- ಭದ್ರಾವತಿ ದಸರಾ: ರಸಮಂಜರಿ ಕಾರ್ಯಕ್ರಮ ಉದ್ಘಾಟನೆ - - - ಕನ್ನಡಪ್ರಭ ವಾರ್ತೆ, ಭದ್ರಾವತಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಮರು ಆಯ್ಕೆಯಾದಲ್ಲಿ ಶಿವಮೊಗ್ಗ- ಭದ್ರಾವತಿ ಅವಳಿ ನಗರಗಳಿಗೆ ಮೆಟ್ರೋ ವ್ಯವಸ್ಥೆ ಒದಗಿಸುವುದಾಗಿ ಸಂಸದ ಬಿ.ವೈ.ರಾಘವೇಂದ್ರ ಭರವಸೆ ನೀಡಿದರು. ನಗರಸಭೆ ವತಿಯಿಂದ ಶನಿವಾರ ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರಸಮಂಜರಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈ ಹಿಂದಿನ ಎಲ್ಲ ಚುನಾವಣೆಗಳಲ್ಲೂ ನನ್ನ ಗೆಲುವಿಗೆ ಭದ್ರಾವತಿ ಕ್ಷೇತ್ರದ ಜನರ ಕೊಡುಗೆ ಸಹ ಇದೆ. ತಾಯಿ ಶ್ರೀ ಚಾಮುಂಡೇಶ್ವರಿ ಆರ್ಶೀವಾದದಿಂದ ಈ ಬಾರಿಯೂ ಆಯ್ಕೆಯಾಗುವ ವಿಶ್ವಾಸವಿದೆ ಎಂದರು. ಶಿವಮೊಗ್ಗ, ಭದ್ರಾವತಿ ಅವಳಿ ನಗರಗಳಲ್ಲಿ ಮೈಸೂರು ದಸರಾ ಮಾದರಿಯಲ್ಲಿಯೇ ನಾಡಹಬ್ಬ ದಸರಾ ಆಚರಣೆ ಮಾಡುತ್ತಿರುವುದು ಸಂತಸದ ವಿಚಾರವಾಗಿದೆ.ದ್ದು, ನಗರಸಭೆ ಸದಸ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಪಕ್ಷಾತೀತ, ಜಾತ್ಯತೀತವಾಗಿ ಕಾರ್ಯನಿರ್ವಹಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು. ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪಕುಮಾರ್, ಪೌರಾಯುಕ್ತ ಎಚ್.ಎಂ. ಮನುಕುಮಾರ್, ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಚನ್ನಪ್ಪ ಹಾಗೂ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರಾದ ಬಸವರಾಜ್, ಜಾರ್ಜ್, ಆರ್. ಮೋಹನ್ ಕುಮಾರ್, ಬಷೀರ್ ಅಹಮದ್, ಅನುಸುಧಾ ಮೋಹನ್ ಪಳನಿ, ಲತಾ ಚಂದ್ರಶೇಖರ್, ಪ್ರೇಮ ಬದರಿನಾರಾಯಣ, ಶಶಿಕಲಾ ನಾರಾಯಣಪ್ಪ, ಗೀತಾ ರಾಜ್‌ಕುಮಾರ್, ಅನುಪಮ ಚನ್ನೇಶ್, ಕಾಂತರಾಜ್, ಕೋಟೇಶ್ವರ ರಾವ್, ಉದಯ್‌ಕುಮಾರ್, ಮಾಜಿ ಸದಸ್ಯ ಬದರಿ ನಾರಾಯಣ ಇನ್ನಿತರರು ಉಪಸ್ಥಿತರಿದ್ದರು. ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು. ಕಂದಾಯ ಅಧಿಕಾರಿ ಎಂ.ಎಸ್. ರಾಜಕುಮಾರ್ ಸ್ವಾಗತಿಸಿ, ಪೌರಾಯುಕ್ತ ಮನುಕುಮಾರ್ ವಂದಿಸಿದರು. - - - -ಡಿ೨೨-ಬಿಡಿವಿಟಿ: ಭದ್ರಾವತಿ ನಗರಸಭೆ ವತಿಯಿಂದ ಶನಿವಾರ ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು.