​ಮಹನೀಯರ ಸಂದೇಶ ಆಂತರಿಕ ಶುದ್ಧಿಗೆ ಪ್ರೇರಣೆ: ದೇವೇಂದ್ರಪ್ಪ

KannadaprabhaNewsNetwork |  
Published : Nov 12, 2026, 01:30 AM IST
  11 ಜೆ.ಜಿಎಲ್‌ .1) ಜಗಳೂರು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಛಲವಾದಿ ಸಮಾಜದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವೀರವನಿತೆ ಓಬವ್ವ ಜಯಂತ್ಯುತ್ಸವ ಕಾರ್ಯಕ್ರಮವನ್ನುಶಾಸಕ ಬಿ.ದೇವೇಂದ್ರಪ್ಪ ಉದ್ಘಾಟಿಸಿದರು. | Kannada Prabha

ಸಾರಾಂಶ

ವೀರವನಿತೆ ಒನಕೆ ಓಬವ್ವ ಸೇರಿದಂತೆ ದೇಶಕ್ಕೆ ಕೊಡುಗೆ ನೀಡಿದ ಮಹನೀಯರ ಸಂದೇಶ ಹಾಗೂ ಜೀವನ ಚರಿತ್ರೆಗಳು ಪ್ರತಿಯೊಬ್ಬ ಮನುಷ್ಯನ ಅಂತರಂಗ ಶುದ್ಧಿಗೆ ಪ್ರೇರಣೆಯಾಗಿವೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.

- ​ಜಗಳೂರಿನಲ್ಲಿ ವೀರವನಿತೆ ಓನಕೆ ಓಬವ್ವ ಜಯಂತ್ಯುತ್ಸವ | ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

- - -

ಕನ್ನಡಪ್ರಭ ವಾರ್ತೆ ಜಗಳೂರು

ವೀರವನಿತೆ ಒನಕೆ ಓಬವ್ವ ಸೇರಿದಂತೆ ದೇಶಕ್ಕೆ ಕೊಡುಗೆ ನೀಡಿದ ಮಹನೀಯರ ಸಂದೇಶ ಹಾಗೂ ಜೀವನ ಚರಿತ್ರೆಗಳು ಪ್ರತಿಯೊಬ್ಬ ಮನುಷ್ಯನ ಅಂತರಂಗ ಶುದ್ಧಿಗೆ ಪ್ರೇರಣೆಯಾಗಿವೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಛಲವಾದಿ ಸಮಾಜದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವೀರವನಿತೆ ಓಬವ್ವ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಛಲವಾದಿ ಸಮುದಾಯದಲ್ಲಿ ಜನಿಸಿದ ಡಿಸಿಎಂ ಡಾ. ಜಿ.ಪರಮೇಶ್ವರ್, ಮಲ್ಲಿಕಾರ್ಜುನ್ ಖರ್ಗೆ, ಪ್ರಿಯಾಂಕ್ ಖರ್ಗೆ ಹಾಗೂ ಎಚ್.ಸಿ. ಮಹಾದೇವಪ್ಪ ಅವರಂತಹ ನಾಯಕರು ಇಂದು ರಾಜ್ಯದ ರಾಜಕೀಯ ಕ್ಷೇತ್ರದಲ್ಲಿ ಅತ್ಯುನ್ನತ ಮಟ್ಟದಲ್ಲಿದ್ದಾರೆ. ಅದೇ ರೀತಿ ಜಗಳೂರು ತಾಲೂಕಿನ ಛಲವಾದಿ ಸಮುದಾಯದವರು ಸಹ ಉತ್ತಮ ಶಿಕ್ಷಣವನ್ನು ಪಡೆದು ಸರ್ವತೋಮುಖವಾಗಿ ಬೆಳೆದು ಮುಖ್ಯವಾಹಿನಿಗೆ ಬರಬೇಕು ಎಂದು ತಿಳಿಸಿದರು.

ಓಬವ್ವ ಸಾಹಸ ಯುವಜನ ಅರಿಯಲಿ:

​ಮಾಜಿ ಶಾಸಕ ಎಸ್.ವಿ. ರಾಮಚಂದ್ರ ಮಾತನಾಡಿ, ಶಾಸಕನಾಗಿದ್ದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಓನಕೆ ಓಬವ್ವ ಜಯಂತಿ ಆಚರಣೆಗೆ ಘೋಷಣೆ ಮಾಡಿದ್ದರು. ಚಿತ್ರದುರ್ಗದ ಪಾಳೇಗಾರರ ಆಳ್ವಿಕೆಯಲ್ಲಿ ಕೋಟೆ ಹಾಗೂ ಸಾಮ್ರಾಜ್ಯದ ರಕ್ಷಣೆಗೆ ಪ್ರಾಣತ್ಯಾಗ ಮಾಡಿದ ಓಬವ್ವನ ಆದರ್ಶ, ಶೌರ್ಯ ಮತ್ತು ಇತಿಹಾಸವನ್ನು ಇಂದಿನ ಯುವಜನತೆಗೆ ತಲುಪಿಸುವ ಅಗತ್ಯವಿದೆ ಎಂದರು.

