ಮಹಾ ಸಿಎಂ ಎದುರು ಎಂಇಎಸ್‌ ಮತ್ತೆ ಪುಂಡಾಟಿಕೆ

KannadaprabhaNewsNetwork |  
Published : Nov 29, 2026, 03:00 AM IST
ಕಬ್ಬು ನುರಿಸಿದ 15 ದಿನಗಳೊಳಗೆ ರೈತರಿಗೆ ಹಣ ಪಾವತಿಸಿ: ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿನಗರಕ್ಕೆ ಆಗಮಿಸಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡರು ಭೇಟಿಯಾಗಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಿದರು. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಹಾಗೂ ಮರಾಠಿ ಭಾಷೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿದ ನಿಯೋಗದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ, ನಾಗಪುರ ಅಧಿವೇಶನ ಮುಗಿದ ಬಳಿಕ ಸಭೆ ನಡೆಸಿ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ನಗರಕ್ಕೆ ಆಗಮಿಸಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡರು ಭೇಟಿಯಾಗಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಿದರು. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಹಾಗೂ ಮರಾಠಿ ಭಾಷೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿದ ನಿಯೋಗದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ, ನಾಗಪುರ ಅಧಿವೇಶನ ಮುಗಿದ ಬಳಿಕ ಸಭೆ ನಡೆಸಿ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.

ಎಂಇಎಸ್ ಅಧ್ಯಕ್ಷ ಪ್ರಕಾಶ್ ಮರಗಾಳೆ ನೇತೃತ್ವದ ನಿಯೋಗವು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಮನವಿ ಪತ್ರ ಸಲ್ಲಿಸಿತು. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣದ ಕುರಿತು ಶೀಘ್ರ ಕ್ರಮ ಕೈಗೊಳ್ಳಬೇಕು. ಕೊಲ್ಲಾಪುರದಲ್ಲಿ ಆದಷ್ಟು ಬೇಗ ಉನ್ನತಾಧಿಕಾರ ಸಮಿತಿ ಸಭೆ ಕರೆಯಬೇಕು ಎಂದು ನಿಯೋಗ ಒತ್ತಾಯಿಸಿತು.

ಅಲ್ಲದೆ, ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಶರಣಕುಮಾರ್ ಲಿಂಬಾಳೆ ಅವರು ಗಡಿ ವಿವಾದ ಹಾಗೂ ಮರಾಠಿ ಭಾಷೆಯ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆಯನ್ನು ಖಂಡಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಕೋರಲಾಗಿದೆ ಎಂದು ವಕೀಲ ಅಮರ್ ಯಳ್ಳೂರಕರ ತಿಳಿಸಿದರು.

ನಿಯೋಗದ ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ನಾಗಪುರ ಅಧಿವೇಶನ ಮುಕ್ತಾಯಗೊಂಡ ಬಳಿಕ ಕೊಲ್ಲಾಪುರದಲ್ಲಿ ಉನ್ನತಾಧಿಕಾರ ಸಂಪುಟ ಸಮಿತಿ ಹಾಗೂ ತಜ್ಞರ ಸಮಿತಿ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮಾಜಿ ಶಾಸಕ ಮನೋಹರ ಕಿಣೇಕರ್ ಮಾಹಿತಿ ನೀಡಿದರು.

ಸಮನ್ವಯ ಸಚಿವಾಲಯವನ್ನು ಬೆಳಗಾವಿಗೆ ಕಳುಹಿಸುವ ಬೇಡಿಕೆ ಹಾಗೂ ಸಭೆಯಲ್ಲಿ ಶರದ್ ಪವಾರ್ ಅವರೊಂದಿಗೂ ಚರ್ಚಿಸಿ ಬಾಕಿ ಉಳಿದಿರುವ ವಿಷಯಗಳನ್ನು ಪೂರ್ಣಗೊಳಿಸುವ ಕುರಿತು ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಹೇಳಿಕೆಗೆ ಸಂಬಂಧಿಸಿದ ದೂರಿನ ಕುರಿತು ಪುಣೆಯ ಸಂಯೋಜಕರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಕಿಣೇಕರ್ ವಿವರಿಸಿದರು.

ಕಳೆದ ಜುಲೈ 8ರಂದು ನಡೆದ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಇನ್ನೂ ಅನುಷ್ಠಾನಗೊಂಡಿಲ್ಲ ಎಂಬ ಅಂಶವನ್ನೂ ಮನವಿಯಲ್ಲಿ ಪ್ರಮುಖವಾಗಿ ಉಲ್ಲೇಖಿಸಲಾಗಿದೆ ಎಂದು ಎಂಇಎಸ್ ಮುಖಂಡ ರಣಜೀತ್ ಚವ್ಹಾಣ್ ಪಾಟೀಲ್ ತಿಳಿಸಿದರು. ನಾಗಪುರ ಅಧಿವೇಶನದ ಬಳಿಕ ಸಭೆ ಕರೆದು ಎಲ್ಲ ವಿಷಯಗಳ ಕುರಿತು ವಿವರವಾಗಿ ಚರ್ಚಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದರು.

ಒಂದು ವೇಳೆ ನೀಡಿರುವ ಭರವಸೆಗಳು ಈಡೇರದಿದ್ದರೆ ಮುಂಬರುವ ದಿನಗಳಲ್ಲಿ ಮಹಾರಾಷ್ಟ್ರದ ಮಂತ್ರಾಲಯದ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ವಕೀಲ ಅಮರ್ ಯಳ್ಳೂರಕರ ಎಚ್ಚರಿಕೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಕ್ಕರೆ ಕನಿಷ್ಠ ಮಾರಾಟ ಬೆಲೆ ಕೆ.ಜಿ.ಗೆ ₹60ಕ್ಕೆ ಹೆಚ್ಚಿಸಿ
ಸೈನಿಕ ಶಾಲೆ ಪ್ರವೇಶಾತಿಗೆ ಜ.31ರಂದು ಪರೀಕ್ಷೆ