಾಗಿತ್ವದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನ ಹಾಗೂ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನವನ್ನು ಉದ್ಘಾಟಿಸಿ ಮಾತನಾಡಿದರು.

ಜನರಲ್ಲಿರುವ ಖಿನ್ನತೆ ಹೋಗಲಾಡಿಸಲು ಮತ್ತು ವೇಗವಾಗಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡಿ ಅವುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ ಎಂದರು.

ಮಹಿಳೆಯರು ಕೆಲಸದ ಒತ್ತಡದಲ್ಲಿ ತಮ್ಮ ಆರೋಗ್ಯ ಸುರಕ್ಷತೆ ಬಗ್ಗೆ ಗಮನಹರಿಸುವುದಿಲ್ಲ. ಎಷ್ಟೆ ಕೆಲಸದ ಒತ್ತಡವಿದ್ದರೂ ಕೂಡ ಕನಿಷ್ಠ ಒಂದು ಗಂಟೆ ಸಮಯ ಮೀಸಲಿಟ್ಟು ಯೋಗಾಭ್ಯಾಸ ಮಾಡಿ ದೈಹಿಕ ಆರೋಗ್ಯ ಕಾಪಾಡಿಕೊಳ್ಳಬೇಕು. ಮಕ್ಕಳು ಕ್ರೀಡೆ, ಸಂಗೀತ, ನೃತ್ಯದಂತಹ ಚಟುವಟಿಕೆಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದರು.

ಸಾರ್ವಜನಿಕ ಆಸ್ಪತ್ರೆ ಚರ್ಮರೋಗ ತಜ್ಞ ಡಾ. ವಿನೋದ್ ಮಾತನಾಡಿ, ಮಾನಸಿಕ ಆರೋಗ್ಯ ಸಮಸ್ಯೆಯಿಂದಾಗಿ ದೇಶದಲ್ಲಿ ಪ್ರತಿ ಮೂರು ನಿಮಿಷಕ್ಕೆ ಒಂದು ಆತ್ಮಹತ್ಯೆ ಪ್ರಕರಣ ಸಂಭವಿಸುತ್ತಿದೆ. ಮನೋ ಖಿನ್ನತೆಯನ್ನು ನಿರ್ಲಕ್ಷ್ಯಿಸಬಾರದು. ಏನೇ ಸಮಸ್ಯೆ ಇದ್ದರೂ ಕೂಡ ಮುಕ್ತವಾಗಿ ಚರ್ಚಿಸಿ ಪರಿಹರಿಸಿಕೊಳ್ಳಬೇಕು ಎಂದರು.

ಮಕ್ಕಳು ಪೋಷಕರೊಂದಿಗೆ ಮುಕ್ತವಾಗಿ ಮಾತನಾಡುವ ವಾತಾವರಣ ನಿರ್ಮಿಸಬೇಕು. ಒತ್ತಡವನ್ನು ಮಾನಸಿಕವಾಗಿ ತೆಗೆದುಕೊಳ್ಳಬಾರದು. ದೈನಂದಿನ ಕಾರ್ಯದಲ್ಲಿ ದೇಹದ ಆರೋಗ್ಯದ ಜೊತೆಗೆ ಆರೋಗ್ಯವಂತ ಮನಸ್ಸಿರಬೇಕು ಎಂದರು.

ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಮಹತ್ವ ಕುರಿತು ವಕೀಲೆ ಎಸ್.ವಿ.ಕವನಶ್ರೀ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಎನ್.ನಾರಾಯಣ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಬಿ.ಶುಭಮೂರ್ತಿ, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಆರ್.ಪ್ರಸನ್ನ, ವಕೀಲ ಗೋಪಾಲಮೂರ್ತಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಸ್.ಸಿದ್ದಲಿಂಗಯ್ಯ, ನ್ಯಾಯಾಲಯದ ಸೋನುಮೂರ್ತಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏಷ್ಯನ್ ಪ್ಯಾರಾ ಗೇಮ್ಸ್‌ಗೆ ಬಳ್ಳಾರಿಯ ಗೋಪಿಚಂದ್ ಲಿಂಗುಟ್ಲ ಆಯ್ಕೆ
ಪಡಿತರ ಚೀಟಿದಾರರ ಇ-ಕೆವೈಸಿ ಗಡುವು ವಿಸ್ತರಿಸಿ