ಮಾಜಿ ಶಾಸಕ ಎಚ್.ಪಿ. ರಾಜೇಶ್ ಮಾತನಾಡಿ, ಜಗಳೂರು ತಾಲೂಕಿನಲ್ಲಿ ಛಲವಾದಿ ಸಮಾಜದವರು ಸಹೋದರತ್ವ ಹಾಗೂ ಸಾಮರಸ್ಯದಿಂದ ಜೀವನ ಸಾಗಿಸುತ್ತಿದ್ದಾರೆ. ಚುನಾವಣೆ ಸಂದರ್ಭ ಮಾತ್ರ ರಾಜಕೀಯ ಮಾಡಿ, ನಂತರದ ದಿನಗಳಲ್ಲಿ ಧಾರ್ಮಿಕ ಹಾಗೂ ಜಯಂತಿ ಕಾರ್ಯಕ್ರಮಗಳಲ್ಲಿ ರಾಜಕೀಯೇತರವಾಗಿ ಒಂದಾಗಿ ಭಾಗವಹಿಸುವುದು ಜಗಳೂರಿನ ವಿಶೇಷತೆಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ನೈಜತೆ ಪಠ್ಯದಲ್ಲಿ ಅಳವಡಿಸಿ:

​ಛಲವಾದಿ ಸಮಾಜದ ಹಿರಿಯ ಮುಖಂಡ ಸಿ.ತಿಪ್ಪೇಸ್ವಾಮಿ ಮಾತನಾಡಿ, ಒನಕೆ ಓಬವ್ವ ಅವರ ಸ್ವಾಭಿಮಾನ ಹಾಗೂ ಸಾಹಸದ ನೈಜ ಇತಿಹಾಸವನ್ನು ಇತ್ತೀಚೆಗೆ ತಿರುಚಲಾಗಿದೆ. ಸಿನಿಮಾಗಳಲ್ಲಿ ತೋರಿಸಿರುವಂತೆ ಅವರು ತಕ್ಷಣವೇ ಸಾವನ್ನಪ್ಪಿರಲಿಲ್ಲ, ಬದಲಾಗಿ ಘಟನೆಯ ನಂತರವೂ 2 ವರ್ಷಗಳ ಕಾಲ ಬದುಕಿದ್ದರು ಎಂಬ ನೈಜ ಇತಿಹಾಸವನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಬೇಕು ಎಂದು ಆಗ್ರಹಿಸಿದರು.

ಎಸ್‌ಟಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ.ಪಿ. ಪಾಲಯ್ಯ ಮಾತನಾಡಿದರು. ಛಲವಾದಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗಣ್ಯರು ಸನ್ಮಾನಿಸಿದರು.

ತಹಸೀಲ್ದಾರ್ ಗುರುಬಸವರಾಜ್, ತಾ.ಪಂ. ಇಒ ಕೆಂಚಪ್ಪ, ಛಲವಾದಿ ಸಮಾಜದ ತಾಲೂಕು ಅಧ್ಯಕ್ಷ ನಿಜಲಿಂಗಪ್ಪ, ಕಾರ್ಯದರ್ಶಿ ವೀರಸ್ವಾಮಿ, ಮುಖಂಡರಾದ ಬಿ. ಮಹೇಶ್ವರಪ್ಪ, ನಾಗಲಿಂಗಪ್ಪ, ಧನ್ಯಕುಮಾರ, ನಾಗೇಶ್, ಮಾದಿಹಳ್ಳಿ ಮಂಜುನಾಥ್, ವಕೀಲ ಜಿ.ಟಿ. ಮಹಾಂತೇಶ್, ಯು.ಜಿ. ಶಿವಕುಮಾರ, ಬುಳ್ಳೇನಹಳ್ಳಿ ನಾಗರಾಜ್, ವಾಲಿಬಾಲ್ ತಿಮ್ಮಾರೆಡ್ಡಿ, ನಿವೃತ್ತ ಉಪನ್ಯಾಸಕ ರಾಜಣ್ಣ, ಕುಬೇಂದ್ರಪ್ಪ, ಜಿ.ಶಂಭುಲಿಂಗಪ್ಪ, ಅರ್ಜುನಪ್ಪ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

- - -

-11ಜೆ.ಜಿಎಲ್‌1: ಜಗಳೂರಲ್ಲಿ ಬುಧವಾರ ಓಬವ್ವ ಜಯಂತಿ ಕಾರ್ಯಕ್ರಮವನ್ನುಶಾಸಕ ಬಿ.ದೇವೇಂದ್ರಪ್ಪ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀಪಾವಳಿಲೀ ರಾಕೆಟ್‌ನಂತೆ ಹಾರಿದ ವಾಯು ಮಾಲಿನ್ಯ!
ಕೌಟುಂಬಿಕ ಕೇಸಲ್ಲಿ ಕುಟುಂಬ ಸಿಲುಕಿಸುವುದು ತರವಲ್ಲ: ಕೋರ್ಟ್‌