ಪ್ರಾಮಾಣಿಕ ಸೇವೆಯಿಂದ ಹಾಲು ಒಕ್ಕೂಟ ಲಾಭದತ್ತ

KannadaprabhaNewsNetwork |  
Published : Feb 03, 2026, 01:30 AM IST
ಪೋಟೋ೨ಸಿಎಲ್‌ಕೆ೨ ಚಳ್ಳಕೆರೆ ನಗರದ ಕುರಿಯನ್ ಸಭಾಂಗಣದಲ್ಲಿ ತಾಲ್ಲೂಕು ಹಾಲು ಉತ್ಪಾದಕರ ಸಹಕಾರಸಂಘದ ಕಾರ್ಯದರ್ಶಿಗಳ ಮಾಸಿಕಪ್ರಗತಿಪರಿಶೀಲನಾ ಸಭೆಯಲ್ಲಿ ಕಾರ್ಯದರ್ಶಿಗಳಿಗೆ ಬ್ಯಾಗ್ ವಿತರಿಸಲಾಯಿತು. | Kannada Prabha

ಸಾರಾಂಶ

ಚಳ್ಳಕೆರೆ ನಗರದ ಕುರಿಯನ್ ಸಭಾಂಗಣದಲ್ಲಿ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾರ್ಯದರ್ಶಿಗಳಿಗೆ ಬ್ಯಾಗ್ ವಿತರಿಸಲಾಯಿತು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಶಿವಮೊಗ್ಗ ಹಾಲು ಒಕ್ಕೂಟ ವ್ಯಾಪ್ತಿಯ ಕುರಿಯನ್ ಸಭಾಂಗಣದಲ್ಲಿ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಒಕ್ಕೂಟದ ಜಿಲ್ಲಾ ನಿರ್ದೇಶಕ ಬಿ.ಸಿ.ಸಂಜೀವಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಪ್ರಗತಿಯ ಜೊತೆಗೆ ಸಾಧನೆಯ ಬಗ್ಗೆಯೂ ಪರಿಶೀಲನೆ ನಡೆಸಲಾಯಿತು. ಗ್ರಾಮೀಣ ಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುತ್ತಾ ಬಂದಿವೆ. ಇತ್ತೀಚಿನ ದಿನಗಳಲ್ಲಿ ಎಲ್ಲರ ಸಹಕಾರದಿಂದ ಹಾಲು ಒಕ್ಕೂಟಕ್ಕೆ ಪ್ರತಿದಿನ ಬರುವ ಹಾಲಿನ ಪ್ರಮಾಣ ಸಹ ಹೆಚ್ಚುತ್ತಿದೆ. ವಿಶೇಷವಾಗಿ ಗುಣಮಟ್ಟದ ಹಾಲನ್ನು ಹಾಲು ಉತ್ಪಾದಕರ ಸಹಕಾರ ಸಂಘಗಳು ಸರಬರಾಜು ಮಾಡುತ್ತಿರುವುದು ಸಂತಸ ತಂದಿದೆ. ನಿಮ್ಮೆಲ್ಲರ ಪ್ರಾಮಾಣಿಕ ಸೇವೆಯಿಂದ ಒಕ್ಕೂಟ ಲಾಭದತ್ತ ಮುನ್ನಡೆಯಲಿದೆ ಎಂಬ ವಿಶ್ವಾಸ ನನಗಿದೆ ಎಂದು ಸಂಜೀವಮೂರ್ತಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಎಂ.ಪುಟ್ಟರಾಜು, ನಿರ್ದೇಶಕ ರಮೇಶ್, ಓ.ಮಹೇಶ್, ಮಾರ್ಗವಿಸ್ತಾಣಾಧಿಕಾರಿ ನಯಾಜ್‌ ಬೇಗ್, ಸುರೇಶ್‌ ಬಾಬು ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