ಸಾಮೂಹಿಕ ವಿವಾಹದಿಂದ ಸರಳತೆಯ ಸಂದೇಶ: ಸಲೀಂ ಅಹಮದ್

KannadaprabhaNewsNetwork |  
Published : Nov 23, 2026, 02:15 AM IST
ಫೋಟೋ ನಗರದ ಸರ್ದಾರ ಗಲ್ಲಿಯ ಮುಸ್ಲಿಂ ಪಿಂಜಾರ ಕಮಿಟಿ ವತಿಯಿಂದ ಭಾನುವಾರ ಆಯೋಜಿಸಿದ್ದ 40 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ | Kannada Prabha

ಸಾರಾಂಶ

ಕೋಮು ಸೌಹಾರ್ದತೆಗೆ ಹೆಸರಾಗಿರುವ ಕೊಪ್ಪಳದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಸಾಮೂಹಿಕ ವಿವಾಹ ಆಯೋಜಿಸಿರುವುದು ಉತ್ತಮ ಕಾರ್ಯ.

ಕೊಪ್ಪಳ: ಲಕ್ಷಾಂತರ, ಕೋಟ್ಯಂತರ ರುಪಾಯಿ ಖರ್ಚು ಮಾಡಿ ಅದ್ಧೂರಿಯಾಗಿ ಮದುವೆ ಮಾಡುವ ಇಂದಿನ ದಿನಗಳಲ್ಲಿ ಸಾಮೂಹಿಕ ವಿವಾಹ ಆಯೋಜಿಸುವ ಮೂಲಕ ಸರಳತೆಯ ಸಂದೇಶ ಸಾರುತ್ತಿರುವುದು ಸ್ವಾಗತಾರ್ಹ ಎಂದು ವಿಧಾನಪರಿಷತ್ ಸಭಾಪತಿ ಸಲೀಂ ಅಹಮದ್ ಹೇಳಿದರು.

ನಗರದ ಸರ್ದಾರ ಗಲ್ಲಿಯ ಮುಸ್ಲಿಂ ಪಿಂಜಾರ ಕಮಿಟಿ ವತಿಯಿಂದ ಭಾನುವಾರ ಆಯೋಜಿಸಿದ್ದ 40 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೋಮು ಸೌಹಾರ್ದತೆಗೆ ಹೆಸರಾಗಿರುವ ಕೊಪ್ಪಳದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಸಾಮೂಹಿಕ ವಿವಾಹ ಆಯೋಜಿಸಿರುವುದು ಉತ್ತಮ ಕಾರ್ಯ. ಜಾತ್ಯತೀತ ಸಮಾಜ ನಿರ್ಮಾಣ ಯುವಕರಿಂದ ಮಾತ್ರ ಸಾಧ್ಯ. ನವದಂಪತಿಗಳು ''''''''ಚಿಕ್ಕ ಸಂಸಾರ, ಚೊಕ್ಕ ಸಂಸಾರ'''''''' ಎಂಬುದನ್ನು ಅರಿತು ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ನಂಬಿಕೆಯಿಂದ ಜೀವನದಲ್ಲಿ ಜೊತೆಯಾಗಿ ಹೆಜ್ಜೆ ಹಾಕಬೇಕು ಎಂದು ಹೇಳಿದರು.

ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ, ಸಾಮೂಹಿಕ ವಿವಾಹಗಳ ಮೂಲಕ ಬಡ ಕುಟುಂಬಗಳ ಆರ್ಥಿಕ ಹೊರೆ ಕಡಿಮೆ ಮಾಡುವ ಕಾರ್ಯ ಮೆಚ್ಚುವಂಥದ್ದು. ನವದಂಪತಿಗಳು ಪರಸ್ಪರರನ್ನು ಅರಿತು ಬಾಳಬೇಕು. ಸಾಮೂಹಿಕ ವಿವಾಹಕ್ಕೆ ಸರ್ಕಾರ ನೀಡುವ ಪ್ರೋತ್ಸಾಹಧನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಮಾಜಿ ಸಂಸದ ಸಂಗಣ್ಣ ಕರಡಿ ಮಾತನಾಡಿ, ಮುಸ್ಲಿಂ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಸಾಕಷ್ಟಿವೆ. ಮದುವೆಯ ಖರ್ಚು ಬಡ ಕುಟುಂಬಗಳಿಗೆ ಹೊರೆಯಾಗಬಾರದು ಎಂಬ ಉದ್ದೇಶದಿಂದ ಸಮಾಜದ ವತಿಯಿಂದ ಸಾಮೂಹಿಕ ವಿವಾಹ ಆಯೋಜಿಸುತ್ತಿರುವುದು ಉತ್ತಮ ಕಾರ್ಯ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಆಗಮಿಸಿ ನವದಂಪತಿಗೆ ಆಶೀರ್ವದಿಸಿದರು. ಸಾಮೂಹಿಕ ವಿವಾಹದ 22ನೇ ವರ್ಷದ ಅಂಗವಾಗಿ ವೇದಿಕೆಯಲ್ಲಿ 22 ದೀಪಗಳನ್ನು ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ್ದು ವಿಶೇಷವಾಗಿತ್ತು.

ವೇದಿಕೆಯಲ್ಲಿ ಮುಫ್ತಿ ನಜೀರ್ ಅಹಮದ್ ಖಾದ್ರಿ ತಸ್ಕೀನ್, ಜೆಡಿಎಸ್ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್, ವೀರೇಶ ಮಹಾಂತಯ್ಯನಮಠ, ವೆಂಕಟೇಶ ಬಾರಕೇರ, ಪಿಂಜಾರ ಸಂಘದ ರಾಜ್ಯಾಧ್ಯಕ್ಷ ಜಲೀಲ್ ಸಾಬ್, ಪಂಚ ಕಮಿಟಿ ಅಧ್ಯಕ್ಷ ಖಾದರಸಾಬ ಕುದರಿಮೋತಿ, ಕಾಂಗ್ರೆಸ್ ಮುಖಂಡರಾದ ಕೆ.ಎಂ. ಸೈಯದ್, ಅಮ್ಜದ್ ಪಟೇಲ್, ಕಾಟನ್ ಪಾಷಾ, ಆಸೀಫ್ ಅಲಿ, ಮಾನವಿ ಪಾಷಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೀವನ ಶೈಲಿ ಬದಲಾವಣೆಯಿಂದ ಮಧುಮೇಹ
ನಿಗಧಿತ ಅವಧಿಯಲ್ಲಿ ಜನರ ಕೆಲಸಗಳನ್ನು ಮಾಡಿಕೊಡಿ