ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಎಂ.ಹೊಸೂರು ಗೇಟ್ ಬಳಿಯಿರುವ ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಅನುಸಂಧಾನ ಸಂಸ್ಥೆಯಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯಲ್ಲಿ ದೇಹದ ಸ್ವಯಂ ಚಾಲಿತ ನರಮಂಡಲದ ಕಾರ್ಯಕ್ಷಮತೆಯನ್ನು ಪರೀಕ್ಷಿಸುವ ಕುರಿತು ಮಂಗಳವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಯೋಗ ಮತ್ತು ಪ್ರಕೃತಿ ಚಿಕಿತ್ಸೆಯಿಂದ ದೇಹದ ಸಮತೋಲನ ಕಾಯ್ದುಕೊಳ್ಳಬಹುದು. ರಕ್ತದೊತ್ತಡ, ಹೃದಯ ಬಡಿತ ಮತ್ತು ಉಸಿರಾಟ ಸಮಸ್ಯೆಗಳನ್ನು ನಿಯಂತ್ರಿಸಿಕೊಳ್ಳಬಹುದು. ಸ್ವಯಂ ಚಾಲಿತ ನರಮಂಡಲದ ಪರೀಕ್ಷಿಸುವ ವಿಧಾನದಿಂದ ನರಗಳಲ್ಲಿ ಉಂಟಾಗಿರುವ ತೊಂದರೆಗಳನ್ನು ಗುರುತಿಸಬಹುದು. ಹಾಗಾಗಿ ಸಾಕ್ಷ್ಯಾಧಾರಿತ ಸಂಶೋಧನೆಯನ್ನು ಬಲಪಡಿಸಲು ಇಂತಹ ಕಾರ್ಯಾಗಾರಗಳು ಅತ್ಯವಶ್ಯಕವಾಗಿವೆ ಎಂದರು.ಅನುಸಂಧಾನ ಸಂಸ್ಥೆ ಸಹಾಯಕ ನಿರ್ದೇಶಕ ಹಾಗೂ ನೋಡಲ್ ಅಧಿಕಾರಿ ಡಾ.ಎಚ್.ಎಸ್.ವಾದಿರಾಜ್ ಮಾತನಾಡಿ, ಹೃದಯ ಬಡಿತ, ರಕ್ತದೊತ್ತಡ, ಉಸಿರಾಟ ಮತ್ತು ಜೀರ್ಣಕ್ರಿಯೆಯಂತಹ ದೇಹದ ಪ್ರಮುಖ ಕಾರ್ಯಗಳನ್ನು ನಿಯಂತ್ರಿಸುವ ಸ್ವ-ನಿಯಂತ್ರಿತ ನರಮಂಡಲದ ಕಾರ್ಯಕ್ಷಮತೆಯನ್ನು ಅಳೆಯಲು ಇಂತಹ ಪರೀಕ್ಷೆಗಳು ಸಹಕಾರಿಯಾಗುತ್ತವೆ. ಆರೋಗ್ಯಕರ ಆಹಾರ ಪದಾರ್ಥ ಸೇವನೆ ಮತ್ತು ಪ್ರತಿನಿತ್ಯ ಯೋಗಾಭ್ಯಾಸದಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು ಎಂದರು.
ಜೈವಿಕ ವೈದ್ಯಕೀಯ ಎಂಜಿನಿಯರ್ ಡಾ.ಕೆ.ಭಾಸ್ಕರನ್, ಬೆಂಗಳೂರಿನ ಹೆಲ್ತ್‌ಕೇರ್ ಗ್ಲೋಬಲ್ ಸಂಸ್ಥೆ ಉಪಾಧ್ಯಕ್ಷ ಡಾ.ಎಂ.ರಾಘವೇಂದ್ರ ರಾವ್ ವಿಶೇಷ ಉಪನ್ಯಾಸ ನೀಡಿದರು. ಕರ್ನಾಟಕ, ಆಂದ್ರಪ್ರದೇಶ, ತಮಿಳುನಾಡು ಮತ್ತು ಕೇರಳ ರಾಜ್ಯದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.