ಮಾನವ ಸರಪಳಿ ಮೂಲಕ ಪ್ರಜಾಪ್ರಭುತ್ವ ರಾಷ್ಟ್ರದ ಸಂದೇಶ: ಟಿ.ಡಿ.ರಾಜೇಗೌಡ

KannadaprabhaNewsNetwork |  
Published : Sep 13, 2024, 01:38 AM IST
ನರಸಿಂಹರಾಜಪುರ ತಾಲೂಕು ಪಂಚಾಯಿತಿಯಲ್ಲಿ  ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯಕ್ತ ನಡೆದ ಪೂರ್ವ ಭಾವಿ ಸಭೆಯಲ್ಲಿ ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿದರು | Kannada Prabha

ಸಾರಾಂಶ

ನರಸಿಂಹರಾಜಪುರ, ಅಂತಾರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟಂಬರ್ 15 ರ ಭಾನುವಾರ ಮಾನವ ಸರಪಳಿ ರಚಿಸಿ ಸಂವಿಧಾನ ಪೀಠಿಕೆ ಓದುವ ಮೂಲಕ ನಮ್ಮ ದೇಶದ ಪ್ರಜಾಪ್ರಭುತ್ವದ ಸಂದೇಶವನ್ನು ಪ್ರಪಂಚಕ್ಕೆ ತಿಳಿಸುವ ಬೃಹತ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಅಂತಾರಾಷ್ಟ್ರಿಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ತಾಪಂ ಸಭಾಂಗಣದಲ್ಲಿ ಪೂರ್ವಭಾವಿ ಸಭೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟಂಬರ್ 15 ರ ಭಾನುವಾರ ಮಾನವ ಸರಪಳಿ ರಚಿಸಿ ಸಂವಿಧಾನ ಪೀಠಿಕೆ ಓದುವ ಮೂಲಕ ನಮ್ಮ ದೇಶದ ಪ್ರಜಾಪ್ರಭುತ್ವದ ಸಂದೇಶವನ್ನು ಪ್ರಪಂಚಕ್ಕೆ ತಿಳಿಸುವ ಬೃಹತ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಗುರುವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ರಾಜ್ಯದ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಚಾಮರಾಜನಗರದ ವರೆಗೆ 40 ಲಕ್ಷ ಜನ ಮಾನವ ಸರಪಳಿ ರಚಿಸಲಿದ್ದಾರೆ. ಆ ಸಂದರ್ಭದಲ್ಲಿ ಏಕಕಾಲಕ್ಕೆ ಸಂವಿಧಾನ ಪೀಠಿಕೆ ಓದಲಾಗುತ್ತದೆ. ಚಿಕ್ಕಮಗಳೂರು ತಾಲೂಕಿನ ಮಾಗಡಿ ಕೈಮರದಿಂದ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿವರೆಗೆ 92 ಕಿ.ಮೀ.ದೂರದಲ್ಲಿ 92 ಸಾವಿರ ಜನರು ಮಾನವ ಸರಪಳಿ ರಚಿಸಲಿದ್ದಾರೆ. ಈ ಮಾನವ ಸರಪಳಿಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಜನ ಪ್ರತಿನಿಧಿ ಗಳು, ಸಂಘ ಸಂಸ್ಥೆಗಳ ಸದಸ್ಯರು, ಅಧಿಕಾರಿಗಳು ಭಾಗವಹಿಸಬೇಕು. ಪ್ರತಿ 1 ಕಿಮೀ ದೂರಕ್ಕೂ ಒಬ್ಬ ತಾಲೂಕು ಅಧಿಕಾರಿಯನ್ನು ನಿಯೋಜಿಸಲಾಗಿದೆ. ಪ್ರತಿ 2 ಕಿ.ಮೀ. ದೂರಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೇಮಿಸಲಾಗಿದೆ.ಈ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು ಎಂದು ಕರೆ ನೀಡಿದರು.

