ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

KannadaprabhaNewsNetwork |  
Published : Apr 11, 2025, 12:33 AM IST
ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ | Kannada Prabha

ಸಾರಾಂಶ

ಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್‌ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ ೨೦೨೪-೨೫ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ/ ಉಡುಪಿ

ಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್‌ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ ೨೦೨೪-೨೫ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ರಾಜ್ಯಮಟ್ಟದಲ್ಲಿ ೧೦ರೊಳಗಿನ ರ‍್ಯಾಂಕ್ ಗಳಿಸಿದ ಸಂಸ್ಥೆಯ ಒಟ್ಟು ೨೯ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ ೫೯೬ ಅಂಕ ಗಳಿಸಿ ರಾಜ್ಯಕ್ಕೆ ೪ನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಕಾರ್ಕಳ ಜ್ಞಾನಸುಧಾದ ಆಸ್ತಿ ಎಸ್ ಶೆಟ್ಟಿ, ೫೯೫ ಅಂಕ ಗಳಿಸಿ ರಾಜ್ಯಮಟ್ಟದಲ್ಲಿ ೫ನೇ ಹಾಗೂ ಜಿಲ್ಲೆಗೆ ದ್ವಿತೀಯ ಸ್ಥಾನಿಗಳಾದ ಕಾರ್ಕಳ ಜ್ಞಾನಸುಧಾದ ಶ್ರೀ ರಕ್ಷಾಆರ್ ನಾಯಕ್, ವಿಶ್ವಾಸ್‌ಆತ್ರೇಯಾಸ್ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ಅಪೂರ್ವ್ ವಿ ಕುಮಾರ್ ಮತ್ತು ವಾಣಿಜ್ಯ ವಿಭಾಗದಲ್ಲಿ ೫೯೪ ಅಂಕ ಗಳಿಸಿ ರಾಜ್ಯಕ್ಕೆ ೬ನೇ ಹಾಗೂ ಜಿಲ್ಲೆಗೆ ದ್ವಿತೀಯ ಸ್ಥಾನಿಗಳಾದ ಕಾರ್ಕಳ ಜ್ಞಾನಸುಧಾದ ಸಹನಾ ನಾಯಕ್ ಮತ್ತುತನ್ವಿರಾವ್‌ಇವರೊಂದಿಗೆಇತರ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಟ್ರಸ್ಟಿ ಅನಿಲ್ ಕುಮಾರ್‌ ಜೈನ್, ಕಾರ್ಕಳ ಜ್ಞಾನಸುಧಾದ ಸಿ.ಇ.ಒ ದಿನೇಶ್ ಎಂ ಕೊಡವೂರ್, ಉಡುಪಿ ಜ್ಞಾನಸುಧಾದ ಪ್ರಾಂಶುಪಾಲ ಸಂತೋಷ್ ಹಾಗೂ ಮಣಿಪಾಲ ಜ್ಞಾನಸುಧಾದ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಸಾಧಕ ವಿದ್ಯಾರ್ಥಿಗಳ ಹೆತ್ತವರು ಹಾಗೂ ಹಿತೈಷಿಗಳಾದ ತ್ರಿವಿಕ್ರಮಕಿಣಿ ಹಾಗೂ ದೇವೇಂದ್ರ ನಾಯಕ್‌ ಮತ್ತಿತರರಿದ್ದರು.

ಆಂಗ್ಲಭಾಷಾ ಮುಖ್ಯಸ್ಥೆ ಸಂಗೀತಾ ಕುಲಾಲ್‌ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಿಗೆ ಪೋಲಿಯೋ ಬರದಂತೆ ಎಚ್ಚರಿಕೆ ವಹಿಸಿ: ಡೀಸಿ ಡಾ.ಕುಮಾರ್
ಜಗತ್ತಿಗೆ ಇಂದು ಶಾಂತಿ ಅಗತ್ಯ