ಸಹಕಾರಿ ಸಂಘ ಬೆಳೆಯಲು ವಿಶ್ವಾಸಾರ್ಹತೆ ಅಗತ್ಯ: ದೇವಿ ಪ್ರಸಾದ್ ಶೆಟ್ಟಿ

KannadaprabhaNewsNetwork |  
Published : Jul 04, 2026, 02:45 AM IST
ಸಹಕಾರ ಸಂಘಗಳ ನಿರ್ವಹಣೆಯಲ್ಲಿ ನಮ್ಮ ಪಾತ್ರ ಕಾರ್ಯಗಾರ | Kannada Prabha

ಸಾರಾಂಶ

ಅವಿಭಜಿತ ದ.ಕ.ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರವು ಜನರ ಮೆಚ್ಚುಗೆ ಪಡೆದಿದ್ದು ಕಾರ್ಯಾಧ್ಯಕ್ಷತೆ, ಸೇವಾಮನೋಭಾವನೆ, ವಿಶ್ವಾಸಾರ್ಹತೆ ಮೂಲಕ ಸಹಕಾರಿ ಸಂಘದ ಬೆಳವಣಿಗೆ ಸಾಧ್ಯ ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಬೆಂಗಳೂರು ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ ಹೇಳಿದರು.

ಮೂಲ್ಕಿ: ಅವಿಭಜಿತ ದ.ಕ.ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರವು ಜನರ ಮೆಚ್ಚುಗೆ ಪಡೆದಿದ್ದು ಕಾರ್ಯಾಧ್ಯಕ್ಷತೆ, ಸೇವಾಮನೋಭಾವನೆ, ವಿಶ್ವಾಸಾರ್ಹತೆ ಮೂಲಕ ಸಹಕಾರಿ ಸಂಘದ ಬೆಳವಣಿಗೆ ಸಾಧ್ಯ ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಬೆಂಗಳೂರು ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆ ಸಹಕಾರ ಇಲಾಖೆಯ ನೇತೃತ್ವದಲ್ಲಿ ಹಳೆಯಂಗಡಿಯ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಆಶ್ರಯದಲ್ಲಿ ಕೇಂದ್ರ ಸಹಕಾರ ಇಲಾಖೆ 5 ವರ್ಷ ಪೂರ್ಣಗೊಂಡ ಪ್ರಯುಕ್ತ ‘ಸಹಕಾರ ಸಪ್ತಾಹ’ದ ಅಂಗವಾಗಿ ಮೂಲ್ಕಿ ತಾಲೂಕು ಮಟ್ಟದ ಸಹಕಾರ ಸಂಘಗಳ ನಿರ್ದೇಶಕರು ಮತ್ತು ಸಿಬ್ಬಂದಿಗೆ ‘ಸಹಕಾರ ಸಂಘಗಳ ನಿರ್ವಹಣೆಯಲ್ಲಿ ನಮ್ಮ ಪಾತ್ರ’ ದ ಬಗ್ಗೆ ಹಳೆಯಂಗಡಿಯ ಹರಿಓಂ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರೀಕೃತ ಬ್ಯಾಂಕುಗಳಿಗೆ ಪ್ರತಿಸ್ಪರ್ಧಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕೇಂದ್ರ ಸಹಕಾರಿ ಬ್ಯಾಂಕ್ ಜನರ ವಿಶ್ವಾಸಾರ್ಹತೆಗಳಿಸಿದ್ದು, ಅದರ ಅಭಿವೃದ್ಧಿ ಹರಿಕಾರ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಪ್ರೇರಣೆಯಿಂದ ಸಂಸ್ಥೆ ಬಹಳಷ್ಟು ಎತ್ತರಕ್ಕೆ ಬೆಳೆದಿದೆ ಎಂದರು.

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ಅಧ್ಯಕ್ಷತೆ ವಹಿಸಿದ್ದರು. ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್ ಮಾತನಾಡಿ, ಗ್ರಾಹಕರ ಜೊತೆ ಅನ್ಯೋನ್ಯತೆ ಇದ್ದರೆ ಸಂಘದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.

ಕರ್ನಾಟಕ ಸಹಕಾರ ಸಂಘಗಳ ತರಬೇತಿದಾರ, ವಕೀಲ ಶ್ರೀಧರ್ ಪಿ.ಎಸ್. ಕುಂದಾಪುರ ಅವರು ‘ಸಹಕಾರ ಸಂಘಗಳ ನಿರ್ವಹಣೆಯಲ್ಲಿ ನಮ್ಮ ಪಾತ್ರ’ ಬಗ್ಗೆ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು. ಸ್ವಸಹಾಯ ಸಂಘದ ಪ್ರೇರಕಿ ನೀತು ನಿರಂಜಲ ಪ್ರಾರ್ಥಿಸಿದರು. ಸೊಸೈಟಿ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಸ್ವಾಗತಿಸಿದರು. ಕಾರ್ಯನಿರ್ವಣಾಧಿಕಾರಿ ಸುದರ್ಶನ್ ವಂದಿಸಿದರು. ಲೆಕ್ಕಿಗ ಲೋಲಾಕ್ಷಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಬಿ-ಜಿ ರ‍್ಯಾಮ್ ಜಿ ಸೌಲಭ್ಯ ಅರ್ಹ ಕುಟುಂಬ ಪಡೆದುಕೊಳ್ಳಲಿ: ಮೇತ್ರಿ
ಪ್ರಪಂಚದಲ್ಲಿಯೇ ಭಾರತೀಯರ ಇಂಗ್ಲಿಷ್‌ ಭಾಷೆ ಪರಿಶುದ್ಧ: ಡಾ.ದೀಪಕ ಶಿಂಧೆ