ಸೂಕ್ಷ್ಮ ನೀರಾವರಿ ಪದ್ಧತಿ ಕೃಷಿಗೆ ವರದಾನ

KannadaprabhaNewsNetwork |  
Published : Dec 29, 2024, 01:19 AM IST
ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸೂಕ್ಷ್ಮ ನೀರಾವರಿ ಕುರಿತು ರೈತರಿಗೆ ತರಬೇತಿ ಶಿಬಿರ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ರೈತರು ನೀರಿನ ಬಳಕೆಯ ಸಾಮರ್ಥ್ಯ ಹೆಚ್ಚಿಸಬೇಕಾದರೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜ್‌ ರೈತರಿಗೆ ಸಲಹೆ ನೀಡಿದರು.

ದೊಡ್ಡಬಳ್ಳಾಪುರ: ರೈತರು ನೀರಿನ ಬಳಕೆಯ ಸಾಮರ್ಥ್ಯ ಹೆಚ್ಚಿಸಬೇಕಾದರೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜ್‌ ರೈತರಿಗೆ ಸಲಹೆ ನೀಡಿದರು.

ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಬೆಂಗಳೂರು ಕೃಷಿ ವಿವಿ, ಜಿಕೆವಿಕೆಯ ತೋಟಗಾರಿಕೆ ವಿಭಾಗದ ನಿಖರ ಬೇಸಾಯ ಅಭಿವೃದ್ಧಿ ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಸೂಕ್ಷ್ಮ ನೀರಾವರಿ ಬಗ್ಗೆ ಏರ್ಪಡಿಸಿದ್ದ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೃಷಿ ವಿಜ್ಞಾನ ಕೇಂದ್ರದ ಪ್ರಾಧ್ಯಾಪಕ ಡಾ. ವೆಂಕಟೇಗೌಡ ಜೆ., ತೋಟಗಾರಿಕೆ ವಿಭಾಗದ ಪ್ರಧಾನ ಸಂಶೋಧಕ ಡಾ. ಶ್ರೀನಿವಾಸಪ್ಪ, ರೈತರಿಗೆ ಸೂಕ್ಷ್ಮ ನೀರಾವರಿ ಜೊತೆಗೆ ಹೊಸ ತಂತ್ರಜ್ಞಾನಗಳಾದ ಸ್ವಯಂ ಚಾಲಿತ ನೀರಾವರಿ ಹಾಗೂ ರಸಾವರಿಯ ಕುರಿತು ಮಾಹಿತಿ ನೀಡಿದರು.

ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ ಮಾತನಾಡಿ, ತೋಟಗಾರಿಕಾ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿಯ ಮಹತ್ವ ಮತ್ತು ನೀರಿನ ನಿರ್ವಹಣೆ ಕುರಿತು ಮಾಹಿತಿ ನೀಡಿದರು.

ಪ್ರಾಧ್ಯಾಪಕ ಡಾ.ಗೋಪಾಲ್ ಮತ್ತಿತರರು ಪಾಲ್ಗೊಂಡಿದ್ದರು. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಿಂದ ಆಗಮಿಸಿದ್ದ ರೈತರು ಮತ್ತು ರೈತ ಮಹಿಳೆಯರು ತರಬೇತಿಯಲ್ಲಿ ಭಾಗವಹಿಸಿದ್ದರು. ಯಶಸ್ವಿಯಾಗಿ ತರಬೇತಿ ಪೂರೈಸಿದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

28ಕೆಡಿಬಿಪಿ7-

ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸೂಕ್ಷ್ಮ ನೀರಾವರಿ ಕುರಿತು ರೈತರಿಗೆ ತರಬೇತಿ ಶಿಬಿರ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?