ತಾಲೂಕು ಬ್ಲಾಕ್ ಕಾಂಗ್ರೆಸ್ ಕಚೇರಿ ಕಟ್ಟಡಕ್ಕೆ ಮೇಟಿ ದಂಪತಿ 2 ಗುಂಟೆ ಜಮೀನು ದಾನ

KannadaprabhaNewsNetwork |  
Published : Jun 08, 2025, 01:19 AM IST
7ಎಂಡಿಜಿ2. ಮುಂಡರಗಿಯಲ್ಲಿ ತಾಲೂಕಾ ಬ್ಲಾಕ್ ಕಾಂಗ್ರೆಸ್ ಕಚೇರಿ ಕಟ್ಟಡಕ್ಕೆ ಎರಡು ಗುಂಟೆ ಜಮೀನು ದಾನ ನೀಡಿದ ಡಾ.ಬಸವರಾಜ ಮೇಟಿ ದಂಪತಿಗಳಿಗೆ ಜಿಲ್ಲಾ ಕಾಂಗ್ರೆಸ್ ಕಮೀಟಿ ಅಧ್ಯಕ್ಷ ಜಿ.ಎಸ್.ಪಾಟೀಲ ಸನ್ಮಾನಿಸಿದರು. | Kannada Prabha

ಸಾರಾಂಶ

ಪಟ್ಟಣದ ಖ್ಯಾತ ವೈದ್ಯರಾದ ಡಾ. ಬಸವರಾಜ ಮೇಟಿ ಹಾಗೂ ಗದಗ ಜಿಪಂ ಮಾಜಿ ಅಧ್ಯಕ್ಷರಾದ ಶೋಭಾ ಮೇಟಿ ದಂಪತಿ ತಾಲೂಕು ಬ್ಲಾಕ್ ಕಾಂಗ್ರೆಸ್ ಕಚೇರಿ ಕಟ್ಟಡ ಕಟ್ಟಲು ತಮ್ಮ ಲಕ್ಷಾಂತರ ರು.ಗಳ ಬೆಲೆ ಬಾಳುವ ಎರಡು ಗುಂಟೆ ಜಮೀನನ್ನು ದಾನವಾಗಿ ನೀಡಿದ್ದಾರೆ.

ಮುಂಡರಗಿ: ಪಟ್ಟಣದ ಖ್ಯಾತ ವೈದ್ಯರಾದ ಡಾ. ಬಸವರಾಜ ಮೇಟಿ ಹಾಗೂ ಗದಗ ಜಿಪಂ ಮಾಜಿ ಅಧ್ಯಕ್ಷರಾದ ಶೋಭಾ ಮೇಟಿ ದಂಪತಿ ತಾಲೂಕು ಬ್ಲಾಕ್ ಕಾಂಗ್ರೆಸ್ ಕಚೇರಿ ಕಟ್ಟಡ ಕಟ್ಟಲು ತಮ್ಮ ಲಕ್ಷಾಂತರ ರು.ಗಳ ಬೆಲೆ ಬಾಳುವ ಎರಡು ಗುಂಟೆ ಜಮೀನನ್ನು ದಾನವಾಗಿ ನೀಡಿದ್ದಾರೆ. ಡಾ. ಬಸವರಾಜ ಮೇಟಿ ದಂಪತಿ ಈ ಹಿಂದೆ ಪಟ್ಟಣದ ಹೆಸರೂರು ರಸ್ತೆ ಆಶ್ರಯ ಕಾಲೋನಿಯಲ್ಲಿನ ಎಲ್ಲವರ್ಗದ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಒಂದು ಎಕರೆ ಜಮೀನನ್ನು ದಾನವಾಗಿ ನೀಡಿದ್ದಾರೆ. ಅಲ್ಲದೇ ಹೆಸರೂರು ರಸ್ತೆಯಲ್ಲಿ ಹೇಮರಡ್ಡಿ ಮಲ್ಲಮ್ಮನ ದೇವಸ್ಥಾನ ಹಾಗೂ ಕಲ್ಯಾಣ ಮಂಟಪ ನಿರ್ಮಾಣಕ್ಕೂ ಸಹ ಸುಮಾರು ಒಂದೂವರೆ ಎಕರೆ ಜಮೀನನ್ನು ದಾನ ನೀಡಿದ್ದಾರೆ. ಡಾ.ಬಸವರಾಜ ಮೇಟಿ ಅವರು ಈಚೆಗೆ ಎರಡು ಗುಂಟೆ ಜಾಗೆಯನ್ನು ರೋಣ ಪಟ್ಟಣದ ಸಬ್ ರಜಿಸ್ಟರ್ ಕಚೇರಿಯಲ್ಲಿ ಕೆಪಿಸಿಸಿ ಹೆಸರಿಗೆ ನೊಂದಣಿ ಮಾಡಿಸಿಕೊಟ್ಟಿದ್ದಾರೆ. ಅವರ ಕಾರ್ಯಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್. ಪಾಟೀಲ ಡಾ. ಮೇಟಿ ಅವರ ಕಾರ್ಯ ಎಲ್ಲರೂ ಮೆಚ್ಚುವಂತದ್ದು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ, ತಾಲೂಕು ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಡಿ.ಡಿ.ಮೋರನಾಳ ಸನ್ಮಾನಿಸಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ವಿ.ಆರ್. ಗುಡಿಸಾಗರ, ಅಶೋಕ ಮಂದಾಲಿ, ಬಿ.ಬಿ. ಅಸೂಟಿ, ಮಿಥುನಗೌಡ ಪಾಟೀಲ, ರಾಘವೇಂದ್ರ ಕುರಿಯವರ, ಎಸ್.ಎಸ್. ಸೋಮನಕಟ್ಟಿಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''