ತಾಪಂ ಇಒ ನವೀನ್‌ ಕುಮಾರ್‌ ಮಾಹಿತಿ ನೀಡಿ, ನರಸಿಂಹರಾಜಪುರ ತಾಲೂಕಿನಿಂದ 2 ಸಾವಿರ ಜನರು ಭಾಗವಹಿಸ ಬೇಕಾಗಿದೆ. ಪ್ರತಿಯೊಂದು ಗ್ರಾಪಂ ಪಿಡಿಒಗಳು ಸಭೆ ಕರೆದು ಚರ್ಚೆ ಮಾಡಬೇಕಿದೆ. ಪ್ರತಿ ಗ್ರಾಪಂನಿಂದ ಇಷ್ಟು ಜನರು ಬರಬೇಕು ಎಂದು ನಿಗದಿ ಮಾಡಲಾಗುತ್ತದೆ. ಶಾಲಾ ಮಕ್ಕಳನ್ನು ಇಲ್ಲಿಂದ ಕರೆದುಕೊಂಡು ಹೋಗಿ ಮತ್ತೆ ವಾಪಾಸು ಕರೆದುಕೊಂಡು ಬರಬೇಕಾಗಿದೆ. ಈ ಮಾನವ ಸರಪಳಿ ಬಗ್ಗೆ ಈಗಾಗಲೇ ವೀಡಿಯೋ ಕಾನ್ಪರೆನ್ಸ್‌ ಮಾಡಲಾಗಿದೆ. ಪ್ರತಿ ಕಿ.ಮೀ. ದೂರಕ್ಕೆ 1 ಸಾವಿರ ಜನರು ಇರಬೇಕಾಗಿದೆ. ಪ್ರತಿ ಇಲಾಖೆಗೂ ಗುರಿ ನಿಗದಿ ಮಾಡಲಾಗಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಭಾಗವಹಿಸಬೇಕು. ತಾಲೂಕಿನಲ್ಲಿ ಖಾಸಗಿ ಶಾಲೆಗಳ 19 ಬಸ್ಸುಗಳನ್ನು ಇದಕ್ಕಾಗಿ ಮೀಸಲಿಡಲಾಗಿದೆ ಎಂದರು.

ತಹಶೀಲ್ದಾರ್‌ ತನುಜಾ ಟಿ.ಸವದತ್ತಿ ಮಾತನಾಡಿ, ಮಾನವ ಸರಪಳಿಗೆ ಪ್ರೌಢ ಶಾಲಾ ಮಕ್ಕಳನ್ನು ಮಾತ್ರ ಕರೆದುಕೊಂಡು ಹೋಗಲಾಗುತ್ತದೆ. ಶಾಲೆಯವರು ಇಲ್ಲಿಂದಲೇ ಬಿಸಿಯೂಟ ಅಡುಗೆ ಮಾಡಿಕೊಂಡು ತರಬೇಕು. ಬೆಳಿಗ್ಗೆ 8.30ಕ್ಕೆ ನಿಗದಿ ಪಡಿಸಿದ ಸ್ಥಳದಲ್ಲಿರಬೇಕು. ಅರ್ಧ ಗಂಟೆ ಪ್ರಜಾಪ್ರಭುತ್ವದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸ ಬೇಕು ಎಂದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ನೋಡಲ್‌ ಅಧಿಕಾರಿ ಎ.ಕೆ.ಪಾಟೀಲ್ ಇದ್ದರು.

ಸಭೆಯಲ್ಲಿ ವಿವಿಧ ಸರ್ಕಾರಿ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಪಿಡಿಒ ಗಳು ಭಾಗವಹಿಸಿದ್ದರು.

PREV

Recommended Stories

ಶಾಸಕ ಸೈಲ್‌ ಮನೇಲಿದ್ದ 6.75 ಕೇಜಿ ಚಿನ್ನ ಜಪ್ತಿ!
ಬೆಂಗಳೂರಿಂದ 400 ಕಾರುಗಳಲ್ಲಿಂದು ಬಿಜೆಪಿ ಶಾಸಕನ ಧರ್ಮಸ್ಥಳ ಚಲೋ!