ಕನ್ನಡಪ್ರಭ ವಾರ್ತೆ ರಾವಂದೂರು
ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಬಯಲು ರಂಗ ಮಂದಿರದಲ್ಲಿ ಸಹಕಾರ ಸಂಘದ ವತಿಯಿಂದ ಏರ್ಪಡಿಸಿದ್ದ ಸಹಕಾರ ಸೌಹಾರ್ದತೆ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಗ್ರಾಮದಲ್ಲೇ ಸಂಘ ಸಂಸ್ಥೆಗಳು ಬರೀ ನಾಮಫಲಕ ಉದ್ಘಾಟನೆಗೆ ಮಾತ್ರ ಸೀಮಿತವಾಗಿರುತ್ತದೆ ಈ ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸಗಳಲ್ಲಿ ತೊಡಗಿದಾಗ ಮಾತ್ರ ಅಂತಹ ಸಂಘ-ಸಂಸ್ಥೆಗಳು ಉತ್ತಮ ಭವಿಷ್ಯವನ್ನು ಕಾಣಲು ಸಹಕಾರಿಯಾಗಿದೆ ಹಾಗೂ ಮೊದಲ ಬಾರಿಗೆ ಹಾಲು ಉತ್ಪಾದಕರ ಸಹಕಾರ ಸಂಘವು ಗ್ರಾಮದ ಮತ್ತು ತಾಲೂಕಿನ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನ ಮಾಡುವುದರ ಜೊತೆಗೆ ಅವರ ತತ್ವ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಮಾದರಿ ಆಗುವ ಮೂಲಕ ಉತ್ತಮ ಕೆಲಸವನ್ನು ನಿರ್ವಹಿಸುತ್ತಿದೆ ಎಂದು ತಿಳಿಸಿದರು ತಾಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯಶೆಟ್ಟಿ ಮಾತನಾಡಿ, ಗ್ರಾಮದ ಮತ್ತು ತಾಲೂಕಿನ ಸಾಧಕರಿಗೆ ಸನ್ಮಾನ ಮಾಡುವ ಮೂಲಕ ಉತ್ತಮ ಕೆಲಸ ಕಾರ್ಯಗಳನ್ನು ಈ ಹಾಲು ಉತ್ಪಾದಕರ ಸಹಕಾರ ಸಂಘವು ಮಾಡುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದರು.ಪ್ರಾಧ್ಯಾಪಕ ಕೃಷ್ಣಪ್ಪ, ಸಹಕಾರ ಸಂಘದ ಅಧ್ಯಕ್ಷ ಸತೀಶ್ ಮಾತನಾಡಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ಮೈಸೂರು ಮಹಾರಾಜ ಕಾಲೇಜಿನ ಪ್ರಾಧ್ಯಾಪಕ ಡಾ. ಕೃಷ್ಣಪ್ಪ, ನಿವೃತ್ತ ಪ್ರಾಂಶುಪಾಲ ರಂಗಸ್ವಾಮಿ, ನಿವೃತ್ತ ಪ್ರಾಧ್ಯಾಪಕಿ ಶಾರದಮ್ಮ, ಪ್ರಾಂಶುಪಾಲ ಜವರೇಗೌಡ, ಮುಖ್ಯ ಶಿಕ್ಷಕ ನಾಗಶೆಟ್ಟಿ, ಪ್ರಾಧ್ಯಾಪಕ ಕೆ.ಟಿ. ಮಂಜು, ಮುಖ್ಯೋಪಾಧ್ಯಾಯರಾದ ರಾಜೇಂದ್ರ, ಬಿಸಿಎಂ ಹಾಸ್ಟೆಲ್ ಮೇಲ್ವಿಚಾರಕ ಈಶ್ವರಗೌಡ, ಶಿಕ್ಷಕಿ ರಾಣಿ, ಕ್ರೀಡಾಪಟು ಅಂಬಲಾರೆ ಗಣೇಶ್, ಸರಿಗಮಪ ಗುರು ಪ್ರಸಾದ್ ಅವರನ್ನು ಗೌರವಿಸಲಾಯಿತು.