ಹೊಸಕೋಟೆ: ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರ ಆಯ್ಕೆ ಚುನಾವಣೆಯಲ್ಲಿ ಬಿ.ವಿ.ಸತೀಶ್‌ಗೌಡರ ಗೆದ್ದರೆ ಕ್ಷೀರ ಕ್ಷೇತ್ರದಲ್ಲಿ ಅಭಿವೃದ್ಧಿ ಕ್ರಾಂತಿ ಆಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ತಾಲೂಕಿನ ಜಡಿಗೇನಹಳ್ಳಿ ಸಪ್ತಮಾತೃಕೆ ದೇವಾಲಯ ಹಾಗೂ ಉಪ್ಪಾರಹಳ್ಳಿ ಕಾಟೇರಮ್ಮ ಸಮುದಾಯ ಭವನದಲ್ಲಿ ನಡೆದ ಬಮುಲ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಡವರ, ರೈತರ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿದೆ. ಮೇ 25ರಂದು ನಡೆಯಲಿರುವ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರ ಆಯ್ಕೆ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಬಿವಿ.ಸತೀಶ್‌ಗೌಡ ಸ್ಪರ್ಧಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಈಗಾಗಲೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ, ಸೂಲಿಬೆಲೆ ವಿವಿಧೋದ್ದೇಶ ಮಾರಾಟ ಸಹಕಾರ ಸಂಘದ ಅಧ್ಯಕ್ಷರೂ ಆಗಿರುವ ಸತೀಶ್‌ಗೌಡರು ಸಹಕಾರ ರಂಗದ ಅನುಭವಿ. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಡೈರಿ ಅಧ್ಯಕ್ಷರು ಅವರಿಗೆ ಮತ ಹಾಕಬೇಕು ಎಂದರು.ಬಮುಲ್ ಚುನಾವಣೆಯ ಅಭ್ಯರ್ಥಿ ಬಿವಿ.ಸತೀಶ್‌ಗೌಡ ಮಾತನಾಡಿ, ಇದೇ ಪ್ರಥಮ ಬಾರಿಗೆ ಬೆಂಗಳೂರು ಹಾಲು ಒಕ್ಕೂಟದ ಚುನಾವಣೆಗೆ ಸ್ಪರ್ಧಿಸಿದ್ದು, ಮಾಜಿ ಸಂಸದ ಬಿ.ಎನ್.ಬಚ್ಚೇಗೌಡರು ಹಾಕಿ ಕೊಟ್ಟಿರುವ ಸಹಕಾರ ಕ್ಷೇತ್ರದ ಅಭಿವೃದ್ಧಿ ಮಾರ್ಗದಲ್ಲಿ ನಡೆಯುತ್ತೇನೆ. ಪ್ರಮುಖವಾಗಿ ತಾಲೂಕಿನಲ್ಲಿ ಪಶು ಆಹಾರ ಘಟಕ ಸ್ಥಾಪನೆ ಸೇರಿದಂತೆ ಬಮೂಲ್ ಶೀಥಲ ಕೇಂದ್ರದ ಮತ್ತಷ್ಟು ಅಭಿವೃದ್ಧಿ ಚಿಂತನೆ ಹೊಂದಿದ್ದು ತನ್ನನ್ನು ಸಹಕರಿಸುವಂತೆ ಮನವಿ ಮಾಡಿದರು.
ಬಿಎಂಆರ್‌ಡಿಎ ಅಧ್ಯಕ್ಷ ಕೇಶವಮೂರ್ತಿ, ಸದಸ್ಯ ಡಾ.ಎಚ್.ಎಂ.ಸುಬ್ಬರಾಜ್, ನಗರ ಕಾಂಗ್ರೆಸ್ ಅಧ್ಯಕ್ಷ ಬಿವಿ.ಭೈರೇಗೌಡ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೃಷ್ಣಮೂರ್ತಿ ಇತರರಿದ್ದರು.ಫೋಟೋ: 23 ಹೆಚ್‌ಎಸ್‌ಕೆ 3 ಮತ್ತು 4
ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಹೋಬಳಿ ಹಾಗೂ ಕಸಬಾ ಹೋಬಳಿಯ ಡೈರಿ ಅಧ್ಯಕ್ಷರ ಸಭೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಮಾತನಾಡಿದರು.