ರುದ್ರ ಆರಾಧನೆಯಿಂದ ಮನಸು ನಿಯಂತ್ರಣ: ಶ್ರೀ ವಿದ್ಯಾವಲ್ಲಭ ತೀರ್ಥರು

KannadaprabhaNewsNetwork |  
Published : Apr 18, 2026, 02:30 AM IST
ಬನ್ನಂಜೆ ಮಹಾಲಿಂಗೇಶ್ವರ ದೇವಳದ ಬ್ರಹ್ಮಕವಶೋತ್ಸವ ಧಾರ್ಮಿಕ ಸಭೆಯಲ್ಲಿ ಕಾಣಿಯೂರು ಶ್ರೀಗಳು ಆಶೀರ್ವಚನ ನೀಡಿದರು | Kannada Prabha

ಸಾರಾಂಶ

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

ಉಡುಪಿ: ಮಹಾರುದ್ರ ದೇವರನ್ನು ನಾವು ಭಕ್ತಿಯಿಂದ ಆರಾಧಿಸಿದರೆ ನಮ್ಮ ಮನಸ್ಸನ್ನು ನಿಯಂತ್ರಣದಲ್ಲಿ ಇಡಲು ಸಾಧ್ಯವಿದೆ ಎಂದು ಎಂದು ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿನ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.ಜಗತ್ತಿನ ಕ್ಷೋಭೆ, ಸಮಸ್ಯೆ, ಯುದ್ಧಕ್ಕೆ ನಾಯಕರಲ್ಲಿರುವ ದ್ವೇಷ, ಮತ್ಸರ, ಸ್ವಾರ್ಥವೇ ಮುಖ್ಯ ಕಾರಣ. ಹಾಗಾಗಿ ದೇವರ ಆರಾಧನೆ ಮಾಡುವ ಮೂಲಕ ಇವುಗಳನ್ನು ಮನಸ್ಸಿನಿಂದ ಹೊರಹಾಕಿ ನೆಮ್ಮದಿ, ಶಾಂತಿ ವಾತಾರಣ ಸೃಷ್ಟಿಸಬೇಕು. ತಾಳ್ಮೆ ಕಳೆದುಕೊಳ್ಳದೆ ಉತ್ತಮ ಚಿಂತನೆಗೆ ಗಟ್ಟಿಮನಸ್ಸು ಹೊಂದಲು ದೇವರ ಅನುಗ್ರಹ ಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಬ್ರಹ್ಮಕಲಶೋತ್ಸವ ಸಮಿತಿ ಗೌರವ ಸಲಹೆಗಾರ ಡಾ. ಜಿ. ಶಂಕರ್ ಮಾತನಾಡಿ, ದೇವಸ್ಥಾನದಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಎಲ್ಲ ಭಕ್ತರು ಪಾಲ್ಗೊಳ್ಳುವುದರೊಂದಿಗೆ ತನು, ಮನ, ಧನಾದಿಗಳಿಂದ ಸಹಕರಿಸಬೇಕು. ಜಾಗೃತ ದೇವರಾದ ಶಿವನ ಸೇವೆಗೈಯುತ್ತಾ ಅವನಲ್ಲಿ ಪ್ರಾರ್ಥನೆ ಸಲ್ಲಿಸಿದಾಗ ನಮ್ಮ ಮನೋಕಾಮನೆಗಳು ಈಡೇರಲಿವೆ ಎಂದರು.

ಉದ್ಯಮಿ ಪುರುಷೋತ್ತಮ ಪಿ. ಶೆಟ್ಟಿ, ದಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಧರ್ಮಸ್ಥಳ ಗ್ರಾಮಾಭಿವೃದ್ದಿ ಸಮಿತಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್ ಕಾಂಚನ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ದಿನೇಶ್ ಪುತ್ರನ್, ಎಂ. ಪ್ರಭಾಕರ ಶೆಟ್ಟಿ, ಶೇಖರ ಶೆಟ್ಟಿ, ಯು. ಸುದೇಶ್ ಶೇಟ್, ರಾಜೇಶ್ ಬಿ., ವಿದ್ಯಾಲತಾ ಯು. ಶೆಟ್ಟಿ ಶಮಿತಾ ಎಸ್. ಭಂಡಾರಿ ಇದ್ದರು.

ವಾಸ್ತುತಜ್ಞ ವಿ. ಜಿ. ಸುಬ್ರಹ್ಮಣ್ಯ ಭಟ್ ಗುಂಡಿಬೈಲು ಪ್ರಾಸ್ತಾವಿಕವಾಗಿ ಮಾತನಾಡಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ. ಮಾಧವ ಪೂಜಾರಿ ಸ್ವಾಗತಿಸಿದರು. ಅರ್ಪಿತಾ ಪ್ರಶಾಂತ ಶೆಟ್ಟಿ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಮ್ಮೆಮಾಡು ಮಖಾಂ ಉರೂಸ್‌ಗೆ ಚಾಲನೆ
ಕಾರು-ಬೈಕ್‌ ಡಿಕ್ಕಿ: ಸವಾರ ಸಾವು